Karim Benzema Retired: ಫ್ರಾನ್ಸ್​ನ​ ಸ್ಟಾರ್ ಆಟಗಾರ ಕರೀಂ ಬೆಂಜೆಮಾ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಗುಡ್​ ಬೈ

Karim Benzema Retired ಫ್ರಾನ್ಸ್ ತಂಡದ ಸ್ಟಾರ್ ಆಟಗಾರ, ಬಾಲನ್ ಡಿ ಓರ್ ಪ್ರಶಸ್ತಿ ವಿಜೇತ ಕರೀಂ ಬೆಂಜೆಮಾ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ವಿದಾಯ ಹೇಳಿದ್ದಾರೆ.

Karim Benzema Retired: ಫ್ರಾನ್ಸ್​ನ​ ಸ್ಟಾರ್ ಆಟಗಾರ ಕರೀಂ ಬೆಂಜೆಮಾ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಗುಡ್​ ಬೈ
ಫ್ರಾನ್ಸ್ ಫುಟ್​ಬಾಲ್ ತಂಡದ ಆಟಗಾರ ಕರೀಂ ಬೆಂಜೆಮಾ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 19, 2022 | 11:18 PM

ಫ್ರಾನ್ಸ್ (France) ತಂಡದ ಸ್ಟ್ರೈಕರ್ ಕರೀಂ ಬೆಂಜೆಮಾ (Karim Benzema) ಅವರು ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ಗುಡ್​ ಬೈ ಹೇಳಿದ್ದಾರೆ. ಫಿಫಾ ವರ್ಲ್ಡ್‌ಕಪ್‌ (fifa world cup 2022) ಫೈನಲ್‌ ಪಂದ್ಯದಲ್ಲಿ ಫ್ರಾನ್ಸ್‌ ಸೋಲು ಕಂಡ ಹಿನ್ನೆಲೆಯಲ್ಲಿ 2022ರ ಬಾಲನ್ ಡಿ ಓರ್ ಪ್ರಶಸ್ತಿ ವಿಜೇತ ಕರೀಂ ಬೆಂಜೆಮಾ ನಿವೃತ್ತಿ ಘೋಷಿಸಿದ್ದಾರೆ.

ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್​

ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಬೆಂಜೆಮಾ, ಪ್ರಾನ್ಸ್​ ತಂಡದ ಟ್ರಂಪ್​ ಕಾರ್ಡ್​ ಎಂದು ಭಾವಿಸಲಾಗಿತ್ತು. ಆದ್ರೆ, ಟೂರ್ನಿ ಆರಂಭಕ್ಕೆ ಕೆಲವೇ ದಿನಗಳಿರುವಾಗ ಅಭ್ಯಾಸದ ವೇಳೆ ಗಾಯಗೊಂಡಿದ್ದರು. ಇದರಿಂದ ವಿಶ್ವಕಪ್​ ಹೊರಬಿದ್ದಿದ್ದರು.

ಕರೀಂ ಬೆಂಜೆಮಾ ಅವರು 2007ರಲ್ಲಿ ಅಂತಾರಾಷ್ಟ್ರೀಯ ಫುಟ್​ಬಾಲ್​ಗೆ ಪ್ರವೇಶ ಮಾಡಿದ್ದರು. 2008 ಮತ್ತು 2012ರ ಯುರೋ ಕಪ್​ ಹಾಗೂ 2014ರ ವಿಶ್ವಕಪ್​ ಟೂರ್ನಿಯಲ್ಲಿ ಆಡಿದ್ದರು. 2014ರ ವಿಶ್ವಕಪ್​ನಲ್ಲಿ ಪ್ರಾನ್ಸ್​ ಪರ ಅತಿಹೆಚ್ಚು ಗೋಲು ಬಾರಿಸಿದ ಸಾಧನೆ ಮಾಡಿದ್ದರು. ಬಳಿಕ ವಿವಾದದ ಸುಳಿಯಲ್ಲಿ ಸಿಲುಕಿ ತಂಡದಲ್ಲಿ ಸ್ಥಾನ ಕಳೆದುಕೊಮಡಿದ್ದರಿಂದ 2018ರ ವಿಶ್ವಕಪ್​ ಟೂರ್ನಿಯಲ್ಲಿ ಆಡಿರಲಿಲ್ಲ. ಈಗ ಗಾಯದ ಸಮಸ್ಯೆಯಿಂದ 2022ರ ಫಿಫಾ ವಿಶ್ವಕಪ್​ ಟೂರ್ನಿಯಿಂದ ಔಟ್ ಆಗಬೇಕಾಯಿತು.

ಇತ್ತೀಚೆಗಷ್ಟೇ ಬಾಲನ್ ಡಿ ಓರ್ ಪ್ರಶಸ್ತಿ ಗೆದ್ದಿದ್ದ ಬೆಂಜೆಮಾ

ರಿಯಲ್ ಮ್ಯಾಡ್ರಿಡ್‌ನ ಗೋಲು ಮಶೀನ್ ಕರೀಂ ಬೆಂಜೆಮಾ ಇತ್ತೀಚೆಗಷ್ಟೇ ವೃತ್ತಿಜೀವನದಲ್ಲಿ ಮೊದಲ ಬಾರಿಗೆ, 34ನೇ ವಯಸ್ಸಿನಲ್ಲಿ, ಫುಟ್ಬಾಲ್‌ನ ಅತ್ಯುನ್ನತ ಪ್ರಶಸ್ತಿ ಬಾಲನ್ ಡಿ ಓರ್ ಗೆದ್ದಿದ್ದರು. ಸೆನೆಗಲ್‌ನ ಬೇಯರ್ನ್ ಮ್ಯೂನಿಚ್ ಸೂಪರ್‌ಸ್ಟಾರ್ ಸ್ಯಾಡಿಯೊ ಮಾನೆ, ಬೆಲ್ಜಿಯಂನ ಮ್ಯಾಂಚೆಸ್ಟರ್ ಸಿಟಿ ಮಿಡ್‌ಫೀಲ್ಡ್ ಮಾಸ್ಟರ್ ಕೆವಿನ್ ಡಿ ಬ್ರೂಯ್ನೆ ಮತ್ತು ಪೋಲೆಂಡ್‌ನ ಬಾರ್ಸಿಲೋನಾ ಸ್ಟಾರ್ ಸ್ಟ್ರೈಕರ್ ರಾಬರ್ಟ್ ಲೆವಾಂಡೋಸ್ಕಿ ಅವರನ್ನು ಸೋಲಿಸಿದ ನಂತರ ಬೆಂಜೆಮಾ ಬ್ಯಾಲನ್ ಡಿ’ಓರ್ ಪ್ರಶಸ್ತಿ ಪಡೆದರು. ಜಿನೆಡಿನ್ ಜಿಡಾನೆ 1998 ರಲ್ಲಿ ಪ್ರಶಸ್ತಿ ಗೆದ್ದ ಬಳಿಕ ಈ ಸಾಧನೆ ಮಾಡಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:17 pm, Mon, 19 December 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ