French Open 2021: ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಬಾರ್ಬೊರಾ ಕ್ರೆಜ್ಕಿಕೋವಾ

French Open 2021: ಜೆಕ್ ರಿಪಬ್ಲಿಕ್ ಆಟಗಾರ್ತಿ ಬಾರ್ಬೊರಾ ಕ್ರೆಜ್ಕಿಕೋವಾ ವರ್ಷದ ಎರಡನೇ ಗ್ರ್ಯಾಂಡ್ ಸ್ಲ್ಯಾಮ್ ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.

French Open 2021: ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಬಾರ್ಬೊರಾ ಕ್ರೆಜ್ಕಿಕೋವಾ
ಬಾರ್ಬೊರಾ ಕ್ರೆಜ್ಕಿಕೋವಾ
Follow us
ಪೃಥ್ವಿಶಂಕರ
|

Updated on: Jun 12, 2021 | 9:23 PM

ಜೆಕ್ ರಿಪಬ್ಲಿಕ್ ಆಟಗಾರ್ತಿ ಬಾರ್ಬೊರಾ ಕ್ರೆಜ್ಕಿಕೋವಾ ವರ್ಷದ ಎರಡನೇ ಗ್ರ್ಯಾಂಡ್ ಸ್ಲ್ಯಾಮ್ ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಶನಿವಾರ ನಡೆದ ಅಂತಿಮ ಪಂದ್ಯದಲ್ಲಿ ಅವರು ರಷ್ಯಾದ ಅನಸ್ತಾಸಿಯಾ ಪಾವ್ಲಿಚೆಂಕೋವಾ ಅವರನ್ನು 6-1, 2-6, 6-4 ಸೆಟ್‌ಗಳಿಂದ ಸೋಲಿಸಿದರು. ಸಿಂಗಲ್ಸ್ ವಿಭಾಗದಲ್ಲಿ ಬಾರ್ಬೊರಾ ಅವರ ಮೊದಲ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಇದಾಗಿದೆ. ಇದಕ್ಕೂ ಮೊದಲು, ಸಿಂಗಲ್ಸ್ ವಿಭಾಗದಲ್ಲಿ ಯಾವುದೇ ಗ್ರ್ಯಾಂಡ್ ಸ್ಲ್ಯಾಮ್‌ನ ನಾಲ್ಕನೇ ಸುತ್ತನ್ನು ಮೀರಿ ಹೋಗಲು ಅವರಿಗೆ ಸಾಧ್ಯವಾಗಿರಲಿಲ್ಲ. ಈ ಪಂದ್ಯವನ್ನು ಗೆಲ್ಲಲು ಬಾರ್ಬೊರಾ ಒಂದು ಗಂಟೆ 58 ನಿಮಿಷಗಳನ್ನು ತೆಗೆದುಕೊಂಡರು.

ಸಿಂಗಲ್ಸ್ ವಿಭಾಗದ ಮೊದಲು, ಅವರು ಡಬಲ್ಸ್ ವಿಭಾಗದಲ್ಲಿ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದಿದ್ದಾರೆ. 2018 ರಲ್ಲಿ ಅವರು ಡಬಲ್ಸ್ ವಿಭಾಗದಲ್ಲಿ ಫ್ರೆಂಚ್ ಓಪನ್ ಮತ್ತು ವಿಂಬಲ್ಡನ್ ಪ್ರಶಸ್ತಿಗಳನ್ನು ಗೆದ್ದರು. ಅದೇ ವರ್ಷದಲ್ಲಿ, ಅವರು ಡಬಲ್ಸ್ ವಿಭಾಗದಲ್ಲಿ ಆಸ್ಟ್ರೇಲಿಯನ್ ಓಪನ್ ಫೈನಲ್ ತಲುಪಿದರು ಆದರೆ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಸಿಂಗಲ್ಸ್‌ನಲ್ಲಿ ಅನಸ್ತಾಸಿಯಾ ಆಡಿದ ಮೊದಲ ಗ್ರ್ಯಾಂಡ್‌ಸ್ಲಾಮ್ ಫೈನಲ್ ಇದಾಗಿದ್ದು, ಇದರಲ್ಲಿ ಅವರು ಸೋಲಬೇಕಾಯಿತು.

ಗೆಲುವಿನ ನಂತರ ತುಂಬಾ ಸಂತೋಷವಾಗಿದೆ ಬಾರ್ಬೊರಾ ವಿಜಯದ ನಂತರ ಬಹಳ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ, ನಾನು ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ – ನನ್ನ ತರಬೇತುದಾರ, ನನ್ನ ಪಿಶಿಷಿಯನ್, ನನ್ನ ಸ್ನೇಹಿತರು ಮತ್ತು ಮನೆಯಲ್ಲಿ ಹಾಜರಿದ್ದ ಎಲ್ಲರಿಗೂ. ನನ್ನ ಕುಟುಂಬ, ನನ್ನ ತಾಯಿ, ನನ್ನ ತಂದೆ, ನನ್ನ ಸಹೋದರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ. ಸಂತೋಷವನ್ನು ಪದಗಳಲ್ಲಿ ಹೇಳುವುದು ಕಷ್ಟ, ಏಕೆಂದರೆ ನನಗೆ ಈಗಲೂ ಇದನ್ನು ನಂಬಲಾಗುತ್ತಿಲ್ಲ. ನಾನು ನಿಜವಾಗಿಯೂ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದಿದ್ದೇನೆ ಎಂದು ನಂಬಲು ಸಾಧ್ಯವಿಲ್ಲ. ಇಂದು ಇಲ್ಲಿಗೆ ಬಂದವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದು ಒಂದು ದೊಡ್ಡ ಬೆಂಬಲವಾಗಿದೆ. ಈ ಕಷ್ಟದ ಸಮಯದಲ್ಲಿ ನಿಮ್ಮನ್ನು ನೋಡಲು ಸಂತೋಷವಾಯಿತು ಮತ್ತು ಈ ಸಾಂಕ್ರಾಮಿಕ ಸಮಯದಲ್ಲಿ ಇಲ್ಲಿಗೆ ಬಂದು ನಮಗೆ ಪ್ರೋತ್ಸಾಹ ನೀಡಿದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ