AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್ 2027: ಭಾರತದ ಗುಂಪು ಹಂತದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ

ಐಸಿಸಿ 2027 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ 14 ತಂಡಗಳು 57 ಪಂದ್ಯಗಳನ್ನಾಡಲಿವೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿವೆ. ಭಾರತ ಅಕ್ಟೋಬರ್ 7 ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದು, ಅಕ್ಟೋಬರ್ 10 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಪಂದ್ಯಾವಳಿ ಅಕ್ಟೋಬರ್ 2 ರಿಂದ ನವೆಂಬರ್ 21 ರವರೆಗೆ ನಡೆಯಲಿದೆ.

ಏಕದಿನ ವಿಶ್ವಕಪ್ 2027: ಭಾರತದ ಗುಂಪು ಹಂತದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Oct 01, 2026 | 10:30 PM

Share

ಐಸಿಸಿ, ಮುಂದಿನ ವರ್ಷ ನಡೆಯಲಿರುವ 2027 ರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 14 ತಂಡಗಳು 12 ಸ್ಥಳಗಳಲ್ಲಿ 57 ಪಂದ್ಯಗಳನ್ನು ಆಡಲಿವೆ. ದಕ್ಷಿಣ ಆಫ್ರಿಕಾ ಹೆಚ್ಚಿನ ಪಂದ್ಯಗಳನ್ನು ಆಯೋಜಿಸಿದರೆ, ಜಿಂಬಾಬ್ವೆ ಮತ್ತು ನಮೀಬಿಯಾ ಸಹ ಪಂದ್ಯಗಳನ್ನು ಆಯೋಜಿಸಲಿವೆ. ಐಸಿಸಿ ಬಿಡುಗಡೆ ಮಾಡಿರುವ ಈ ವೇಳಾಪಟ್ಟಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪುನಲ್ಲಿ ಸ್ಥಾನ ಪಡೆದಿವೆ.

ಮೊದಲ ಎದುರಾಳಿ ಆಸ್ಟ್ರೇಲಿಯಾ

ಅಕ್ಟೋಬರ್ 2 ರಿಂದ ಆರಂಭವಾಗಲಿರುವ ವಿಶ್ವಕಪ್ ನವೆಂಬರ್ 21 ರವರೆಗೆ ನಡೆಯಲಿದೆ. ಭಾರತ ತಂಡವು ಅಕ್ಟೋಬರ್ 7 ರಂದು ಕೇಪ್ ಟೌನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ. ನಂತರ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 10 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಅಕ್ಟೋಬರ್ 14 ರಂದು ಭಾರತ ತನ್ನ ಮೂರನೇ ಪಂದ್ಯವನ್ನು ಅಫ್ಘಾನಿಸ್ತಾನದ ವಿರುದ್ಧ ಆಡಲಿದೆ. ನಾಲ್ಕನೇ ಪಂದ್ಯದಲ್ಲಿ ಕ್ವಾಲಿಫೈಯರ್ ಎ ತಂಡವನ್ನು ಅಕ್ಟೋಬರ್ 17 ರಂದು ಎದುರಿಸಲಿರುವ ಟೀಂ ಇಂಡಿಯಾ, ಐದನೇ ಹಾಗೂ ತನ್ನ ಕೊನೆಯ ಗುಂಪು ಪಂದ್ಯವನ್ನು ಜಿಂಬಾಬ್ವೆ ವಿರುದ್ಧ ಅಕ್ಟೋಬರ್ 24 ರಂದು ಆಡಲಿದೆ.

ಭಾರತದ ಗುಂಪು ಹಂತದ ಪಂದ್ಯಗಳ ವೇಳಾಪಟ್ಟಿ

  1. ಅಕ್ಟೋಬರ್ 7: ಭಾರತ vs. ಆಸ್ಟ್ರೇಲಿಯಾ
  2. ಅಕ್ಟೋಬರ್ 10: ಭಾರತ vs. ಪಾಕಿಸ್ತಾನ
  3. ಅಕ್ಟೋಬರ್ 14: ಭಾರತ vs. ಅಫ್ಘಾನಿಸ್ತಾನ
  4. ಅಕ್ಟೋಬರ್ 17: ಭಾರತ vs ಕ್ವಾಲಿಫೈಯರ್ ಎ
  5. ಅಕ್ಟೋಬರ್ 24: ಭಾರತ vs. ಜಿಂಬಾಬ್ವೆ

20 ವರ್ಷಗಳ ನಂತರ ದಕ್ಷಿಣ ಆಫ್ರಿಕಾದ ಆತಿಥ್ಯ

20 ವರ್ಷಗಳ ನಂತರ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಕೊನೆಯ ಏಕದಿನ ವಿಶ್ವಕಪ್ 2003 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. 2007 ರ ಟಿ20 ವಿಶ್ವಕಪ್ ಕೂಡ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. ಭಾರತ 2003 ರ ಏಕದಿನ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಮತ್ತು 2007 ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ದಕ್ಷಿಣ ಆಫ್ರಿಕಾದ 8 ಸ್ಥಳಗಳು

  • ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
  • ಸೆಂಚುರಿಯನ್, ಷ್ವಾನೆ
  • ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನ, ಕೇಪ್ ಟೌನ್
  • ಕಿಂಗ್ಸ್‌ಮೀಡ್ ಕ್ರಿಕೆಟ್ ಮೈದಾನ, ಡರ್ಬನ್
  • ಸೇಂಟ್ ಜಾರ್ಜ್ ಪಾರ್ಕ್, ಗೆಬೆರ್ಹಾ
  • ಮಂಗಾಂಗ್ ಓವಲ್, ಬ್ಲೋಮ್‌ಫಾಂಟೈನ್
  • ಬೋಲ್ಯಾಂಡ್ ಪಾರ್ಕ್, ಪಾರ್ಲ್
  • ಬಫಲೋ ಪಾರ್ಕ್, ಕುಗೊಂಪೊ ನಗರ

ಜಿಂಬಾಬ್ವೆ 3 ಸ್ಥಳಗಳು

  • ಹರಾರೆ ಸ್ಪೋರ್ಟ್ಸ್ ಕ್ಲಬ್, ಹರಾರೆ
  • ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್, ಬುಲವಾಯೊ
  • ಮೊಸಿ-ಓ-ತುನ್ಯಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ವಿಕ್ಟೋರಿಯಾ ಫಾಲ್ಸ್

ನಮೀಬಿಯಾದ 1 ಸ್ಥಳ

  • ನಮೀಬಿಯಾ ಕ್ರಿಕೆಟ್ ಮೈದಾನ, ವಿಂಡ್‌ಹೋಕ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ