Kannada News Sports ICC Champions Trophy 2025: India's Pakistan Participation Uncertain, Hybrid Model Considered
ಭಾರತದ ಮುಂದೆ ತಲೆಬಾಗಿದ ಪಾಕಿಸ್ತಾನ; ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ
ICC Champions Trophy 2025: 2025ರ ಫೆಬ್ರವರಿಯಲ್ಲಿ ಪಾಕಿಸ್ತಾನ ಆತಿಥ್ಯ ವಹಿಸಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟೆ ಇನ್ನೂ ಪ್ರಕಟವಾಗಿಲ್ಲ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಅನಿಶ್ಚಿತವಾಗಿದ್ದು, ಹೈಬ್ರಿಡ್ ಮಾದರಿಯಲ್ಲಿ (ಭಾರತದ ಪಂದ್ಯಗಳು UAEಯಲ್ಲಿ) ಟೂರ್ನಿ ನಡೆಯುವ ಸಾಧ್ಯತೆಯಿದೆ. ಪಿಸಿಬಿ ಐಸಿಸಿಗೆ ವೇಳಾಪಟ್ಟೆ ಬಿಡುಗಡೆಗೆ ಒತ್ತಾಯಿಸುತ್ತಿದ್ದು, ನವೆಂಬರ್ 11ರಂದು ವೇಳಾಪಟ್ಟೆ ಬಿಡುಗಡೆಯಾಗುವ ನಿರೀಕ್ಷೆಯಿದೆ.
1 / 6
2025 ರ ಫೆಬ್ರವರಿಯಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯವಹಿಸುತ್ತಿದೆ. ಆದರೆ ಈ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಇನ್ನೂ ಪ್ರಕಟಿಸಿಲ್ಲ. ಇದರ ಜೊತೆಗೆ ಈ ಐಸಿಸಿ ಟೂರ್ನಿಯಲ್ಲಿ ಭಾಗವಹಿಸಲು ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸುತ್ತಾ ಎಂಬುದು ಕೂಡ ಇದುವರೆಗೆ ಖಚಿತವಾಗಿಲ್ಲ. ಸಧ್ಯದ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಕಳುಹಿಸಲು ಭಾರತ ಸರ್ಕಾರ ಸಿದ್ಧವಿಲ್ಲ ಎಂಬುದು ಸ್ಪಷ್ಟವಾಗಿದೆ.
2 / 6
ಇತ್ತ ಟೀಂ ಇಂಡಿಯಾವನ್ನು ತನ್ನ ದೇಶಕ್ಕೆ ಕರೆಸಿಕೊಳ್ಳಲು ಪಾಕಿಸ್ತಾನ ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಅಲ್ಲದೆ ಟೀಂ ಇಂಡಿಯಾ ಬಂದೇ ಬರುತ್ತದೆ ಎಂಬ ಭರವಸೆಯೊಂದಿಗೆ ಭಾರತ ತಂಡದ ಪಂದ್ಯಗಳನ್ನು ಲಾಹೋರ್‌ನಲ್ಲಿ ನಡೆಸುವುದಾಗಿ ಪಿಸಿಬಿ ಡ್ರಾಫ್ಟ್ ವೇಳಾಪಟ್ಟಿಯನ್ನು ಸಹ ಸಿದ್ಧಪಡಿಸಿತ್ತು. ಆದರೀಗ ಭಾರತದ ಮುಂದೆ ತಲೆಬಾಗಿರುವ ಪಾಕಿಸ್ತಾನ 2025 ರ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡಲು ಸಿದ್ಧವಾಗಿದೆ.
3 / 6
ಪಿಟಿಐ ವರದಿ ಪ್ರಕಾರ, 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪಂದ್ಯಗಳು ಯುಎಇಯಲ್ಲಿ ನಡೆಯಬಹುದು. ಅಂದರೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಈ ಹಿಂದೆ 2023ರಲ್ಲಿ ನಡೆದ ಏಷ್ಯಾಕಪ್ ಕೂಡ ಹೈಬ್ರಿಡ್ ಮಾದರಿಯಲ್ಲಿ ನಡೆದಿತ್ತು. ಆಗಲೂ ಏಷ್ಯಾಕಪ್ ಆತಿಥ್ಯ ಪಾಕಿಸ್ತಾನದ ಬಳಿಯೇ ಇತ್ತಾದರೂ, ಟೀಂ ಇಂಡಿಯಾ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.
4 / 6
ಇನ್ನು ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸುವುದಾಗಿ ಪಿಸಿಬಿ ಚಿಂತಿಸಿದೆ ಎಂದು ಪಿಸಿಬಿಯ ವಿಶ್ವಾಸಾರ್ಹ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಅದರಲ್ಲಿ ಭಾರತ ಸರ್ಕಾರ ತನ್ನ ತಂಡವನ್ನು ಪಾಕಿಸ್ತಾನ ಕಳುಹಿಸಲು ಒಪ್ಪದಿದ್ದರೆ, ಟೀಂ ಇಂಡಿಯಾದ ಪಂದ್ಯಗಳನ್ನು ದುಬೈ ಅಥವಾ ಶಾರ್ಜಾದಲ್ಲಿ ನಡೆಸಲು ಯೋಚಿಸಿದೆ. ಹೀಗಾಗಿ ಈ ಐಸಿಸಿ ಟೂರ್ನಿಯ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಪಿಸಿಬಿ ಮುಂದಾಗಿದೆ.
5 / 6
ವರದಿಯ ಪ್ರಕಾರ, ಚಾಂಪಿಯನ್ಸ್ ಟ್ರೋಫಿ 2025 ರ ವೇಳಾಪಟ್ಟಿಯನ್ನು ನವೆಂಬರ್ 11 ರಂದು ಪ್ರಕಟಿಸಬಹುದು. ವಾಸ್ತವವಾಗಿ, ಮುಂದಿನ ವಾರದೊಳಗೆ ಪಂದ್ಯಾವಳಿಯ ವೇಳಾಪಟ್ಟಿಯನ್ನು ಪ್ರಕಟಿಸುವಂತೆ ಪಿಸಿಬಿ, ಐಸಿಸಿಗೆ ಒತ್ತಡ ಹೇರುತ್ತಿದೆ. ಮೂಲಗಳ ಪ್ರಕಾರ, ಕೆಲವು ತಿಂಗಳ ಹಿಂದೆಯೇ ಪಿಸಿಬಿ, ಐಸಿಸಿ ಜೊತೆಗೆ ಸಂಭವನೀಯ ವೇಳಾಪಟ್ಟಿಯ ಬಗ್ಗೆ ಚರ್ಚಿಸಿದ್ದು, ಅದೇ ವೇಳಾಪಟ್ಟಿಯನ್ನು ನವೆಂಬರ್ 11 ರಂದು ಪ್ರಕಟಿಸುವಂತೆ ಒತ್ತಾಯಿಸಿದೆ.
6 / 6
ಇದಲ್ಲದೆ ಚಾಂಪಿಯನ್ಸ್ ಟ್ರೋಫಿ ಆಡಲು ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೋ, ಇಲ್ಲವೋ ಎಂಬುದನ್ನು ಖಚಿತಪಡಿಸುವಂತೆ ಬಿಸಿಸಿಐಗೆ ಒತ್ತಡ ಹೇರುವಂತೆ ಪಿಸಿಬಿ ಐಸಿಸಿಯನ್ನು ಕೇಳಿದೆ ಎಂದು ಮೂಲಗಳು ತಿಳಿಸಿವೆ. ಇದರ ಜೊತೆಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ತಮ್ಮ ಸರ್ಕಾರದಿಂದ ಅನುಮತಿ ಪಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ಬಿಸಿಸಿಐ ಲಿಖಿತವಾಗಿ ನೀಡಬೇಕೆಂದು ಪಿಸಿಬಿ ಒತ್ತಾಯ ಮಾಡಿದೆ ಎಂದು ಹೇಳಲಾಗುತ್ತಿದೆ.