ಏಕೆಂದರೆ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ 185 ರನ್ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 181 ರನ್ಗಳಿಗೆ ಸರ್ವಪತನ ಕಂಡಿದೆ. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿದೆ. ಇನ್ನು ಈ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಟೀಮ್ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಮಾಡುವುದು ಅನಿವಾರ್ಯ ಎನ್ನಬಹುದು.