ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮಾಜಿ ಕ್ರಿಕೆಟಿಗ ಬಲಿ

ದೆಹಲಿ: ಕ್ರೂರಿ ಕೊರೊನಾ ವೈರಸ್​ ದಾಳಿಗೆ 53 ವರ್ಷದ ದೆಹಲಿಯ ಮಾಜಿ ಕ್ರಿಕೆಟಿಗ ಸಂಜಯ್ ದೋಬಲ್ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ದೋಬಲ್​ಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ದೃಢಪಟ್ಟ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದ್ವಾರಕಾ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ನಿಯಂತ್ರಿಸಲು ಸಂಜಯ್ ದೋಬಲ್​ಗೆ ಪ್ಲಾಸ್ಮಾ ಚಿಕಿತ್ಸೆ ಸಹ ಮಾಡಲಾಯಿತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಕೊವಿಡ್​ನಿಂದ ಸಂಜಯ್ ದೋಬಲ್ ಸಾವಿಗೀಡಾಗಿದ್ದಾರೆ. ಪತ್ನಿ ಮತ್ತು ಇಬ್ಬರು […]

ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಮಾಜಿ ಕ್ರಿಕೆಟಿಗ ಬಲಿ
ಸಾಧು ಶ್ರೀನಾಥ್​ Edited By:

Updated on: Jun 29, 2020 | 6:17 PM

ದೆಹಲಿ: ಕ್ರೂರಿ ಕೊರೊನಾ ವೈರಸ್​ ದಾಳಿಗೆ 53 ವರ್ಷದ ದೆಹಲಿಯ ಮಾಜಿ ಕ್ರಿಕೆಟಿಗ ಸಂಜಯ್ ದೋಬಲ್ ಬಲಿಯಾಗಿದ್ದಾರೆ.

ಕಳೆದ ಒಂದು ವಾರದ ಹಿಂದೆ ದೋಬಲ್​ಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ದೃಢಪಟ್ಟ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದ್ವಾರಕಾ ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೊನಾ ನಿಯಂತ್ರಿಸಲು ಸಂಜಯ್ ದೋಬಲ್​ಗೆ ಪ್ಲಾಸ್ಮಾ ಚಿಕಿತ್ಸೆ ಸಹ ಮಾಡಲಾಯಿತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಕೊವಿಡ್​ನಿಂದ ಸಂಜಯ್ ದೋಬಲ್ ಸಾವಿಗೀಡಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us