AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ರಿಷಭ್ ಪಂತ್​ಗೆ ಮುಂಬಡ್ತಿ; ಟಾಪ್ 10 ರಿಂದ ಜೈಸ್ವಾಲ್ ಔಟ್

ICC Test Rankings: ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಭಾರಿ ಮುನ್ನಡೆ ಸಾಧಿಸಿದ್ದಾರೆ. ಲಂಕಾ ವಿರುದ್ಧದ ಪ್ರದರ್ಶನದಿಂದ 711 ರೇಟಿಂಗ್‌ ಪಾಯಿಂಟ್‌ನೊಂದಿಗೆ 7ನೇ ಸ್ಥಾನಕ್ಕೇರಿದ್ದು, ಶುಭ್​ಮನ್ ಗಿಲ್ ಅವರನ್ನು ಸರಿಗಟ್ಟಿದ್ದಾರೆ. ಬೌಲರ್​ಗಳ ರ್ಯಾಂಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನ ಕಳೆದುಕೊಂಡಿದ್ದು, ಮಿಚೆಲ್ ಸ್ಟಾರ್ಕ್ ನಂ.1 ಆಗಿದ್ದಾರೆ. ಯಶಸ್ವಿ ಜೈಸ್ವಾಲ್ ಟಾಪ್ 10 ರಿಂದ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: Aug 26, 2026 | 8:08 PM

Share
ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಬ್ಯಾಟ್ಸ್‌ಮನ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಮುಂಬಡ್ತಿ ಪಡೆದುಕೊಂಡಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್, ಶ್ರೇಯಾಂಕ ಪಟ್ಟಿಯಲ್ಲಿ ನಾಯಕ ಶುಭಮನ್ ಗಿಲ್ ಅವರನ್ನು ಸರಿಗಟ್ಟಿದ್ದು, ಅಗ್ರ 10 ರೊಳಗೆ ಸ್ಥಾನ ಪಡೆದಿದ್ದಾರೆ(PC-BCCI).

1 / 5
ಈ ಟೆಸ್ಟ್ ಸರಣಿಗೂ ಮೊದಲು ಅಗ್ರ 10 ರಿಂದ ಹೊರಗಿದ್ದ ರಿಷಭ್ ಪಂತ್ ಇದೀಗ 711 ರೇಟಿಂಗ್ ಪಾಯಿಂಟ್​ಗಳೊಂದಿಗೆ ಆರು ಸ್ಥಾನಗಳ ಮುಂಬಡ್ತಿ ಪಡೆದಿದ್ದು, ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ಇತ್ತ ಶುಭ್​ಮನ್ ಗಿಲ್ ಕೂಡ 711 ರೇಟಿಂಗ್ ಪಾಯಿಂಟ್​​ ಹೊಂದಿದ್ದಾರೆ. ಇದರರ್ಥ ರಿಷಭ್ ಪಂತ್ ಹಾಗೂ ಶುಭ್​ಮನ್ ಗಿಲ್ ಪ್ರಸ್ತುತ 7ನೇ ಸ್ಥಾನದಲ್ಲಿದ್ದಾರೆ(PC-BCCI).

2 / 5
ರಿಷಭ್ ಪಂತ್ ಗಾಲೆಯಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 39 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 66 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇದರ ಫಲವಾಗಿ ಪಂತ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಇತ್ತ ನಾಯಕ ಶುಭ್​ಮನ್ ಗಿಲ್ ಎರಡು ಇನ್ನಿಂಗ್ಸ್​ನಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದರು. ಗಿಲ್ ಮೊದಲ ಇನ್ನಿಂಗ್ಸ್‌ನಲ್ಲಿ 16 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಎಂಟು ರನ್​ಗಳಿಸಲಷ್ಟೇ ಶಕ್ತರಾಗಿದ್ದರು(PC-BCCI).

3 / 5
ಇನ್ನು ಗಾಲೆ ಟೆಸ್ಟ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಯಶಸ್ವಿ ಜೈಸ್ವಾಲ್ ಟಾಪ್ 10 ರಿಂದ ಹೊರಬಿದ್ದಿದ್ದಾರೆ. ಎರಡು ಸ್ಥಾನ ಕುಸಿತ ಕಂಡಿರುವ ಜೈಸ್ವಾಲ್, 701 ರೇಟಿಂಗ್‌ ಪಾಯಿಂಟ್​ಗಳೊಂದಿಗೆ 11 ನೇ ಸ್ಥಾನಕ್ಕೆ ಜಾರಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್‌ನಲ್ಲಿ ಗಳಿಸಿದ ರನ್‌ಗಳನ್ನು ಈ ಶ್ರೇಯಾಂಕದಲ್ಲಿ ಪರಿಗಣಿಸಲಾಗಿಲ್ಲ. ಈ ಕಾರಣದಿಂದ ರ್ಯಾಂಕಿಂಗ್ ಪಟ್ಟಿಯಲ್ಲಿ ಬದಲಾವಣೆಗಳಾಗಿವೆ(PC-BCCI).

4 / 5
ಉಳಿದಂತೆ ಬೌಲರ್​ಗಳ ರ್ಯಾಂಕಿಂಗ್​ನಲ್ಲಿ ಜಸ್ಪ್ರೀತ್ ಬುಮ್ರಾ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ್ದು, ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್​ ನಂಬರ್ 1 ಸ್ಥಾನವನ್ನು ಅಲಂಕರಿಸಿದ್ದಾರೆ. ಬುಮ್ರಾ ಹೊರತುಪಡಿಸಿ ಟಾಪ್ 10 ರಲ್ಲಿ ಭಾರತದ ಬೇರೆ ಯಾವುದೇ ಬೌಲರ್ ಇಲ್ಲ. ಟಾಪ್ 20 ರಲ್ಲಿ, ಮೊಹಮ್ಮದ್ ಸಿರಾಜ್ ನಾಲ್ಕು ಸ್ಥಾನ ಕುಸಿದು 18 ನೇ ಸ್ಥಾನಕ್ಕೆ ಮತ್ತು ರವೀಂದ್ರ ಜಡೇಜಾ ಮೂರು ಸ್ಥಾನ ಕುಸಿದು 19 ನೇ ಸ್ಥಾನಕ್ಕೆ ತಲುಪಿದ್ದಾರೆ(PC-BCCI).

5 / 5
Follow Us
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?

ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ

‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ

125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ

ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?

ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ

ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!

ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ

ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?