IND vs SA: ಧರ್ಮಶಾಲಾದಲ್ಲಿ ತನ್ನ ವೃತ್ತಿಜೀವನದ ಐತಿಹಾಸಿಕ ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ
ardik Pandya's T20 Milestones: ಧರ್ಮಶಾಲಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 100 ಅಂತರರಾಷ್ಟ್ರೀಯ ಟಿ20 ವಿಕೆಟ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಅವರು ಭಾರತದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ, ಮೊದಲ ಟಿ20 ಪಂದ್ಯದಲ್ಲಿ 100 ಸಿಕ್ಸರ್‌ಗಳ ಗಡಿಯನ್ನೂ ದಾಟುವ ಮೂಲಕ ನಾಲ್ಕನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಅವರ ವೃತ್ತಿಜೀವನದ ಮಹತ್ವದ ಮೈಲಿಗಲ್ಲು.
ಧರ್ಮಶಾಲಾದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20ಪಂದ್ಯದಲ್ಲಿ ಭಾರತದ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೊಂದು ವಿಶಿಷ್ಟ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಪವರ್ ಪ್ಲೇ ಮುಗಿದ ಬೌಲಿಂಗ್ ದಾಳಿಗಿಳಿದ ಹಾರ್ದಿಕ್, 7ನೇ ಓವರ್ನ ಕೊನೆಯ ಎಸೆತದಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಅವರ ವಿಕೆಟ್ ಉರುಳಿಸಿದರು. ಈ ಮೂಲಕ ಹಾರ್ದಿಕ್ ತಮ್ಮ ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ತಮ್ಮ 100ನೇ ವಿಕೆಟ್‌ಗಳನ್ನು ಪೂರೈಸಿದರು.
ಇದರೊಂದಿಗೆ ಹಾರ್ದಿಕ್ ಭಾರತದ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳನ್ನು ಪೂರೈಸಿದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಹಾರ್ದಿಕ್ಗಿಂತ ಮೊದಲು, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರಿತ್ ಬುಮ್ರಾ ಭಾರತದ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ಗಳ ಗಡಿ ದಾಟಿದ್ದಾರೆ.
ಮೂರನೇ ಟಿ20 ಪಂದ್ಯದಲ್ಲಿ ಈ ಸಾಧನೆ ಮಾಡಿರುವ ಹಾರ್ದಿಕ್, ಮೊದಲ ಟಿ20 ಪಂದ್ಯದಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳ ಗಡಿ ಕೂಡ ದಾಟಿದರು. ಈ ಮೂಲಕ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಹಾರ್ದಿಕ್ಗಿಂತ ಮೊದಲು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಈ ಸಾಧನೆ ಮಾಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

