FIFA World Cup 2022: ವಿಶ್ವ ಗೆದ್ದ ಮೆಸ್ಸಿ; ಕಾಲ್ಚೆಂಡಿನ ಚತುರನಿಗೆ ಗೆಲುವಿನ ವಿದಾಯ ಹೇಳಿದ ಅರ್ಜೆಂಟೀನಾ!

FIFA World Cup 2022: ಇತ್ತ, ರಷ್ಯಾದಲ್ಲಿ ನಡೆದ ಕಳೆದ ಆವೃತ್ತಿಯ ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದಿದ್ದ ಫ್ರಾನ್ಸ್ ತಂಡಕ್ಕೆ ತನ್ನ ಹಾಲಿ ಚಾಂಪಿಯನ್ ಪಟ್ಟವನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

FIFA World Cup 2022: ವಿಶ್ವ ಗೆದ್ದ ಮೆಸ್ಸಿ; ಕಾಲ್ಚೆಂಡಿನ ಚತುರನಿಗೆ ಗೆಲುವಿನ ವಿದಾಯ ಹೇಳಿದ ಅರ್ಜೆಂಟೀನಾ!
argentina vs croatia
Follow us
TV9 Web
| Updated By: ಪೃಥ್ವಿಶಂಕರ

Updated on:Dec 19, 2022 | 12:07 AM

ಭಾನುವಾರ ಕತಾರ್‌ನ ಲುಸೇಲ್ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್ 2022 (FIFA World Cup 2022)ರ ಅಂತಿಮ ಪಂದ್ಯದಲ್ಲಿ ಪೆನಾಲ್ಟಿ ಶೂಟ್-ಔಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳ ಅಂತರದಲ್ಲಿ ಸೋಲಿಸುವುದರೊಂದಿಗೆ ಅರ್ಜೆಂಟೀನಾ ತಂಡ (Argentina vs France) ಮೂರನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿದೆ. ಈ ವಿಶ್ವಕಪ್ ಗೆಲುವಿನೊಂದಿಗೆ ಮೆಸ್ಸಿ (Lionel Messi) ತಮ್ಮ ಅಂತರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ಫೈನಲ್ ಪಂದ್ಯ ತನ್ನ ಅಂತರಾಷ್ಟ್ರೀಯ ವೃತ್ತಿ ಜೀವನದ ಕೊನೆಯ ಪಂದ್ಯವಾಗಲಿದೆ ಎಂದು ಮೆಸ್ಸಿ ಈಗಾಗಲೇ ಹೇಳಿದ್ದರು. ಮೆಸ್ಸಿ ಅವರ ಸಂಪುಟದಲ್ಲಿ ವಿಶ್ವಕಪ್ ಟ್ರೋಫಿ ಇರಲಿಲ್ಲ, ಈಗ ಅದು ಕೂಡ ಮೆಸ್ಸಿ ಖಾತೆಗೆ ಜಮಾವಣೆಗೊಂಡಿದೆ. ಇದರೊಂದಿಗೆ ಮೆಸ್ಸಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದ ಅರ್ಜೆಂಟೀನಾ ತನ್ನ 36 ವರ್ಷಗಳ ವಿಶ್ವಕಪ್ ಬರವನ್ನು ನೀಗಿಸಿಕೊಂಡಿದೆ.

ಇತ್ತ, ರಷ್ಯಾದಲ್ಲಿ ನಡೆದ ಕಳೆದ ಆವೃತ್ತಿಯ ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದಿದ್ದ ಫ್ರಾನ್ಸ್ ತಂಡಕ್ಕೆ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ವೇಳೆ ಫ್ರಾನ್ಸ್ ಈ ಬಾರಿಯೂ ಚಾಂಪಿಯನ್ ಪಟ್ಟಕ್ಕೇರಿದ್ದರೆ, ಬ್ರೆಜಿಲ್ ಹಾಗೂ ಇಟಲಿ ನಂತರ ಸತತ ಎರಡು ಪ್ರಶಸ್ತಿಗಳನ್ನು ಗೆದ್ದ ತಂಡವಾಗುತ್ತಿತ್ತು. ಈ ಮೊದಲು ಇಟಲಿ 1934 ಮತ್ತು 1938 ರಲ್ಲಿ ಸತತ ಎರಡು ಬಾರಿ ಪ್ರಶಸ್ತಿಯನ್ನು ಗೆದ್ದಿತ್ತು. ಬಳಿಕ ಬ್ರೆಜಿಲ್ 1958 ಮತ್ತು 1962 ರಲ್ಲಿ ಸತತ ಎರಡು ಬಾರಿ ವಿಶ್ವಕಪ್ ಗೆದ್ದಿತು.

ಅರ್ಜೆಂಟೀನಾ ಪಂದ್ಯದ ಮೊದಲಾರ್ಧದಲ್ಲಿಯೇ ಎರಡು ಗೋಲುಗಳನ್ನು ಗಳಿಸುವಲ್ಲಿ ಯಶಸ್ವಿಯಾಯಿತು. ಇದರ ನಂತರ, ಕೈಲಿಯನ್ ಎಂಬಪ್ಪೆ ಕೇವಲ 97 ಸೆಕೆಂಡುಗಳಲ್ಲಿ ಎರಡು ಗೋಲುಗಳನ್ನು ಗಳಿಸುವ ಮೂಲಕ ದ್ವಿತೀಯಾರ್ಧದಲ್ಲಿ ಫ್ರಾನ್ಸ್ ತಂಡವನ್ನು ಮತ್ತೆ ಪಂದ್ಯದಲ್ಲಿ ಜೀವಂತವಾಗಿರಿಸಿದರು. ಆದರೆ ಮೆಸ್ಸಿ ಹೆಚ್ಚುವರಿ ಸಮಯದಲ್ಲಿ ಗೋಲು ಗಳಿಸುವ ಮೂಲಕ ಮತ್ತೆ ಅರ್ಜೆಂಟೀನಾ ತಂಡಕ್ಕೆ ಮುನ್ನಡೆ ತಂದುಕೊಟ್ಟರು. ನಂತರ ಎಂಬಪ್ಪೆ ಕೂಡ ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸುವ ಮೂಲಕ ಮತ್ತೆ ಪಂದ್ಯದಲ್ಲಿ ಸಮಬಲ ಸಾಧಿಸಿದರು. ಹೀಗಾಗಿ ಪಂದ್ಯ ಪೆನಾಲ್ಟಿ ಹಂತಕ್ಕೆ ತಲುಪಿತು.

ಫಿಫಾ ವಿಶ್ವಕಪ್ ಟ್ರೋಫಿ ಅನಾವರಣಗೊಳಿಸಿದ ದೀಪಿಕಾ; ಕಾರ್ಯಕ್ರಮ ನೀಡಿದ ನೋರಾ ಫತೇಹಿ; ಫೋಟೋ

2. ಪೆನಾಲ್ಟಿ ಶೂಟೌಟ್‌ನಲ್ಲಿ ಗೆದ್ದ ಅರ್ಜೆಂಟೀನಾ

ಪೆನಾಲ್ಟಿಯಲ್ಲಿ ಫ್ರಾನ್ಸ್‌ನ ಕೈಲಿಯನ್ ಎಂಬಪ್ಪೆ ಮೊದಲ ಗೋಲು ಬಾರಿಸುವಲ್ಲಿ ಯಶಸ್ವಿಯಾದರು. ನಂತರ ಅರ್ಜೆಂಟೀನಾ ಪರ ಮೆಸ್ಸಿ ಕೂಡ ಗೋಲು ಬಾರಿಸಿದರು. ಇದಾದ ನಂತರ ಫ್ರಾನ್ಸ್​ ಪರ ಎರಡನೇ ಪೆನಾಲ್ಟಿ ಶೂಟೌಟ್ ಮಾಡಲು ಬಂದ ಮಾರ್ಟಿನೆಜ್ ಕೋಮನ್ ಅವರ ಕಿಕ್ ಅನ್ನು ತಡೆಯುವಲ್ಲಿ ಅರ್ಜೆಂಟೀನಾದ ಗೋಲ್‌ಕೀಪರ್ ಯಶಸ್ವಿಯಾದರು. ಬಳಿಕ ಅರ್ಜೆಂಟೀನಾ ಪರ ಡೈಬಾಲಾ ಎರಡನೇ ಗೋಲು ಗಳಿಸಿದರು.

ಹಾಗೆಯೇ ಫ್ರಾನ್ಸ್ ಪರ ಚುಮೇನಿ ಬಾರಿಸಿದ ಮೂರನೇ ಪೆನಾಲ್ಟಿ ಕಿಕ್ ಅನ್ನು ಸಹ ಅರ್ಜೆಂಟೀನಾದ ಗೋಲ್‌ಕೀಪರ್ ಮಾರ್ಟಿನೆಜ್ ತಡೆದರು. ಇದಾದ ನಂತರ ಅರ್ಜೆಂಟೀನಾ ಪರ ಪರೆಡೆಸ್ ಮೂರನೇ ಗೋಲು ಗಳಿಸಿದರು. ಆದರೆ 2 ಮತ್ತು 3 ನೇ ಪೆನಾಲ್ಟಿ ಶೂಟೌಟನ್ನು ಗೋಲಾಗಿ ಪರಿವರ್ತಿಸುವಲ್ಲಿ ವಿಫಲವಾಗಿದ್ದ ಫ್ರಾನ್ಸ್ ನಾಲ್ಕನೇ ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಯಿತು. ಫ್ರಾನ್ಸ್ ಪರ ಕೊಲೊ ಮುವಾನಿ 2ನೇ ಗೋಲು ಗಳಿಸಿದರು. ಅಂತಿಮವಾಗಿ ಮೊಂಟಿಯೆಲ್ ಅರ್ಜೆಂಟೀನಾ ಪರ 4ನೇ ಗೋಲು ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು.

3. ಮೆಸ್ಸಿಗೆ ಮೊದಲ ಗೋಲು

ಪಂದ್ಯದ 23ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸುವಲ್ಲಿ ಅರ್ಜೆಂಟೀನಾ ಯಶಸ್ವಿಯಾಯಿತು. ಇಲ್ಲಿ ಮೆಸ್ಸಿ ತನ್ನ ತಂಡಕ್ಕೆ ಮೊದಲು ಗೋಲು ಗಳಿಸಿದರು. ಬಳಿಕ ಇಲ್ಲಿಗೆ ನಿಲ್ಲದ ಅರ್ಜೆಂಟೀನಾ, 36ನೇ ನಿಮಿಷದಲ್ಲಿ ಎರಡನೇ ಗೋಲು ಗಳಿಸುವಲ್ಲಿ ಯಶಸ್ವಿಯಾಯಿತು. ಇಲ್ಲಿ ಡಿಮಾರಿಯಾ ತಂಡಕ್ಕೆ ಎರಡನೇ ಗೋಲು ತಂದಿತ್ತರು. ಮೊದಲಾರ್ಧದಲ್ಲಿ ಒಂದು ಮಿಲಿಯನ್ ಪ್ರಯತ್ನಗಳ ನಂತರವೂ ಫ್ರಾನ್ಸ್ ಒಂದೇ ಒಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಪಂದ್ಯದ ಮೊದಲಾರ್ಧವನ್ನು ಅರ್ಜೆಂಟೀನಾ ತಂಡವು 2-0 ಗೋಲುಗಳೊಂದಿಗೆ ಕೊನೆಗೊಳಿಸಿತು.

4. ಎಂಬಪ್ಪೆ ಹ್ಯಾಟ್ರಿಕ್ ಗೋಲು

ಪಂದ್ಯದ ದ್ವಿತೀಯಾರ್ಧದಲ್ಲೂ ಫ್ರಾನ್ಸ್ ತಂಡಕ್ಕೆ ನಿರೀಕ್ಷಿತ ರೀತಿಯ ಆಟ ಪ್ರದರ್ಶಿಸಲು ಆರಂಭದಲ್ಲಿ ಸಾಧ್ಯವಾಗಿರಲಿಲ್ಲ. ಆದರೆ ಪಂದ್ಯದ 71 ನೇ ನಿಮಿಷದಲ್ಲಿ ಎಂಬಪ್ಪೆ ಮೊದಲ ಬಾರಿಗೆ ಗೋಲ್‌ಪೋಸ್ಟ್ ಮಾಡಿದರು. ಬಳಿಕ 79ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿಯನ್ನು ಎಂಬಪ್ಪೆ, ಗೋಲಾಗಿ ಪರಿವರ್ತಿಸಿ ಫ್ರಾನ್ಸ್‌ನ ಭರವಸೆಯನ್ನು ಜೀವಂತವಾಗಿಟ್ಟರು. ಇಲ್ಲಿಂದ ಫ್ರಾನ್ಸ್ ತಂಡದಲ್ಲಿ ಆತ್ಮವಿಶ್ವಾಸ ಮೂಡಲು ಪ್ರಾರಂಭವಾಯಿತು. ಅದರ ಪರಿಣಾಮ ಮುಂದಿನ ಕೆಲವೇ ನಿಮಿಷಗಳಲ್ಲಿ ಅಂದರೆ ಪಂದ್ಯದ 81ನೇ ನಿಮಿಷದಲ್ಲಿ ಎಂಬಪ್ಪೆ ಅತ್ಯುತ್ತಮ ಗೋಲು ಗಳಿಸಿ ತಂಡವನ್ನು ಸಮಸ್ಥಿತಿಗೆ ತಂದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:29 pm, Sun, 18 December 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ