AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗೆಲ್ಲುವ ತಂಡಕ್ಕೆ ಸಿಗುವ ಬಹುಮಾನದ ಹಣ ಎಷ್ಟು ಕೋಟಿ ಗೊತ್ತಾ?

WTC Final: ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಗೆದ್ದ ತಂಡವು ಭಾರಿ ಮೊತ್ತ 1.6 ಮಿಲಿಯನ್ ಯುಎಸ್ ಡಾಲರ್‌ಗಳನ್ನು ಪಡೆಯುತ್ತದೆ, ಅಂದರೆ 11.71 ಕೋಟಿ ರೂ. ಅದೇ ಸಮಯದಲ್ಲಿ, ರನ್ನರ್ ಅಪ್ ತಂಡಕ್ಕೆ 5.85 ಕೋಟಿ ರೂ. ಬಹುಮಾನವಾಗಿ ಸಿಗಲಿದೆ

WTC Final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗೆಲ್ಲುವ ತಂಡಕ್ಕೆ ಸಿಗುವ ಬಹುಮಾನದ ಹಣ ಎಷ್ಟು ಕೋಟಿ ಗೊತ್ತಾ?
ಕೇನ್ ವಿಲಿಯಮ್ಸನ್, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on: Jun 14, 2021 | 6:26 PM

Share

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಈಗ ಬಹಳ ಹತ್ತಿರದಲ್ಲಿದೆ. ಕಳೆದ ಎರಡು ವರ್ಷಗಳಿಂದ, ನಡೆಯುತ್ತಿರುವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಂದ್ಯಾವಳಿಯ ಫೈನಲ್ ಪಂದ್ಯಕ್ಕಾಗಿ ಎಲ್ಲರೂ ಬಹಳ ಸಮಯದಿಂದ ಕಾಯುತ್ತಿದ್ದಾರೆ. ವಿಶೇಷವಾಗಿ ಭಾರತ ಮತ್ತು ನ್ಯೂಜಿಲೆಂಡ್‌ನಂತಹ ಟೆಸ್ಟ್ ಶ್ರೇಯಾಂಕದ ಎರಡೂ ಉನ್ನತ ತಂಡಗಳ ಆಗಮನದೊಂದಿಗೆ, ಅದರ ಬಗ್ಗೆ ಉತ್ಸಾಹ ಮತ್ತು ಕುತೂಹಲ ಇನ್ನೂ ಹೆಚ್ಚಾಗಿದೆ. ಜೂನ್ 18 ರಿಂದ ಎರಡೂ ತಂಡಗಳ ಸ್ಪರ್ಧೆಯು ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ಪ್ರಾರಂಭವಾಗಲಿದೆ. ಪಂದ್ಯ ಮತ್ತು ಅದರ ಫಲಿತಾಂಶದ ಬಗ್ಗೆ ಉತ್ಸಾಹ ಮತ್ತು ಕಾಯುವಿಕೆ ಇರುವಷ್ಟರ ಮಟ್ಟಿಗೆ, ವಿಜೇತ ತಂಡಕ್ಕೆ ಏನು ಬಹುಮಾನ ಸಿಗುತ್ತದೆ ಎಂದು ತಿಳಿಯಲು ಅಷ್ಟೇ ಉತ್ಸುಕರಾಗಿದ್ದಾರೆ. ವಿಜೇತರಿಗೆ ಯಾವ ಟ್ರೋಫಿಯನ್ನು ನೀಡಲಾಗುವುದು? ಗೆದ್ದ ತಂಡಕ್ಕೆ ಸಿಗುವ ಬಹುಮಾನದ ಹಣವೆಷ್ಟು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವು ನಿಮಗಾಗಿ ಸಿದ್ಧವಾಗಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಅಂತಿಮ ಪಂದ್ಯವು ಸಾಮಾನ್ಯ ಟೆಸ್ಟ್ ಪಂದ್ಯದಂತೆ ಐದು ದಿನಗಳಿಗೆ ಸೀಮಿತವಾಗಿದೆ. ಆದಾಗ್ಯೂ, ಫೈನಲ್‌ನ ದೃಷ್ಟಿಯಿಂದ ಹೆಚ್ಚುವರಿ ದಿನದ ಹೆಚ್ಚುವರಿ ಅವಕಾಶವಿದೆ. ಇದರಿಂದಾಗಿ ಮಳೆ ಅಥವಾ ಇತರ ಕಾರಣಗಳಿಂದಾಗಿ ಐದು ದಿನಗಳಲ್ಲಿ ಯಾವುದಾದರೂ ಪರಿಣಾಮ ಬೀರಿದರೆ, ಅದನ್ನು ಆರನೇ ದಿನದಂದು ಪೂರ್ಣಗೊಳಿಸಬಹುದು. ಆದರೆ, ಉಭಯ ತಂಡಗಳೆರಡೂ ಗೆಲ್ಲಲು ಸಾಧ್ಯವಾಗದಿದ್ದರೆ ಮತ್ತು ಪಂದ್ಯವು ಡ್ರಾ ಆಗಿದ್ದರೆ, ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ ಎಂಬುದು ಸ್ಪಷ್ಟವಾಗಿದೆ.

ವಿಜೇತರಿಗೆ 11.71 ಕೋಟಿ ರೂ ಪಂದ್ಯಾವಳಿಯ ಸಂಘಟಕರಾದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸೋಮವಾರ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನ ಬಹುಮಾನದ ಹಣವನ್ನು ಬಹಿರಂಗಪಡಿಸಿದೆ. ಕ್ರಿಕೆಟ್ ವೆಬ್‌ಸೈಟ್ ಇಎಸ್‌ಪಿಎನ್-ಕ್ರಿಕ್ಇನ್‌ಫೊ ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೆಫ್ ಅಲಾರ್ಡಿಸ್ ಅವರನ್ನು ಉಲ್ಲೇಖಿಸಿ, ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಗೆದ್ದ ತಂಡವು ಭಾರಿ ಮೊತ್ತ 1.6 ಮಿಲಿಯನ್ ಯುಎಸ್ ಡಾಲರ್‌ಗಳನ್ನು ಪಡೆಯುತ್ತದೆ, ಅಂದರೆ 11.71 ಕೋಟಿ ರೂ. ಅದೇ ಸಮಯದಲ್ಲಿ, ರನ್ನರ್ ಅಪ್ ತಂಡಕ್ಕೆ $ 8 ಲಕ್ಷ ಅಂದರೆ 5.85 ಕೋಟಿ ರೂ. ಬಹುಮಾನವಾಗಿ ಸಿಗಲಿದೆ ಎಂದು ಹೇಳಿದ್ದಾರೆ.

ICC World Test Championship 1

ಚೊಚ್ಚಲ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್

ವಿಜೇತರಿಗೆ ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಪಿ ನೀಡಲಾಗುವುದು ಜಂಟಿ ವಿಜೇತ ಸಂದರ್ಭದಲ್ಲಿ, ಡ್ರಾ ಸಂದರ್ಭದಲ್ಲಿ ಜಂಟಿ ವಿಜೇತರಿಗೆ ಐಸಿಸಿ ಹೇಳಿದಂತೆ ಬಹುಮಾನದ ಹಣವನ್ನು ಸಮಾನವಾಗಿ ವಿಂಗಡಿಸಲಾಗುತ್ತದೆ. ಅಷ್ಟೇ ಅಲ್ಲ, ವಿಜೇತ ತಂಡಕ್ಕೆ ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿಯಾಗಿ ನೀಡಲಾಗುವುದು. ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ತಂಡಕ್ಕೆ ಈ ಚಾಂಪಿಯನ್‌ಶಿಪ್ ಮೇಸ್ ಅನ್ನು ಪ್ರತಿವರ್ಷ ನೀಡಲಾಗುತ್ತದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ