ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರು ಶನಿವಾರ ಟ್ವೀಟ್ ಮಾಡಿದ್ದು, ಕೊರೊನಾ ಸೋಂಕು ತಗುಲಿರುವ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ ಮುಂಚೆಯೇ ಈ ಸಾಂಕ್ರಾಮಿಕ ರೋಗದಿಂದ ಅನೇಕ ಆಟಗಾರರು ನರಳಿದ್ದಾರೆ.