Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ರಾವಿಡ್ ನಮ್ಮ ಸೂತ್ರವನ್ನು ಅನುಸರಿಸಿದ್ದಾರೆ ಅದಕ್ಕಾಗಿಯೇ ಟೀಂ ಇಂಡಿಯಾ ಇಷ್ಟು ಬಲಿಷ್ಠವಾಗಿದೆ; ಗ್ರೆಗ್ ಚಾಪೆಲ್

ತಿಭೆ ಹುಡುಕಾಟದಲ್ಲಿ ನಾವು ಅತ್ಯುತ್ತಮವಾದ ಸ್ಥಾನವನ್ನು ಕಳೆದುಕೊಂಡಿದ್ದೇವೆ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಕಾರ ಭಾರತವು ನಮಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.

ದ್ರಾವಿಡ್ ನಮ್ಮ ಸೂತ್ರವನ್ನು ಅನುಸರಿಸಿದ್ದಾರೆ ಅದಕ್ಕಾಗಿಯೇ ಟೀಂ ಇಂಡಿಯಾ ಇಷ್ಟು ಬಲಿಷ್ಠವಾಗಿದೆ; ಗ್ರೆಗ್ ಚಾಪೆಲ್
ಗ್ರೆಗ್ ಚಾಪೆಲ್, ರಾಹುಲ್ ದ್ರಾವಿಡ್
Follow us
ಪೃಥ್ವಿಶಂಕರ
| Updated By: Skanda

Updated on: May 13, 2021 | 9:38 AM

ಟೀಮ್ ಇಂಡಿಯಾಕ್ಕೆ ಫೀಡರ್ ಲೈನ್ ಆಗಿ ಕಾರ್ಯನಿರ್ವಹಿಸುತ್ತಿರುವ ಬಲವಾದ ದೇಶೀಯ ಯುವ ತಂಡವನ್ನು ರಚಿಸಲು ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾದ ಸೂತ್ರವನ್ನು ಅನುಸರಿಸಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ಮತ್ತು ಭಾರತದ ಮುಖ್ಯ ತರಬೇತುದಾರ ಗ್ರೆಗ್ ಚಾಪೆಲ್ ಹೇಳಿದ್ದಾರೆ. ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಭಾರತ ಎ ಮತ್ತು 19 ವರ್ಷದೊಳಗಿನವರ ತಂಡಗಳ ಮುಖ್ಯ ತರಬೇತುದಾರರಾಗಿ ಹಲವಾರು ಯುವ ಪ್ರತಿಭೆಗಳನ್ನು ಬೆಳೆಸಿದ್ದಾರೆ. ಪ್ರಸ್ತುತ, ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ಅಲ್ಲಿ ಆಟಗಾರರ ಅಭಿವೃದ್ಧಿಯ ಹಿಂದೆ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಕ್ರಿಕೆಟ್ ಡಾಟ್ ಕಾಮ್ ಜೊತೆಗಿನ ಸಂಭಾಷಣೆಯಲ್ಲಿ ಚಾಪೆಲ್, ಯುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಮತ್ತು ಯಶಸ್ವಿಯಾಗಲು ಒಂದು ವೇದಿಕೆಯನ್ನು ಒದಗಿಸುವಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ಆಸ್ಟ್ರೇಲಿಯಾವನ್ನು ಹಿಂದಿಕ್ಕಿದೆ ಎಂದು ಹೇಳಿದರು.

ಯುವ ಆಟಗಾರರಿಗೆ ಅವಕಾಶಗಳು ಸಿಗುತ್ತಿಲ್ಲ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಚಾಪೆಲ್, ದೇಶೀಯ ರಚನೆಯು ತಮ್ಮ ವೃತ್ತಿಜೀವನದಲ್ಲಿ ಪ್ರತಿಭಾವಂತ ಆಸ್ಟ್ರೇಲಿಯಾದ ಕ್ರಿಕೆಟಿಗರಿಗೆ ಕಷ್ಟಕರವಾಗಬಹುದು ಎಂದು ಎಚ್ಚರಿಸಿದ್ದಾರೆ. ಐತಿಹಾಸಿಕವಾಗಿ ನಾವು ಯುವ ಆಟಗಾರರನ್ನು ಸಿದ್ಧಪಡಿಸುವಲ್ಲಿ ಅತ್ಯುತ್ತಮರಾಗಿದ್ದೇವೆ ಮತ್ತು ಅವರನ್ನು ಸದುಪಯೋಗಪಡಿಸಿಕೊಂಡಿದ್ದೇವೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಇದು ಬದಲಾಗಿದೆ ಎಂದು ನಾನು ಭಾವಿಸುತ್ತೇನೆ. ನಾನು ಸಾಕಷ್ಟು ಪ್ರತಿಭೆಗಳನ್ನು ಹೊಂದಿರುವ ಯುವ ಆಟಗಾರರ ಗುಂಪನ್ನು ನೋಡಿದ್ದೇನೆ ಆದರೆ ಅವರಿಗೆ ಅವಕಾಶಗಳು ಸಿಗುತ್ತಿಲ್ಲ. ಇದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದಿದ್ದಾರೆ.

ಎರಡನೇ ದರ್ಜೆಯ ಭಾರತ ಆಸ್ಟ್ರೇಲಿಯಾವನ್ನು ಸೋಲಿಸಿತು ಪ್ರತಿಭೆಯನ್ನು ಗುರುತಿಸುವಲ್ಲಿ ಆಸ್ಟ್ರೇಲಿಯಾ ತಮ್ಮನ್ನು ತಾವು ಅತ್ಯುತ್ತಮವೆಂದು ಕರೆಯುವ ಹಕ್ಕನ್ನು ಕಳೆದುಕೊಂಡಿದೆ ಎಂದು ಚಾಪೆಲ್ ಹೇಳಿದರು. ಪ್ರತಿಭೆ ಹುಡುಕಾಟದಲ್ಲಿ ನಾವು ಅತ್ಯುತ್ತಮವಾದ ಸ್ಥಾನವನ್ನು ಕಳೆದುಕೊಂಡಿದ್ದೇವೆ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಕಾರ ಈಗ ಇಂಗ್ಲೆಂಡ್ ನಮಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಭಾರತವು ನಮಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಈ ವರ್ಷದ ಆರಂಭದಲ್ಲಿ, ಹಲವಾರು ಪ್ರಮುಖ ಆಟಗಾರರ ಇಂಜುರಿಯಿಂದಾಗಿ, ಭಾರತದ ಎರಡನೇ ದರ್ಜೆಯ ತಂಡವು ತಮ್ಮ ಸ್ವಂತ ನೆಲದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡಿತು.

ಭಾರತದಲ್ಲಿ ಆಟಗಾರರು ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದ್ದಾರೆ ಭಾರತವು ಅತ್ಯಂತ ಪರಿಣಾಮಕಾರಿ ಆಟಗಾರರ ಅಭಿವೃದ್ಧಿ ವ್ಯವಸ್ಥೆಯನ್ನು ತೋರಿಸಿದೆ ಮತ್ತು ಅವರ ಯುವ ಆಟಗಾರರಿಗೂ ವ್ಯಾಪಕವಾದ ಅಂತರರಾಷ್ಟ್ರೀಯ ಅನುಭವವಿದೆ ಎಂದು ಚಾಪೆಲ್ ಹೇಳಿದರು. ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಆಡಿದ ಭಾರತೀಯ ತಂಡವನ್ನು ನೋಡಿದರೆ, ಅದರಲ್ಲಿ ಮೂರು ಅಥವಾ ನಾಲ್ಕು ಹೊಸ ಆಟಗಾರರು ಇದ್ದರು ಮತ್ತು ಎಲ್ಲರೂ ಇದು ಭಾರತದ ಎರಡನೇ ಇಲೆವೆನ್ ಎಂದು ಹೇಳಿದರು. ಆದರೆ ಅವರು ಆಸಿಸ್ ನಾಡಲ್ಲಿ ಉತ್ತಮ ಪ್ರದರ್ಶನ ತೋರಿದ್ದರು ಎಂದಿದ್ದಾರೆ.

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ