AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ ಸೆಮಿಫೈನಲ್​ಗೇರಿದ ಇಂಗ್ಲೆಂಡ್

ICC Women's T20 World Cup 2026: ಐಸಿಸಿ ವುಮೆನ್ಸ್ ಟಿ20 ವಿಶ್ವಕಪ್​ ನಿರ್ಣಾಯಕ ಹಂತಕ್ಕೆ ತಲುಪಿದೆ. ಈಗಾಗಲೇ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದರೆ, ಸ್ಕಾಟ್ಲೆಂಡ್, ಐರ್ಲೆಂಡ್, ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಮತ್ತು ಭಾರತ ತಂಡಗಳ ನಡುವೆ ಸೆಮಿಫೈನಲ್​ ರೇಸ್ ಮುಂದುವರೆದಿದೆ.

ಟಿ20 ವಿಶ್ವಕಪ್​ ಸೆಮಿಫೈನಲ್​ಗೇರಿದ ಇಂಗ್ಲೆಂಡ್
EnglandImage Credit source: GettyImages
ಝಾಹಿರ್ ಯೂಸುಫ್
|

Updated on:Jun 25, 2026 | 7:20 AM

Share

ಮಹಿಳಾ ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಂಗ್ಲರ ಪಡೆ ಸೆಮಿಫೈನಲ್​ಗೇರಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಡ್ಯಾನಿ ವ್ಯಾಟ್-ಹಾಡ್ಜ್ 42 ಎಸೆತಗಳಲ್ಲಿ 8 ಫೋರ್​ಗಳೊಂದಿಗೆ 65 ರನ್ ಬಾರಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಅಲಿಸ್ ಕ್ಯಾಪ್ಸಿ 28 ರನ್​ಗಳ ಕೊಡುಗೆ ನೀಡಿದರೆ, ಅಂತಿಮ ಓವರ್​ಗಳಲ್ಲಿ ಅಬ್ಬರಿಸಿದ ಹೀದರ್ ನೈಟ್ 26 ಎಸೆತಗಳಲ್ಲಿ 7 ಫೋರ್​ಗಳೊಂದಿಗೆ 43 ರನ್​ ಸಿಡಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 186 ರನ್​ ಕಲೆಹಾಕಿತು.

187 ರನ್​ಗಳ ಗುರಿ:

187 ರನ್​ಗಳ ಕಠಿಣ ಗುರಿ ಪಡೆದ ವೆಸ್ಟ್ ಇಂಡೀಸ್​ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 69 ರನ್​ಗಳಿಸುವಷ್ಟರಲ್ಲಿ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಕಣಕ್ಕಿಳಿದ ಶಿನೆಲ್ಲೆ ಹೆನ್ರಿ 30 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 51 ರನ್ ಬಾರಿಸಿದರು.

ಇದಾಗ್ಯೂ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 148 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಇಂಗ್ಲೆಂಡ್ ತಂಡವು 38 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಸೆಮಿಫೈನಲ್​ಗೆ ಎಂಟ್ರಿ:

ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಗ್ರೂಪ್-ಬಿ ಯಿಂದ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇತ್ತ ಸೋತಿರುವ ವೆಸ್ಟ್ ಇಂಡೀಸ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಬೇಕಿದ್ದರೆ ಐರ್ಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕು.

ಮತ್ತೊಂದೆಡೆ ಇಂಗ್ಲೆಂಡ್ ತಂಡದ ಗೆಲುವಿನೊಂದಿಗೆ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್​ನಿಂದ ಹೊರಬಿದ್ದಿದೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಆಮಿ ಜೋನ್ಸ್ (ವಿಕೆಟ್ ಕೀಪರ್ ) ಡ್ಯಾನಿ ವ್ಯಾಟ್-ಹಾಡ್ಜ್ , ಸೋಫಿಯಾ ಡಂಕ್ಲಿ , ಅಲಿಸ್ ಕ್ಯಾಪ್ಸಿ , ಹೀದರ್ ನೈಟ್ , ಫ್ರೇಯಾ ಕೆಂಪ್ , ಡೇನಿಯಲ್ ಗಿಬ್ಸನ್ , ಷಾರ್ಲೆಟ್ ಡೀನ್ (ನಾಯಕಿ) , ಸೋಫಿ ಎಕ್ಲೆಸ್ಟೋನ್ , ಲಿನ್ಸೆ ಸ್ಮಿತ್ , ಲಾರೆನ್ ಬೆಲ್.

ಇದನ್ನೂ ಓದಿ: ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯಲಿರುವ ಭಾರತೀಯ..!

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಹೇಲಿ ಮ್ಯಾಥ್ಯೂಸ್ (ನಾಯಕಿ) , ಡಿಯಾಂಡ್ರಾ ಡಾಟಿನ್ , ಶೆಮೈನ್ ಕ್ಯಾಂಪ್ಬೆಲ್ (ವಿಕೆಟ್ ಕೀಪರ್) , ಸ್ಟೆಫನಿ ಟೇಲರ್ , ಜಹಜಾರಾ ಕ್ಲಾಕ್ಸ್ಟನ್ , ಶಿನೆಲ್ಲೆ ಹೆನ್ರಿ , ಜಾನಿಲಿಯಾ ಗ್ಲ್ಯಾಸ್ಗೋ , ಅಶ್ಮಿನಿ ಮುನಿಸರ್ , ಆಲಿಯಾ ಅಲ್ಲೆಯ್ನೆ , ಅಫಿ ಫ್ಲೆಚರ್ , ಕರಿಷ್ಮಾ ರಾಮ್‌ಹರಾಕ್.

Published On - 7:18 am, Thu, 25 June 26

Follow Us