ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮಾಜಿ ಕ್ರಿಕೆಟಿಗ ಬಲಿ
ದೆಹಲಿ: ಕ್ರೂರಿ ಕೊರೊನಾ ವೈರಸ್ ದಾಳಿಗೆ 53 ವರ್ಷದ ದೆಹಲಿಯ ಮಾಜಿ ಕ್ರಿಕೆಟಿಗ ಸಂಜಯ್ ದೋಬಲ್ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ದೋಬಲ್ಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ದೃಢಪಟ್ಟ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದ್ವಾರಕಾ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ನಿಯಂತ್ರಿಸಲು ಸಂಜಯ್ ದೋಬಲ್ಗೆ ಪ್ಲಾಸ್ಮಾ ಚಿಕಿತ್ಸೆ ಸಹ ಮಾಡಲಾಯಿತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಕೊವಿಡ್ನಿಂದ ಸಂಜಯ್ ದೋಬಲ್ ಸಾವಿಗೀಡಾಗಿದ್ದಾರೆ. ಪತ್ನಿ ಮತ್ತು ಇಬ್ಬರು […]
ದೆಹಲಿ: ಕ್ರೂರಿ ಕೊರೊನಾ ವೈರಸ್ ದಾಳಿಗೆ 53 ವರ್ಷದ ದೆಹಲಿಯ ಮಾಜಿ ಕ್ರಿಕೆಟಿಗ ಸಂಜಯ್ ದೋಬಲ್ ಬಲಿಯಾಗಿದ್ದಾರೆ.
ಕಳೆದ ಒಂದು ವಾರದ ಹಿಂದೆ ದೋಬಲ್ಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ದೃಢಪಟ್ಟ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದ್ವಾರಕಾ ಆಸ್ಪತ್ರೆಗೆ ದಾಖಲಾಗಿದ್ದರು.
ಕೊರೊನಾ ನಿಯಂತ್ರಿಸಲು ಸಂಜಯ್ ದೋಬಲ್ಗೆ ಪ್ಲಾಸ್ಮಾ ಚಿಕಿತ್ಸೆ ಸಹ ಮಾಡಲಾಯಿತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಕೊವಿಡ್ನಿಂದ ಸಂಜಯ್ ದೋಬಲ್ ಸಾವಿಗೀಡಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.