ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಯುವಕ ಆತ್ಮಹತ್ಯೆ..!

ಕೋಲ್ಕತ್ತಾದ ನಗರ ಭಾಗದಲ್ಲಿರುವ ಈಡನ್ ಗಾರ್ಡನ್ಸ್ ಕ್ರೀಡಾಂಗಣವು ಭಾರತದ ಅತ್ಯಂತ ಹಳೆಯ ಮತ್ತು ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಡೇಡಿಯಂ ಆಗಿದೆ. ಹಾಗೆಯೇ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ. ಈ ಸ್ಟೇಡಿಯಂ ಅನ್ನು ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ "ಲಾರ್ಡ್ಸ್ ಆಫ್ ದಿ ಸಬ್​ಕಾಂಟಿನೆಂಟ್" ಎಂದು ವರ್ಣಿಸಿದ್ದರು.

ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಯುವಕ ಆತ್ಮಹತ್ಯೆ..!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 18, 2023 | 1:21 PM

ಕೊಲ್ಕತ್ತಾದ ಈಡನ್ ಗಾರ್ಡನ್ಸ್ (Eden Gardens) ಸೇಡಿಯಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸೋಮವಾರ ಬೆಳಿಗ್ಗೆ ಸ್ಟೇಡಿಯಂ ಸಿಬ್ಬಂದಿ ಆಗಮಿಸಿದಾಗ, ಗ್ಯಾಲರಿಯಲ್ಲಿ ಯುವಕ ಶವ ನೇತಾಡುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆ ಬಳಿಕ ಮೃತದೇಹವನ್ನು ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ ಮೃತ ಯುವಕನ ಹೆಸರು ಧನಂಜಯ್ ಬಾರಿಕ್. 21 ವರ್ಷದ ಯುವಕ ಒಡಿಶಾದ ಭದ್ರಕ್ ಜಿಲ್ಲೆಯ ನಿವಾಸಿ. ಅವರ ತಂದೆ ಗಣೇಶ್ ಚಂದ್ರ ಬಾರಿಕ್ ಈಡನ್‌ನ ಗ್ರೌಂಡ್ ಸ್ಟಾಫ್ ಆಗಿ ಕೆಲಸ ಮಾಡುತ್ತಿದ್ದಾರೆ.

ಒಡಿಶಾದಿಂದ ಕೆಲಸ ಅರಸಿ ಕೋಲ್ಕತ್ತಾಗೆ ಬಂದಿದ್ದ ಧನಂಜಯ್​ ಈಡನ್ ಗಾರ್ಡನ್ಸ್​ ಸಿಬ್ಬಂದಿಗಳ ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಆದರೆ ಆತನಿಗೆ ಎಲ್ಲೂ ಉದ್ಯೋಗ ಸಿಕ್ಕಿರಲಿಲ್ಲ. ಇದರಿಂದ ಧನಂಜಯ್ ನಿರಾಶೆಗೊಂಡಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಆದಾಗ್ಯೂ, ಇದು ನಿಜವಾಗಿಯೂ ಆತ್ಮಹತ್ಯೆ ಪ್ರಕರಣವೇ ಅಥವಾ ದುರ್ಘಟನೆಯ ಹಿಂದೆ ಯಾವುದಾದರೂ ಬೇರೆ ಕಾರಣವಿದೆಯೇ ಎಂಬುದರ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಕೊಲ್ಕತ್ತಾ ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಡನ್ ಗಾರ್ಡನ್ಸ್ ಸ್ಟೇಡಿಯಂ ವಿಶೇಷತೆ:

ಕೋಲ್ಕತ್ತಾದ ನಗರ ಭಾಗದಲ್ಲಿರುವ ಈಡನ್ ಗಾರ್ಡನ್ಸ್ ಕ್ರೀಡಾಂಗಣವು ಭಾರತದ ಅತ್ಯಂತ ಹಳೆಯ ಮತ್ತು ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಡೇಡಿಯಂ ಆಗಿದೆ. ಹಾಗೆಯೇ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ.

ಇದನ್ನೂ ಓದಿ: IPL 2024: ರೋಹಿತ್ ಶರ್ಮಾ ಮೇಲೆ ಕಣ್ಣಿಟ್ಟ ಗುಜರಾತ್ ಟೈಟಾನ್ಸ್

ಈ ಸ್ಟೇಡಿಯಂ ಅನ್ನು ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ‘ಲಾರ್ಡ್ಸ್ ಆಫ್ ದಿ ಸಬ್​ಕಾಂಟಿನೆಂಟ್” ಎಂದು ವರ್ಣಿಸಿದ್ದರು. ಲಂಡನ್‌ನ ಐಕಾನಿಕ್ ಲಾರ್ಡ್ಸ್ ಕ್ರಿಕೆಟ್ ಮೈದಾನಕ್ಕೆ ಸಮಾನಾಂತರವಾಗಿ ನಿಲ್ಲಬಲ್ಲ ಕ್ರೀಡಾಂಗಣ ಎಂದು ಬಣ್ಣಿಸಿದ್ದರು. 1864 ರಲ್ಲಿ ಸ್ಥಾಪಿತವಾದ ಈ ಕ್ರೀಡಾಂಗಣವು 68,000 ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ ತವರು ಮೈದಾನವಾಗಿ ಈಡನ್ ಗಾರ್ಡನ್ಸ್ ಗುರುತಿಸಿಕೊಂಡಿದೆ.

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?