Dingko Singh: ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಾಜಿ ಬಾಕ್ಸರ್ ಡಿಂಗ್ಕೊ ಸಿಂಗ್ ನಿಧನ

Dingko Singh: ಡಿಂಗ್ಕೊ 1998 ರಲ್ಲಿ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನ ಗೆದ್ದರು ಮತ್ತು ಅದೇ ವರ್ಷ ಅರ್ಜುನ ಪ್ರಶಸ್ತಿಯನ್ನು ಪಡೆದರು. 2013 ರಲ್ಲಿ, ಅವರು ಕ್ರೀಡೆಯಲ್ಲಿ ನೀಡಿದ ಕೊಡುಗೆಗಾಗಿ ಪದ್ಮಶ್ರೀ ನೀಡಿ ಅವರನ್ನು ಗೌರವಿಸಲಾಯಿತು.

Dingko Singh: ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಾಜಿ ಬಾಕ್ಸರ್ ಡಿಂಗ್ಕೊ ಸಿಂಗ್ ನಿಧನ
ಮಾಜಿ ಬಾಕ್ಸರ್ ಡಿಂಗ್ಕೊ ಸಿಂಗ್
Follow us
|

Updated on:Jun 10, 2021 | 4:33 PM

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಾಜಿ ಬಾಕ್ಸರ್ ಡಿಂಗ್ಕೊ ಸಿಂಗ್ (42) ಯಕೃತ್ತಿನ ಕ್ಯಾನ್ಸರ್ ವಿರುದ್ಧದ ಸುದೀರ್ಘ ಹೋರಾಟದಲ್ಲಿ ಸೋತು ಗುರುವಾರ ಇಹಲೋಕ ತ್ಯಜಿಸಿದ್ದಾರೆ. ಅವರು ಕಳೆದ ನಾಲ್ಕು ವರ್ಷಗಳಿಂದ ರೋಗದ ವಿರುದ್ಧ ಹೋರಾಡುತ್ತಿದ್ದರು. ಶ್ರೀ ಡಿಂಗ್ಕೊ ಸಿಂಗ್ ಅವರ ನಿಧನದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಭಾರತವ ನಿರ್ಮಿಸಿದ ಅತ್ಯುತ್ತಮ ಬಾಕ್ಸರ್ಗಳಲ್ಲಿ ಒಬ್ಬರಾದ ಡಿಂಗ್ಕೊ 1998 ರ ಬ್ಯಾಂಕಾಕ್ ಏಷ್ಯನ್ ಕ್ರೀಡಾಕೂಟದಲ್ಲಿ ಡಿಂಕೊ ಅವರ ಚಿನ್ನದ ಪದಕ ಭಾರತದಲ್ಲಿ ಬಾಕ್ಸಿಂಗ್ ಮೇಲೆ ಆಸಕ್ತಿಯನ್ನು ಹುಟ್ಟುಹಾಕಿತು. ದುಃಖಿತ ಕುಟುಂಬಕ್ಕೆ ನನ್ನ ಸಂತಾಪವನ್ನು ಅರ್ಪಿಸುತ್ತೇನೆ. ಆರ್​ಐಪಿ ಡಿಂಕೊ, ಎಂದು ಕ್ರೀಡಾ ಸಚಿವ ಕಿರೆನ್ ರಿಜಿಜು ಟ್ವೀಟ್ ಮಾಡಿದ್ದಾರೆ.

ಚಿಕಿತ್ಸೆಗಾಗಿ ತಮ್ಮ ಮನೆಯನ್ನು ಮಾರಬೇಕಾಯಿತು ಅವರು 2020 ರ ಜನವರಿಯಲ್ಲಿ ದೆಹಲಿ ಆಸ್ಪತ್ರೆಯಲ್ಲಿ ವಿಕಿರಣ ಚಿಕಿತ್ಸೆಯ ನಂತರ ಇಂಫಾಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದರು. ಡಿಂಗ್ಕೊ ಸಿಂಗ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಚಿಕಿತ್ಸೆಗಾಗಿ ಹಣವನ್ನು ಸಂಗ್ರಹಿಸಲು ತಮ್ಮ ಮನೆಯನ್ನು ಮಾರಬೇಕಾಯಿತು. ಆಗ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮುಂದೆ ಬಂದು ಅವರಿಗೆ ಆರ್ಥಿಕವಾಗಿ ಸಹಾಯ ಮಾಡಿದರು.

ಮೂರು ತಿಂಗಳ ನಂತರ ಅವರ ಸ್ಥಿತಿ ಹದಗೆಟ್ಟಾಗ ಡಿಂಗ್ಕೊ ಅವರನ್ನು ಅದೇ ಆಸ್ಪತ್ರೆಗೆ ಮತ್ತೆ ದಾಖಲಿಸಲಾಯಿತು. ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಅಜಯ್ ಸಿಂಗ್ ಸಹಾಯ ನೀಡಿದರು. ಅಗತ್ಯದ ಸಮಯದಲ್ಲಿ, ಡಿಂಗ್ಕೊ ಸಿಂಗ್ ಅವರಿಂದ ಸ್ಫೂರ್ತಿ ಪಡೆದ ಹಲವಾರು ಬಾಕ್ಸರ್ಗಳು ಅವರಿಗೆ ಸಹಾಯ ಮಾಡಲು ಒಗ್ಗೂಡಿದರು. ವಿಜೇಂದರ್ ಸಿಂಗ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತ ಮನೋಜ್ ಕುಮಾರ್ ಅವರ ಚಿಕಿತ್ಸೆಗಾಗಿ ಹಣವನ್ನು ಸಂಗ್ರಹಿಸಿದ್ದರು. ಕೆಲವು ದಿನಗಳ ನಂತರ ಅವರು ಕಾಮಾಲೆ ರೋಗಕ್ಕೆ ತುತ್ತಾಗಿದ್ದರು. ಹಾಗೆಯೇ ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರ ಮೂಲದ ಮಾಜಿ ಬಾಕ್ಸರ್ ಡಿಂಗ್ಕೊ COVID-19 ಗೆ ತುತ್ತಾಗಿದ್ದರು.

ಅದೇ ವರ್ಷ ಅರ್ಜುನ ಪ್ರಶಸ್ತಿ ಡಿಂಗ್ಕೊ 1998 ರಲ್ಲಿ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನ ಗೆದ್ದರು ಮತ್ತು ಅದೇ ವರ್ಷ ಅರ್ಜುನ ಪ್ರಶಸ್ತಿಯನ್ನು ಪಡೆದರು. 2013 ರಲ್ಲಿ, ಅವರು ಕ್ರೀಡೆಯಲ್ಲಿ ನೀಡಿದ ಕೊಡುಗೆಗಾಗಿ ಪದ್ಮಶ್ರೀ ನೀಡಿ ಅವರನ್ನು ಗೌರವಿಸಲಾಯಿತು. ಅವರು ಬಾಕ್ಸಿಂಗ್​ನಿಂದ ನಿವೃತ್ತರಾದ ನಂತರ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಡಿಂಗ್ಕೊ ಸಿಂಗ್ ಭಾರತವನ್ನು ನಿರ್ಮಿಸಿದ ಅತ್ಯುತ್ತಮ ಬಾಕ್ಸರ್ಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. 2018 ರಲ್ಲಿ ಅವರ ಜೀವನವನ್ನು ಬೆಳ್ಳಿ ಪರದೆ ಮೇಲೆ ತರಲಾಗುವುದು ಮತ್ತು ಶಾಹಿದ್ ಕಪೂರ್ ಅವರ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಘೋಷಿಸಲಾಯಿತು.

Published On - 4:32 pm, Thu, 10 June 21

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ