T20 World Cup: ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತದ ಈ ಇಬ್ಬರು ಕ್ರಿಕೆಟಿಗರು ಜವಬ್ದಾರಿ ಹೊರಬೇಕು; ಗೌತಮ್ ಗಂಭೀರ್

T20 World Cup: ಭಾರತ ಮತ್ತು ಪಾಕಿಸ್ತಾನ ಯಾವಾಗ ಸ್ಪರ್ಧಿಸುತ್ತವೆ, ಆಗ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ಸಾಕಷ್ಟು ಜವಾಬ್ದಾರಿ ಇರುತ್ತದೆ.

T20 World Cup: ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತದ ಈ ಇಬ್ಬರು ಕ್ರಿಕೆಟಿಗರು ಜವಬ್ದಾರಿ ಹೊರಬೇಕು; ಗೌತಮ್ ಗಂಭೀರ್
ಎಬಿಡಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡದೇ ಇರಬಹುದು. ಆದರೆ ಚುಟುಕು ಕ್ರಿಕೆಟ್​ನಲ್ಲಿ ಅತ್ಯಂತ ಬೇಡಿಕೆಯ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಆರ್​ಸಿಬಿ ತಂಡದಲ್ಲಿ ಡಿವಿಲಿಯರ್ಸ್ ಇರುವುದು ನಾಯಕ ವಿರಾಟ್ ಕೊಹ್ಲಿ ಪ್ಲಸ್ ಪಾಯಿಂಟ್ ಎಂದು ಗಂಭೀರ್ ತಿಳಿಸಿದ್ದಾರೆ.
Follow us
TV9 Web
| Updated By: ಪೃಥ್ವಿಶಂಕರ

Updated on: Jul 17, 2021 | 7:18 PM

ಕ್ರಿಕೆಟ್‌ನಲ್ಲಿ ಅತ್ಯಂತ ರೋಚಕ ಮತ್ತು ಪೈಪೋಟಿಯ ಪಂದ್ಯದ ಬಗ್ಗೆ ನಾವು ಮಾತನಾಡಿದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಈ ಎರಡು ತಂಡಗಳು ದೀರ್ಘಕಾಲದಿಂದ ದ್ವಿಪಕ್ಷೀಯ ಸರಣಿಯನ್ನು ಆಡಿಲ್ಲ. ಆದರೆ ಐಸಿಸಿ ಈವೆಂಟ್‌ಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ. ಆದರಿಂದ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ, ಅಭಿಮಾನಿಗಳ ಈ ಕಾಯುವಿಕೆ ಈಗ ಕೊನೆಗೊಳ್ಳಲಿದೆ ಏಕೆಂದರೆ ಈ ವರ್ಷ ಅಕ್ಟೋಬರ್-ನವೆಂಬರ್ ನಡುವೆ ನಡೆಯಲಿರುವ ಟಿ 20 ವಿಶ್ವಕಪ್ ಪಂದ್ಯದ ತಂಡಗಳ ಪಟ್ಟಿಯನ್ನು ಐಸಿಸಿ ಘೋಷಿಸಿದ್ದು, ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ.

ಉಭಯ ತಂಡಗಳು ಕೊನೆಯ ಬಾರಿಗೆ 2019 ರ ವಿಶ್ವಕಪ್‌ನಲ್ಲಿ ಪಂದ್ಯವನ್ನು ಆಡಿದವು. ಅಂದಿನಿಂದ ಸುಮಾರು ಎರಡು ವರ್ಷಗಳ ನಂತರ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಯುವ ಆಟಗಾರರು ಆಡುವುದು ಸುಲಭವಲ್ಲ. ಇಂತಹ ಪರಿಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯದ ಮೊದಲು ಯುವಕರು ಆತಂಕಕ್ಕೆ ಒಳಗಾಗದಿರುವುದು ಹಿರಿಯ ಆಟಗಾರರ ಜವಾಬ್ದಾರಿಯಾಗಿದೆ ಎಂದು ಭಾರತದ ಮಾಜಿ ತಂಡದ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

ದೊಡ್ಡ ಜವಾಬ್ದಾರಿ ರೋಹಿತ್-ವಿರಾಟ್ ಅವರ ಮೇಲಿದೆ ಸ್ಟಾರ್ ಸ್ಪೋರ್ಟ್ಸ್ ಪ್ರದರ್ಶನದಲ್ಲಿ ಗಂಭೀರ್, ನಾನು ಪಾಕಿಸ್ತಾನದ ವಿರುದ್ಧ ನನ್ನ ಮೊದಲ ಪಂದ್ಯವನ್ನು ಆಡಿದಾಗ, ಪಾಕಿಸ್ತಾನದ ವಿರುದ್ಧ ಸಾಕಷ್ಟು ಪಂದ್ಯಗಳನ್ನು ಆಡಿದ ಆಟಗಾರರಿಗೆ ಹೋಲಿಸಿದರೆ ನಾನು ತುಂಬಾ ಉತ್ಸುಕನಾಗಿದ್ದೆ ಮತ್ತು ನರಳುತ್ತಿದ್ದೆ. ಆದ್ದರಿಂದ ಯುವ ಆಟಗಾರರನ್ನು ಶಾಂತವಾಗಿರಿಸುವುದು ಹಿರಿಯ ಆಟಗಾರರ ಜವಾಬ್ದಾರಿಯಾಗಿದೆ. ಏಕೆಂದರೆ ಭಾವನೆಗಳು ನಿಮಗೆ ಪಂದ್ಯಗಳನ್ನು ಗೆಲ್ಲಿಸಿಕೊಡುವುದಿಲ್ಲ. ಇದು ಬ್ಯಾಟ್ ಮತ್ತು ಬಾಲ್ ನಡುವಿನ ಸ್ಪರ್ಧೆಯಾಗಿದೆ. ಆದ್ದರಿಂದ ಭಾರತ ಮತ್ತು ಪಾಕಿಸ್ತಾನ ಯಾವಾಗ ಸ್ಪರ್ಧಿಸುತ್ತವೆ, ಆಗ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ಸಾಕಷ್ಟು ಜವಾಬ್ದಾರಿ ಇರುತ್ತದೆ.

ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿರುವ ಟಿ 20 ವಿಶ್ವಕಪ್ ತಂಡಗಳ ಪಟ್ಟಿಯನ್ನು ಐಸಿಸಿ ಶುಕ್ರವಾರ ಘೋಷಿಸಿದೆ. ಆದಾಗ್ಯೂ, ಗುಂಪು ಎ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ಬಲಿಷ್ಟ ತಂಡಗಳನ್ನು ಒಳಗೊಂಡಿದೆ. ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ಬಿ ಗುಂಪಿನಲ್ಲಿವೆ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್