AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಂಗ್ ಕಾಂಗ್ ಸಿಕ್ಸಸ್‌: ಆಸ್ಟ್ರೇಲಿಯಾವನ್ನೇ ಮಣಿಸಿ ಚೊಚ್ಚಲ ಟ್ರೋಫಿ ಗೆದ್ದ ಅಫ್ಘಾನಿಸ್ತಾನ

ಹಾಂಗ್ ಕಾಂಗ್ ಸಿಕ್ಸಸ್ 2026 ಟೂರ್ನಿಯಲ್ಲಿ ಅಫ್ಘಾನಿಸ್ತಾನ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದಿದೆ. ಇಮ್ರಾನ್ ಮಿರ್ ಮತ್ತು ಫರ್ಮಾನುಲ್ಲಾ ಸಫಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಭಾರತ ತಂಡ 11ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು, ಪ್ರದರ್ಶನ ನಿರಾಸೆ ಮೂಡಿಸಿತು. ಅಫ್ಘಾನ್ ಪಡೆ ಅದ್ಭುತ ಆಟದ ಮೂಲಕ ಚಾಂಪಿಯನ್ ಪಟ್ಟಕ್ಕೇರಿತು.

ಹಾಂಗ್ ಕಾಂಗ್ ಸಿಕ್ಸಸ್‌: ಆಸ್ಟ್ರೇಲಿಯಾವನ್ನೇ ಮಣಿಸಿ ಚೊಚ್ಚಲ ಟ್ರೋಫಿ ಗೆದ್ದ ಅಫ್ಘಾನಿಸ್ತಾನ
ಅಫ್ಘಾನಿಸ್ತಾನ ತಂಡ
ಪೃಥ್ವಿಶಂಕರ
|

Updated on: Nov 01, 2026 | 5:16 PM

Share

ಹಾಂಗ್ ಕಾಂಗ್ ಸಿಕ್ಸಸ್ 2026 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ಅಫ್ಘಾನಿಸ್ತಾನ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೂರ್ನಿಯುದ್ದಕ್ಕೂ ಅದ್ಭುತ ಆಟ ಪ್ರದರ್ಶಿಸಿದ್ದ ಅಫ್ಘಾನ್ ಪಡೆ ಕೊನೆಗೂ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಗುಲ್ಬದಿನ್ ನೈಬ್ ನಾಯಕತ್ವದಲ್ಲಿ ಕಣಕ್ಕಿಳಿದ ಅಫ್ಘಾನಿಸ್ತಾನ ತಂಡ ಬ್ಯಾಟಿಂಗ್‌ನಲ್ಲಿ ಸ್ಫೋಟಕ ಆಟ ಪ್ರದರ್ಶಿಸುವುದರ ಜೊತೆಗೆ ಒತ್ತಡದ ಸಂದರ್ಭಗಳಲ್ಲೂ ಉತ್ತಮ ಪ್ರದರ್ಶನ ನೀಡಿತು. ಮತ್ತೊಂದೆಡೆ, ಟೂರ್ನಿಯುದ್ದಕ್ಕೂ ಉತ್ತಮ ಲಯದಲ್ಲಿದ್ದ ಆಸ್ಟ್ರೇಲಿಯಾ ಫೈನಲ್‌ ಪ್ರವೇಶಿಸಿತ್ತು. ಆದರೆ, ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅಫ್ಘಾನ್ ಪಡೆಯ ಮುಂದೆ ಕಾಂಗರೂಗಳ ಆಟ ನಡೆಯಲಿಲ್ಲ.

ಆಸ್ಟ್ರೇಲಿಯಾದಿಂದ ಸ್ಪರ್ಧಾತ್ಮಕ ಮೊತ್ತ

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಕೇವಲ ಆರು ಓವರ್‌ಗಳ ಪಂದ್ಯವಾಗಿದ್ದರಿಂದ ಆರಂಭದಿಂದಲೇ ಆಸೀಸ್ ಬ್ಯಾಟರ್‌ಗಳು ಆಕ್ರಮಣಕಾರಿ ಆಟಕ್ಕೆ ಮುಂದಾದರು. ಪರಿಣಾಮವಾಗಿ ಆರು ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 115 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದರು. ಈ ಮೂಲಕ ಅಫ್ಘಾನಿಸ್ತಾನಕ್ಕೆ ಗೆಲ್ಲಲು 116 ರನ್‌ಗಳ ಕಠಿಣ ಗುರಿ ನೀಡಿದರು. ತಂಡದ ಪರ ಆರಂಭಿಕ ಆಟಗಾರ ಮ್ಯಾಕ್ಸ್ ಬ್ರ್ಯಾಂಟ್ ಕೇವಲ 14 ಎಸೆತಗಳಲ್ಲಿ 44 ರನ್ ಸಿಡಿಸಿ ಮಿಂಚಿದರು. ಅಲೆಕ್ಸ್ ರಾಸ್ ಕೂಡ ಕೇವಲ 10 ಎಸೆತಗಳಲ್ಲಿ ಅಜೇಯ 29 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇಮ್ರಾನ್, ಫರ್ಮಾನುಲ್ಲಾ ಅಬ್ಬರ

116 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡ ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ, ನಂತರ ಕ್ರೀಸ್‌ಗೆ ಬಂದ ಇಮ್ರಾನ್ ಮಿರ್ ಮತ್ತು ಫರ್ಮಾನುಲ್ಲಾ ಸಫಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನ ಹಾದಿಗೆ ಮರಳಿಸಿದರು. ಇಮ್ರಾನ್ ಮಿರ್ ಕೇವಲ 14 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 2 ಬೌಂಡರಿಗಳ ನೆರವಿನಿಂದ 53 ರನ್ ಸಿಡಿಸಿ ಅಬ್ಬರಿಸಿದರು. ಮತ್ತೊಂದೆಡೆ, ಫರ್ಮಾನುಲ್ಲಾ ಸಫಿ ಕೇವಲ 7 ಎಸೆತಗಳಲ್ಲಿ 4 ಸಿಕ್ಸರ್‌ಗಳ ಸಹಿತ 26 ರನ್ ಗಳಿಸಿದರು. ಈ ಇಬ್ಬರ ಸ್ಫೋಟಕ ಜೊತೆಯಾಟ ಆಸ್ಟ್ರೇಲಿಯಾ ಬೌಲರ್‌ಗಳ ಲೆಕ್ಕಾಚಾರವನ್ನೇ ತಲೆಕೆಳಗಾಗಿಸಿತು.

ನಾಯಕ ಗುಲ್ಬದಿನ್ ನೈಬ್ ಕೂಡ ಕೇವಲ 6 ಎಸೆತಗಳಲ್ಲಿ 17 ರನ್ ಗಳಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದರು. ಅಂತಿಮವಾಗಿ ಅಫ್ಘಾನಿಸ್ತಾನ ಕೇವಲ 5.1 ಓವರ್‌ಗಳಲ್ಲಿ ಗುರಿ ತಲುಪುವ ಮೂಲಕ 5 ಎಸೆತಗಳು ಬಾಕಿ ಇರುವಂತೆಯೇ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಚೊಚ್ಚಲ ಹಾಂಗ್ ಕಾಂಗ್ ಸಿಕ್ಸಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಭಾರತದ ಪ್ರದರ್ಶನ ಹೇಗಿತ್ತು?

ಇತ್ತ ಹಾಂಗ್ ಕಾಂಗ್ ಸಿಕ್ಸಸ್ 2026 ಟೂರ್ನಿಯಲ್ಲಿ ಭಾರತ ತಂಡದ ಪ್ರದರ್ಶನ ನಿರಾಸೆ ಮೂಡಿಸಿತು. ಟೂರ್ನಿಯಲ್ಲಿ ಆಡಿದ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ಟೀಂ ಇಂಡಿಯಾ 11ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಗ್ರೂಪ್ ಸಿ ಹಂತದಲ್ಲಿ ಭಾರತ ತಂಡ ಪಾಕಿಸ್ತಾನ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ವಿರುದ್ಧ ಸೋಲು ಅನುಭವಿಸಿತು. ಈ ಎರಡು ಸೋಲುಗಳಿಂದಾಗಿ ಪ್ರಶಸ್ತಿ ಗೆಲ್ಲುವ ರೇಸ್‌ನಿಂದ ಭಾರತ ಹೊರಬಿತ್ತು.

ಇದಾದ ಬಳಿಕ ಬೌಲ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧವೂ ಭಾರತ ಸೋಲನುಭವಿಸಿತು. ಕೊನೆಗೆ 11ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಿದ ಭಾರತ ಗೆಲುವಿನೊಂದಿಗೆ ಟೂರ್ನಿಗೆ ವಿದಾಯ ಹೇಳಿತು. 117 ರನ್‌ಗಳ ಗುರಿಯನ್ನು 5 ವಿಕೆಟ್‌ಗಳು ಕೈಯಲ್ಲಿರುವಂತೆಯೇ ಬೆನ್ನಟ್ಟಿದ ಟೀಂ ಇಂಡಿಯಾ ಜಯ ದಾಖಲಿಸಿತು. ಈ ಸೋಲಿನೊಂದಿಗೆ ಬಾಂಗ್ಲಾದೇಶ 12ನೇ ಸ್ಥಾನಕ್ಕೆ ಕುಸಿಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?