AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸೋಲಿಗೆ ಕಾರಣರಾದ ‘ಇಬ್ಬರು ಭಾರತೀಯರು’

Ireland vs India, 1st T20I: ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲೇ ಐರ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ತಂಡವು 18.5 ಓವರ್​ಗಳಲ್ಲಿ 148 ರನ್​ಗಳಿಸಿ ಆಲೌಟ್ ಆಗಿದೆ.

ಟೀಮ್ ಇಂಡಿಯಾ ಸೋಲಿಗೆ ಕಾರಣರಾದ 'ಇಬ್ಬರು ಭಾರತೀಯರು'
Jai Moondra - Team IndiaImage Credit source: BBC/BCCI
ಝಾಹಿರ್ ಯೂಸುಫ್
|

Updated on:Jun 27, 2026 | 7:55 AM

Share

ಟಿ20 ವಿಶ್ವಕಪ್​ ಚಾಂಪಿಯನ್ನರಿಗೆ ಹೀನಾಯ ಸೋಲುಣಿಸುವಲ್ಲಿ ಕೊನೆಗೂ ಐರ್ಲೆಂಡ್ ತಂಡ ಯಶಸ್ವಿಯಾಗಿದೆ. ಐರ್ಲೆಂಡ್​ನ ಬೆಲ್​ಫಾಸ್ಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿದ್ದರು.

183 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾವನ್ನು 18.5 ಓವರ್​ಗಳಲ್ಲಿ 148 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಐರ್ಲೆಂಡ್ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಐರ್ಲೆಂಡ್ ತಂಡ 34 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಸೋಲಿಗೆ ಇಬ್ಬರು ಭಾರತೀಯರು ಕಾರಣ!

ಈ ಪಂದ್ಯದ ರೋಚಕ ತಿರುವಿಗೆ ಕಾರಣವಾಗಿದ್ದು ಇಬ್ಬರು ಭಾರತೀಯರು.  ಒಬ್ಬರು ಭಾರತದ ಪರವಾಗಿ ರನ್ ಬಿಟ್ಟುಕೊಟ್ಟು ವಿಲನ್ ಆದರೆ, ಮತ್ತೊಬ್ಬರು ಐರ್ಲೆಂಡ್ ಪರವಾಗಿ ಅತ್ಯುತ್ತಮ ಬೌಲೀಂಗ್ ದಾಳಿ ನಡೆಸಿದ ಹೀರೋ ಎನಿಸಿಕೊಂಡರು.

  • ಪ್ರಸಿದ್ಧ್ ಕೃಷ್ಣ: ಈ ಪಂದ್ಯದಲ್ಲಿ ಐರ್ಲೆಂಡ್ ತಂಡವು ಬೃಹತ್ ಮೊತ್ತ ಪೇರಿಸಲು ಕಾರಣವಾಗಿದ್ದು ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ. ಸುರ್ದೀರ್ಘಾವಧಿಯ ಬಳಿಕ ಟಿ20 ತಂಡಕ್ಕೆ ಮರಳಿದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ 4 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 57 ರನ್​ಗಳು.
  • 27 ರನ್​ಗಳ ದುಬಾರಿ ಓವರ್:  ಪಂದ್ಯದ 17ನೇ ಓವರ್ ಎಸೆದ ಪ್ರಸಿದ್ಧ್ ಕೃಷ್ಣ ಅವರ ಓವರ್‌ನಲ್ಲಿ ಐರ್ಲೆಂಡ್‌ನ ಗರೆಥ್ ಡೆಲಾನಿ ಮತ್ತು ಜಾರ್ಜ್ ಡಾಕ್ರೆಲ್ ಭರ್ಜರಿ ಬ್ಯಾಟಿಂಗ್ ನಡೆಸಿದರು.  ಈ ಓವರ್​ನಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿ ಸೇರಿದಂತೆ ಬರೋಬ್ಬರಿ 27 ರನ್ ಚಚ್ಚಿದ್ದರು .

ಇದರ ಪರಿಣಾಮವಾಗಿ 150ರ ಅಸುಪಾಸಿನಲ್ಲಿ ಕೊನೆಗೊಳ್ಳಬೇಕಿದ್ದ ಐರ್ಲೆಂಡ್ ತಂಡ ಸ್ಕೋರ್​ 180 ರನ್​ಗಳನ್ನು ದಾಟಿತು. ಅಲ್ಲದೆ 20 ಓವರ್‌ಗಳಲ್ಲಿ 182/9 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

  • ಜೈ ಮುಂದ್ರ: 183 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಅತ್ಯಂತ ದೊಡ್ಡ ಆಘಾತ ನೀಡಿದ್ದು ಐರ್ಲೆಂಡ್ ತಂಡದ ಪರವಾಗಿ ಚೊಚ್ಚಲ ಪಂದ್ಯವಾಡಿದ 29 ವರ್ಷದ ವೇಗಿ ಜೈ ಮುಂದ್ರ. ಮೂಲತಃ ರಾಜಸ್ಥಾನದ ಟೋಂಕ್ ಜಿಲ್ಲೆಯವರಾದ ಜೈ ಮುಂದ್ರ, 2021 ರಲ್ಲಿ ಉನ್ನತ ಶಿಕ್ಷಣಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದರು. ಅಲ್ಲಿನ ದೇಶಿ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಇದೀಗ ಐರ್ಲೆಂಡ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
  • ಕರಾರುವಾಕ್ ದಾಳಿ: ಭಾರತ ವಿರುದ್ಧ ಜೈ ಮುಂದ್ರ ಮೊದಲ ಎಸೆತದಲ್ಲೇ ಇತಿಹಾಸ ಸೃಷ್ಟಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎಸೆದ ಮೊದಲನೇ ಎಸೆತದಲ್ಲೇ ಸಂಜು ಸ್ಯಾಮ್ಸನ್ (5) ಅವರ ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾಗೆ ಆರಂಭಿಕ ಆಘಾತ ನೀಡಿದರು. ಅಲ್ಲದೆ 4 ಓವರ್‌ಗಳಲ್ಲಿ ಕೇವಲ 26 ರನ್ ನೀಡಿ 2 ಪ್ರಮುಖ ವಿಕೆಟ್ ಪಡೆದರು. ಈ ಮೂಲಕ ಟೀಮ್ ಇಂಡಿಯಾ ರನ್​ ವೇಗವನ್ನು ನಿಯಂತ್ರಿಸುವಲ್ಲಿ ಜೈ ಮುಂದ್ರ ಪ್ರಮುಖ ಪಾತ್ರವಹಿಸಿದರು.

ಇದನ್ನೂ ಓದಿ: ಟೀಮ್ ಇಂಡಿಯಾಗೆ 23 ವರ್ಷದ ಯುವ ಆಲ್​ರೌಂಡರ್ ಎಂಟ್ರಿ..!

ಅಂತಿಮವಾಗಿ ಭಾರತ ತಂಡ 18.5 ಓವರ್‌ಗಳಲ್ಲಿ 148 ರನ್‌ಗಳಿಗೆ ಆಲೌಟ್ ಆಗಿ 34 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಒಂದೆಡೆ ಭಾರತೀಯ ವೇಗಿ ದುಬಾರಿಯಾದರೆ, ಮತ್ತೊಂದೆಡೆ ಭಾರತೀಯ ಮೂಲದ ವೇಗಿ ಮಿಂಚಿನ ದಾಳಿ ಸಂಘಟಿಸಿದರು. ಈ ಮೂಲಕ ಒಬ್ಬರು ಭಾರತದ ಸೋಲಿಗೆ ಕಾರಣವಾದರೆ, ಮತ್ತೊಬ್ಬರು ಐರ್ಲೆಂಡ್ ಗೆಲುವಿಗೆ ಕಾರಣಕರ್ತರಾದರು.

Published On - 7:52 am, Sat, 27 June 26

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ