AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

French Open 2021: ಫ್ರಾನ್ಸ್‌ನಲ್ಲಿ ಹೆಚ್ಚಿದ ಕೊರೊನಾ ಪ್ರಕರಣ! ಒಂದು ವಾರ ತಡವಾಗಿ ಪ್ರಾರಂಭವಾಗಲಿದೆ ಫ್ರೆಂಚ್ ಓಪನ್

French Open 2021: ಕೊರೊನಾ ವೈರಸ್​ ಪ್ರಕರಣಗಳು ಹೆಚ್ಚುತ್ತಿರುವ ದೃಷ್ಟಿಯಿಂದ, ಎರಡನೇ ಗ್ರ್ಯಾಂಡ್ ಸ್ಲ್ಯಾಮ್ ಫ್ರೆಂಚ್ ಓಪನ್ ದಿನಾಂಕವನ್ನು ಬದಲಾಯಿಸಲಾಗಿದೆ. ಈ ಬಾರಿ ಪಂದ್ಯಾವಳಿ ಒಂದು ವಾರ ತಡವಾಗಿ ಪ್ರಾರಂಭವಾಗಲಿದೆ

French Open 2021: ಫ್ರಾನ್ಸ್‌ನಲ್ಲಿ ಹೆಚ್ಚಿದ ಕೊರೊನಾ ಪ್ರಕರಣ! ಒಂದು ವಾರ ತಡವಾಗಿ ಪ್ರಾರಂಭವಾಗಲಿದೆ ಫ್ರೆಂಚ್ ಓಪನ್
ಫ್ರೆಂಚ್ ಓಪನ್
ಪೃಥ್ವಿಶಂಕರ
|

Updated on: Apr 08, 2021 | 4:49 PM

Share

ಕೊರೊನಾ ವೈರಸ್​ ಪ್ರಕರಣಗಳು ಹೆಚ್ಚುತ್ತಿರುವ ದೃಷ್ಟಿಯಿಂದ, ಎರಡನೇ ಗ್ರ್ಯಾಂಡ್ ಸ್ಲ್ಯಾಮ್ ಫ್ರೆಂಚ್ ಓಪನ್ ದಿನಾಂಕವನ್ನು ಬದಲಾಯಿಸಲಾಗಿದೆ. ಈ ಬಾರಿ ಪಂದ್ಯಾವಳಿ ಒಂದು ವಾರ ತಡವಾಗಿ ಪ್ರಾರಂಭವಾಗಲಿದೆ ಎಂದು ಸಂಘಟಕರು ಖಚಿತಪಡಿಸಿದ್ದಾರೆ. ಮೇ 23 ರಿಂದ ನಡೆಯಲಿರುವ ಫ್ರೆಂಚ್ ಓಪನ್ ಈ ಬಾರಿ ಮೇ 30 ರಿಂದ ಜೂನ್ 13 ರವರೆಗೆ ನಡೆಯಲಿದೆ. ವಿಳಂಬದಿಂದಾಗಿ, ಕೋವಿಡ್ -19 ರ ಕಾರಣದಿಂದಾಗಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಬಹುದು ಮತ್ತು ಅಭಿಮಾನಿಗಳು ಪಂದ್ಯವನ್ನು ವೀಕ್ಷಿಸಲು ಬರಬಹುದು ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೊರೊನಾದಿಂದಾಗಿ ಕೊನೆಯ ಬಾರಿ ಪಂದ್ಯಾವಳಿ ನಾಲ್ಕು ತಿಂಗಳು ತಡವಾಗಿ ನಡೆಯಿತು. ಇದನ್ನು ಮೇ-ಜೂನ್ ಬದಲಿಗೆ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ಆಡಲಾಯಿತು. ಆ ಸಮಯದಲ್ಲಿ, ಪ್ರತಿದಿನ 1000 ಅಭಿಮಾನಿಗಳಿಗೆ ಪಂದ್ಯವನ್ನು ವೀಕ್ಷಿಸಲು ಅವಕಾಶವಿತ್ತು. ಕಳೆದ ತಿಂಗಳು, ಕೊರೊನಾ ವೈರಸ್ ಕಾರಣದಿಂದಾಗಿ ಫ್ರಾನ್ಸ್ನಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಯಿತು.

ಶನಿವಾರದಿಂದ ಫ್ರಾನ್ಸ್‌ನಲ್ಲಿ ಮೂರನೇ ಲಾಕ್‌ಡೌನ್ ವಿಧಿಸಲಾಗಿದೆ ಕೊರೊನಾ ವೈರಸ್‌ನ ಹೊಸ ಪ್ರಕರಣಗಳು ಹೆಚ್ಚಾದ ಕಾರಣ ಫ್ರೆಂಚ್ ಓಪನ್ ಟೆನಿಸ್ ಗ್ರ್ಯಾಂಡ್‌ಸ್ಲಾಮ್ ಅನ್ನು ಮುಂದೂಡಬಹುದೆಂದು ಫ್ರೆಂಚ್ ಕ್ರೀಡಾ ಸಚಿವ ರೊಕ್ಸಾನಾ ಮರಸಿನಿಯು ಈ ಹಿಂದೆ ಹೇಳಿದ್ದರು. ಶನಿವಾರದಿಂದ ಫ್ರಾನ್ಸ್‌ನಲ್ಲಿ ಮೂರನೇ ರಾಷ್ಟ್ರವ್ಯಾಪಿ ಲಾಕ್‌ಡೌನ್ ಪ್ರಾರಂಭವಾಗಿದೆ ಮತ್ತು ಮೇ ಮಧ್ಯಭಾಗದಲ್ಲಿ ಕೊನೆಗೊಳ್ಳುವ ನಿರೀಕ್ಷೆಯಿದೆ ಎಂದು ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೊ ಅವರು ತಿಳಿಸಿದ್ದಾರೆ. ಫ್ರೆಂಚ್ ಓಪನ್ ಮೇ 23 ರಂದು ಪ್ರಾರಂಭವಾಗಲಿದ್ದು ಜೂನ್ 6 ರವರೆಗೆ ನಡೆಯಲಿದೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ