ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ

ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಬಾಬರ್ ಆಜಂ
ಬಾಬರ್​ ಆಜಂ
Follow us
ರಾಜೇಶ್ ದುಗ್ಗುಮನೆ
|

Updated on: Apr 14, 2021 | 10:24 PM

ದುಬೈ: ಹಲವು ವರ್ಷಗಳ ಕಾಲ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನದಲ್ಲಿದ್ದ ವಿರಾಟ್​ ಕೊಹ್ಲಿ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಐಸಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಪಾಕಿಸ್ತಾನದ ಬಾಬರ್​ ಆಜಂ​ ಮೊದಲ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಬಾಬರ್​ 82 ಬಾಲ್​ಗಳಲ್ಲಿ 94 ರನ್​ ಸಿಡಿಸಿದ್ದರು. ಈ ಮೂಲಕ 865 ಅಂಕ ಪಡೆದುಕೊಂಡು, ಭಾರತದ ನಾಯಕ ವಿರಾಟ್​ಗಿಂತ ಅವರು 8 ಅಂಕ ಮುಂದಿದ್ದಾರೆ.

2010 ಹಾಗೂ 2012ರ ಅಂಡರ್​ 19 ವರ್ಡ್​ಕಪ್​ನಲ್ಲಿ ಬಾಬರ್​ ಮಿಂಚಿದ್ದರು. 2015ರಿಂದ ಅವರು ಪಾಕಿಸ್ತಾನದ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್​ ಕೊಹ್ಲಿ ಬರೋಬ್ಬರಿ 1,258 ದಿನ ಮೊದಲ ಸ್ಥಾನದಲ್ಲೇ ಇದ್ದರು. ಈಗ ಮೊದಲ ಸ್ಥಾನಕ್ಕೆ ಬಾಬರ್ ಬಂದಿದ್ದಾರೆ.

ಈ ಮೊದಲಿಗೆ ಹೋಲಿಸಿದರೆ ವಿರಾಟ್​ ಕೊಹ್ಲಿ ಪರ್ಫಾರ್ಮೆನ್ಸ್​ ಕುಗ್ಗಿದೆ. ಅವರ ಬ್ಯಾಟ್​​ನಿಂದ ಶತಕ ಸಿಡಿಯದೇ ಎರಡು ವರ್ಷಗಳಾಗುತ್ತಾ ಬಂದಿವೆ. ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಕುಸಿಯೋಕೆ ಇದು ಕೂಡ ಕಾರಣವಾಗಿದೆ.

ಅಂದಹಾಗೆ, ಐಸಿಸಿ ರ್ಯಾಂಕಿಂಗ್​ನಲ್ಲಿ ಮೊದಲ ಸ್ಥಾನಕ್ಕೇರಿದ ಪಾಕಿಸ್ತಾನದ ನಾಲ್ಕನೇ ಬ್ಯಾಟ್ಸಮನ್​ ಬಾಬರ್​ ಆಗಿದ್ದಾರೆ. ಈ ಮೊದಲು ಜಾಹೀರ್​ ಅಬ್ಬಾಸ್​ (1983-84), ಜಾವೇದ್​ (1988-89), ಮೊಹ್ಮದ್​ ಯೂಸುಪ್​ (2003) ಮೊದಲ ಸ್ಥಾನದಲ್ಲಿದ್ದರು. 875 ಅಂಕ ಗಳಿಸಿ ವಿರಾಟ್​ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್​ ಶರ್ಮಾ (825) ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಒಡಿಐಗಳಲ್ಲಿ ಕೇವಲ 76ನೇ ಇನ್ನಿಂಗ್ಸ್​ನಲ್ಲಿ 13 ನೇ ಶತಕ ಬಾರಿಸಿ ಕೊಹ್ಲಿ ಮತ್ತು ಆಮ್ಲಾರನ್ನು ಹಿಂದಿಕ್ಕಿದ ಬಾಬರ್ ಆಜಂ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ