ODI World Cup 2023: ಪಾಕಿಸ್ತಾನವಲ್ಲ, ಟೀಮ್ ಇಂಡಿಯಾದ ಅಸಲಿ ಎದುರಾಳಿಯನ್ನು ತಿಳಿಸಿದ ಗಂಗೂಲಿ..!

ICC World Cup 2023: ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ODI World Cup 2023: ಪಾಕಿಸ್ತಾನವಲ್ಲ, ಟೀಮ್ ಇಂಡಿಯಾದ ಅಸಲಿ ಎದುರಾಳಿಯನ್ನು ತಿಳಿಸಿದ ಗಂಗೂಲಿ..!
IND vs PAK
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 02, 2023 | 5:01 PM

ICC World Cup 2023: ಏಕದಿನ ವಿಶ್ವಕಪ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಕದನದ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ನ್ಯೂಝಿಲ್ಯಾಂಡ್ ಕಣಕ್ಕಿಳಿಯಲಿದೆ. ಇನ್ನು ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಹಾಗೆಯೇ ಅಕ್ಟೋಬರ್ 15 ರಂದು ನಡೆಯಲಿರುವ ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಕದನಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಈ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಆದರೆ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡದ ಅಸಲಿ ಎದುರಾಳಿ ಪಾಕಿಸ್ತಾನವಲ್ಲ ಎಂದು ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಪ್ರಕಾರ ಈ ಬಾರಿಯ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಭಾರತ ಪ್ರತಿಸ್ಪರ್ಧಿಯಲ್ಲ. ಏಕೆಂದರೆ ಇದುವರೆಗಿನ ಟೂರ್ನಿಗಳಲ್ಲಿ ಪಾಕ್ ವಿರುದ್ಧ ಭಾರತವೇ ಏಕಪಕ್ಷೀಯವಾಗಿ ಗೆಲ್ಲುತ್ತಾ ಬಂದಿದೆ. ಹೀಗಾಗಿ ಈ ಸಲ ಕೂಡ ಗೆಲ್ಲಲುವುದರಲ್ಲಿ ಅನುಮಾನವೇ ಇಲ್ಲ ಎಂದು ಗಂಗೂಲಿ ತಿಳಿಸಿದ್ದಾರೆ.

ಇಲ್ಲಿ ಭಾರತ ತಂಡದ ಅಸಲಿ ಎದುರಾಳಿ ಆಸ್ಟ್ರೇಲಿಯಾ. ಅತ್ಯುತ್ತಮ ಪ್ರತಿಸ್ಪರ್ಧಿಯಾಗಿರುವ ಆಸೀಸ್ ವಿರುದ್ಧ ಗೆಲ್ಲುವುದೇ ಭಾರತದ ಮುಂದಿರುವ ದೊಡ್ಡ ಸವಾಲು. ಹೀಗಾಗಿ ಟೀಮ್ ಇಂಡಿಯಾದ ಅತೀ ದೊಡ್ಡ ಎದುರಾಳಿ ಆಸ್ಟ್ರೇಲಿಯಾ ಎಂದು ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ವಿಶೇಷ ಎಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹೀಗಾಗಿಯೇ ಭಾರತ ತಂಡದ ಮೊದಲ ಪಂದ್ಯವೇ ಕುತೂಹಲದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ.

ಭಾರತ ತಂಡದ  ಸಂಪೂರ್ಣ ವೇಳಾಪಟ್ಟಿ:

  • ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್  (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)
  • ಭಾರತ vs ಅಫ್ಘಾನಿಸ್ತಾನ- 11 ಅಕ್ಟೋಬರ್ (ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ)
  • ಭಾರತ vs ಪಾಕಿಸ್ತಾನ- 15 ಅಕ್ಟೋಬರ್ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)
  • ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್ (ಎಂಸಿಎ ಸ್ಟೇಡಿಯಂ, ಪುಣೆ)
  • ಭಾರತ vs ನ್ಯೂಜಿಲೆಂಡ್- 22 ಅಕ್ಟೋಬರ್ (HPCA ಸ್ಟೇಡಿಯಂ, ಧರ್ಮಶಾಲಾ)
  • ಭಾರತ vs ಇಂಗ್ಲೆಂಡ್- 29 ಅಕ್ಟೋಬರ್ (ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ)
  • ಭಾರತ vs ಕ್ವಾಲಿಫೈಯರ್ 2- 2 ನವೆಂಬರ್ (ವಾಂಖೆಡೆ ಸ್ಟೇಡಿಯಂ, ಮುಂಬೈ)
  • ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್ (ಈಡನ್ ಗಾರ್ಡನ್ಸ್, ಕೋಲ್ಕತ್ತಾ)
  • ಭಾರತ vs ಕ್ವಾಲಿಫೈಯರ್ 1- 11 ನವೆಂಬರ್ (ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

Published On - 5:01 pm, Sun, 2 July 23

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ