AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hockey World Cup: 2ನೇ ಸುತ್ತಿಗೆ ಭಾರತ ವನಿತಾ ಪಡೆ; ವಿಶ್ವಕಪ್‌ನಿಂದ ಇಂಗ್ಲೆಂಡ್‌ ಔಟ್

FIH Hockey World Cup 2026: ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯುತ್ತಿರುವ 2026ರ FIH ಹಾಕಿ ವಿಶ್ವಕಪ್‌ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಎರಡನೇ ಸುತ್ತಿಗೆ ಭರ್ಜರಿ ಪ್ರವೇಶ ಪಡೆದಿವೆ. ಮಹಿಳಾ ತಂಡ ಇಂಗ್ಲೆಂಡ್ ವಿರುದ್ಧ ಡ್ರಾ ಸಾಧಿಸಿ, ಚೀನಾ ಜೊತೆ ಪೂಲ್ ಡಿಯಲ್ಲಿ ಎರಡನೇ ಸ್ಥಾನ ಗಳಿಸಿತು. ಪುರುಷರ ತಂಡ ಪಾಕಿಸ್ತಾನವನ್ನು ಸೋಲಿಸಿ ಮುಂದೆ ಸಾಗಿದೆ. ಎರಡೂ ತಂಡಗಳ ಸೆಮಿಫೈನಲ್ ಕನಸು ಈಗ ಮುಂದಿನ ಸುತ್ತಿನ ಪ್ರದರ್ಶನವನ್ನು ಅವಲಂಬಿಸಿದೆ.

Hockey World Cup: 2ನೇ ಸುತ್ತಿಗೆ ಭಾರತ ವನಿತಾ ಪಡೆ; ವಿಶ್ವಕಪ್‌ನಿಂದ ಇಂಗ್ಲೆಂಡ್‌ ಔಟ್
India Hockey
ಪೃಥ್ವಿಶಂಕರ
|

Updated on: Aug 21, 2026 | 3:38 PM

Share

ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯುತ್ತಿರುವ 2026 ರ ಎಫ್ಐಎಚ್ ಹಾಕಿ ವಿಶ್ವಕಪ್‌ನಲ್ಲಿ (FIH Hockey World Cup 2026) ಭಾರತದ ಪುರುಷ ಮತ್ತು ಮಹಿಳಾ ತಂಡಗಳು ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿವೆ. ಏಕಕಾಲದಲ್ಲಿ ನಡೆಯುತ್ತಿರುವ ಎರಡೂ ವಿಶ್ವಕಪ್‌ಗಳಲ್ಲಿ, ಭಾರತದ ಉಭಯ ತಂಡಗಳು ಮೊದಲ ಸುತ್ತಿನಲ್ಲಿ ಉತ್ತಮ ಪ್ರದರ್ಶನ ನೀಡಿ ಎರಡನೇ ಸುತ್ತಿಗೆ ಅರ್ಹತೆ ಪಡೆದುಕೊಂಡಿವೆ. ಪುರುಷರ ತಂಡ ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಎರಡನೇ ಸುತ್ತಿಗೆ ಎಂಟ್ರಿ ಪಡೆದುಕೊಂಡರೆ, ಇತ್ತ ಭಾರತದ ವನಿತೆಯರ ತಂಡ ಇಂಗ್ಲೆಂಡ್‌ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಎರಡನೇ ಸುತ್ತಿಗೆ ಅರ್ಹತೆ ಪಡೆದಿದೆ.

ಮೊದಲ ಸುತ್ತಿನ ಪ್ರದರ್ಶನ ಹೀಗಿತ್ತು

ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಚೀನಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಮಹಿಳಾ ತಂಡ, ತನ್ನ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 6-1 ಗೋಲುಗಳಿಂದ ಏಕಪಕ್ಷೀಯ ರೀತಿಯಲ್ಲಿ ಸೋಲಿಸಿ ಮುಂದಿನ ಸುತ್ತಿಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತ್ತು. ಆದಾಗ್ಯೂ ಇಂಗ್ಲೆಂಡ್‌ ವಿರುದ್ಧದ ಪಂದ್ಯದ ಫಲಿತಾಂಶ ಎರಡೂ ತಂಡಗಳಿಗೆ ನಿರ್ಣಾಯಕವಾಗಿತ್ತು. ಏಕೆಂದರೆ ಎರಡೂ ತಂಡಗಳು ಮುಂದಿನ ಸುತ್ತಿಗೆ ಮುನ್ನಡೆಯುವ ಅವಕಾಶವನ್ನು ಹೊಂದಿದ್ದವು.

ಭಾರತಕ್ಕೆ ಗೆಲುವು ಅಥವಾ ಡ್ರಾ ಬೇಕಿತ್ತು

ಭಾರತ ತಂಡ ಈಗಾಗಲೇ ಇಂಗ್ಲೆಂಡ್‌ಗಿಂತ ನಾಲ್ಕು ಅಂಕಗಳ ಮುಂದಿತ್ತು. ಆದ್ದರಿಂದ, ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು ಇಲ್ಲದಿದ್ದರೆ ಡ್ರಾ ಅಗತ್ಯವಿತ್ತು. ಭಾರತ ತಂಡ ಗೆಲ್ಲಲು ಪ್ರಯತ್ನಿಸಿತ್ತಾದರೂ ಅದರಲ್ಲಿ ಸಫಲವಾಗಲಿಲ್ಲ. ಆದಾಗ್ಯೂ, ಭಾರತ ತಂಡ ಇತ್ತ ಇಂಗ್ಲೆಂಡ್‌ ಗೆಲುವಿಗೂ ಅವಕಾಶ ಮಾಡಿಕೊಡಲಿಲ್ಲ. ಪರಿಸ್ಥಿತಿ ಹೇಗಿತ್ತೆಂದರೆ, ಭಾರತೀಯ ತಂಡಕ್ಕೆ ಆರು ಪೆನಾಲ್ಟಿ ಕಾರ್ನರ್‌ಗಳು ಸಿಕ್ಕಿತ್ತಾದರೂ ಅವುಗಳಲ್ಲಿ ಯಾವುದನ್ನೂ ಗೋಲಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ, ಇಂಗ್ಲೆಂಡ್ ಕೂಡ 12 ಪೆನಾಲ್ಟಿ ಕಾರ್ನರ್‌ಗಳನ್ನು ಪಡೆದುಕೊಂಡಿತು. ಆದರೆ ಭಾರತ ತಂಡ ರಕ್ಷಣಾ ವಿಭಾಗ ಇಂಗ್ಲೆಂಡ್‌ ತಂಡಕ್ಕೂ ಗೋಲು ಬಾರಿಸಲು ಬಿಡಲಿಲ್ಲ.

ಭಾರತಕ್ಕೆ ಎರಡನೇ ಸ್ಥಾನ

ಅಂತಿಮವಾಗಿ ಎರಡೂ ತಂಡಗಳು ಒಂದೇ ಒಂದು ಗೋಲು ಬಾರಿಸಲು ಸಾಧ್ಯವಾಗದೆ ಪಂದ್ಯವನ್ನು ಡ್ರಾ ಮಾಡಿಕೊಂಡವು. ಆದಾಗ್ಯೂ ಈ ಫಲಿತಾಂಶವು ಪೂಲ್ ಡಿಯಲ್ಲಿ ತನ್ನ ಮೂರು ಪಂದ್ಯಗಳನ್ನು ಆಡಿದ ಟೀಂ ಇಂಡಿಯಾಗೆ ಲಾಭವನ್ನು ತಂದುಕೊಟ್ಟಿತು. ಟೀಂ ಇಂಡಿಯಾ ಒಟ್ಟು ಐದು ಅಂಕಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದರೆ, ಮತ್ತೊಂದೆಡೆ ಇಂಗ್ಲೆಂಡ್ ಕೇವಲ ನಾಲ್ಕು ಅಂಕಗಳನ್ನು ಗಳಿಸಿ ಸೆಮಿಫೈನಲ್ ರೇಸ್‌ನಿಂದ ಹೊರಬಿತ್ತು. ಚೀನಾ ಈ ಗುಂಪಿನಲ್ಲಿ ಏಳು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, ಭಾರತದೊಂದಿಗೆ ಮುಂದಿನ ಸುತ್ತಿಗೆ ಮುನ್ನಡೆದಿದೆ. ಟೀಂ ಇಂಡಿಯಾ ಈಗ ಮುಂದಿನ ಸುತ್ತಿನಲ್ಲಿ ಎರಡು ಪಂದ್ಯಗಳನ್ನು ಆಡಬೇಕಾಗಿದೆ. ಈ ಸುತ್ತಿನಲ್ಲಿ ಟೀಂ ಇಂಡಿಯಾ ನೀಡುವ ಪ್ರದರ್ಶನ ಅದರ ಸೆಮಿಫೈನಲ್‌ ಸ್ಥಾನವನ್ನು ನಿರ್ಧರಿಸುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್