ICC CEO Resignation: ಐಸಿಸಿ ಸಿಇಓ, ಮನು ಸಾಹ್ನಿ ರಾಜೀನಾಮೆ

ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಮನು ಸಾಹ್ನಿ  ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದುರ್ವರ್ತನೆಯಿಂದಾಗಿ ತನಿಖೆಗೆ ಒಳಗಾಗಿರುವ ಇವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು. ಮನು ಸಾಹ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ.

ICC CEO Resignation: ಐಸಿಸಿ ಸಿಇಓ, ಮನು ಸಾಹ್ನಿ ರಾಜೀನಾಮೆ
ಮನು ಸಾಹ್ನಿ
Follow us
ಡಾ. ಭಾಸ್ಕರ ಹೆಗಡೆ
| Updated By: ಪೃಥ್ವಿಶಂಕರ

Updated on: Jul 09, 2021 | 2:13 PM

ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಮನು ಸಾಹ್ನಿ  ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದುರ್ವರ್ತನೆಯಿಂದಾಗಿ ತನಿಖೆಗೆ ಒಳಗಾಗಿರುವ ಇವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು. ಮನು ಸಾಹ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ. ಇವರ ಬದಲು ಜೆಫ್ ಅಲಾರ್ಡಿಸ್ ಅವರನ್ನು ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕಳೆದ ವರ್ಷ ಹೊಸ ಅಧ್ಯಕ್ಷರ ಪಟ್ಟಕ್ಕಾಗಿ ಚುನಾವಣಾ ಪ್ರಕ್ರಿಯೆ ಆರಂಭವಾದಾಗಿನಿಂದ ಸಾಹ್ನಿ ಸಂಕಷ್ಟಕ್ಕೆ ಸಿಲುಕಿದ್ದರು. ಬಳಿಕ ಸಹೋದ್ಯೋಗಿಗಳ ಜೊತೆ ದುರ್ನಡತೆಯಿಂದ ವರ್ತಿಸಿದ ಕಾರಣ ಇದರ ಬಗ್ಗೆ ಪರಿಶೀಲನೆ ನಡೆಸಿ ಇವರನ್ನು ಕಳೆದ ಮಾರ್ಚ್​ನಲ್ಲಿ ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು.

2019ರಲ್ಲಿ ಐಸಿಸಿ ವಿಶ್ವಕಪ್ ನಂತರ 2022ರವರೆಗೆ ಅಧಿಕಾರಾವಧಿಯಲ್ಲಿ ಡೇವ್ ರಿಚರ್ಡ್‌ಸನ್‌ ಸ್ಥಾನಕ್ಕೆ ಬಂದಿದ್ದ ಸಾಹ್ನಿ, ವಿವಿಧ ನೀತಿ ನಿರ್ಧಾರಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಭಾವಿ ಕ್ರಿಕೆಟ್ ಮಂಡಳಿಗಳೊಂದಿಗೆ ಉತ್ತಮ ಸಂಬಂಧವನ್ನು ಕೂಡ ಹೊಂದಿರಲಿಲ್ಲ.

ಸದ್ಯ ಮನು ಸಾವ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ. ಜೆಫ್ ಅಲಾರ್ಡಿಸ್ ಅವರನ್ನು ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅಲಾರ್ಡಿಸ್ ಅವರಿಗೆ ಐಸಿಸಿಯ ಆಡಳಿತ ಮಂಡಳಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.

ಇದನ್ನೂ ಓದಿ: 

ICC Rankings: ಕನ್ನಡಿಗ ಕೆ.ಎಲ್. ರಾಹುಲ್​ಗೆ ಮುಂಬಡ್ತಿ! ಬುಮ್ರಾ, ಜಡೇಜಾಗೆ ಹಿನ್ನೆಡೆ, ಕೊಹ್ಲಿ-ರೋಹಿತ್ ಯಥಾಸ್ಥಿತಿ

ICC Test Rankings: ನಂ.1 ಪಟ್ಟಕ್ಕೇರಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್‌! ರೋಹಿತ್-ರಹಾನೆಗೆ ಲಾಭ, ಕೊಹ್ಲಿ ಸ್ಥಿರ

( ICC CEO Manu Sawhney resigned from International Cricket Council and moves out immediately )

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ