IND vs ENG 3rd Test: ನಮ್ಮವರೇ ಮಾಡಿದ ಎಡವಟ್ಟು: ಟೀಮ್ ಇಂಡಿಯಾ ಸೋಲಿಗೆ ಕಾರಣವಾಗಿದ್ದು ಈ ಮೂವರು
India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಲು ಈ ಮೂವರು ಆಟಗಾರರು ಪ್ರಮುಖ ಕಾರಣದಾದರು. ಈ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದರೆ, ಪಂದ್ಯದ ಫಲಿತಾಂಶ ವಿಭಿನ್ನವಾಗುತ್ತಿತ್ತು. ಈಗ ಮೂರನೇ ಪಂದ್ಯವನ್ನು ಸೋತ ನಂತರ, ಭಾರತ ತಂಡ ಸರಣಿಯಲ್ಲಿ 1-2 ಅಂತರದಿಂದ ಹಿನ್ನಡೆ ಅನುಭವಿಸಿದೆ.

ಬೆಂಗಳೂರು (ಜು. 14): ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ (Indian Cricket Team) 22 ರನ್‌ಗಳಿಂದ ಸೋಲು ಅನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಭಾರತಕ್ಕೆ ಗೆಲ್ಲಲು 193 ರನ್‌ಗಳ ಗುರಿ ನೀಡಿತ್ತು, ಇದಕ್ಕೆ ಪ್ರತಿಯಾಗಿ ಭಾರತ ತಂಡ 170 ರನ್ ಗಳಿಸಲಷ್ಟೇ ಶಕ್ತವಾಗಿ ಆಲೌಟ್ ಆಯಿತು. ರವೀಂದ್ರ ಅರ್ಧಶತಕದ ಏಕಾಂಗಿ ಹೋರಾಟ ಕೂಡ ವ್ಯರ್ಥವಾಯಿತು. ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಮತ್ತು ಕರುಣ್ ನಾಯರ್ ಪಂದ್ಯದಲ್ಲಿ ಭಾರತ ಪರ ತೀರಾ ಕಳಪೆ ಪ್ರದರ್ಶನ ನೀಡಿದರು. ಈ ಆಟಗಾರರು ತಂಡದ ಸೋಲಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದರೆ, ಪಂದ್ಯದ ಫಲಿತಾಂಶ ವಿಭಿನ್ನವಾಗುತ್ತಿತ್ತು. ಈಗ ಮೂರನೇ ಪಂದ್ಯವನ್ನು ಸೋತ ನಂತರ, ಭಾರತ ತಂಡ ಸರಣಿಯಲ್ಲಿ 1-2 ಅಂತರದಿಂದ ಹಿನ್ನಡೆ ಅನುಭವಿಸಿದೆ.
ಕರುಣ್ ನಾಯರ್
ದೇಶೀಯ ಕ್ರಿಕೆಟ್‌ನಲ್ಲಿ ಕರುಣ್ ನಾಯರ್ ಬಹಳಷ್ಟು ರನ್ ಗಳಿಸಿರಬಹುದು, ಆದರೆ ಇಂಗ್ಲೆಂಡ್ ಪ್ರವಾಸದಲ್ಲಿ ಅವರು ತಮ್ಮ ಪ್ರತಿಭೆಯನ್ನು ತೋರಿಸಲು ಸಾಧ್ಯವಾಗಲಿಲ್ಲ ಮತ್ತು ಸಂಪೂರ್ಣ ವಿಫಲರಾಗಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಮೂರು ಟೆಸ್ಟ್ ಪಂದ್ಯಗಳಲ್ಲಿ ಅವರು ಒಂದೇ ಒಂದು ಅರ್ಧಶತಕವನ್ನು ಗಳಿಸಿಲ್ಲ. ಮೂರನೇ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ, ಅವರು 3 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದರು, ಆದರೆ ಅವರ ಬ್ಯಾಟ್‌ನಿಂದ ಯಾವುದೇ ರನ್ ಬರಲಿಲ್ಲ.
ಕರುಣ್ ಮೊದಲ ಇನ್ನಿಂಗ್ಸ್‌ನಲ್ಲಿ 40 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಲು ಬಂದಾಗ, ಯಶಸ್ವಿ ಜೈಸ್ವಾಲ್ ಔಟಾಗಿದ್ದರು. ಹೀಗಾಗಿ ಕ್ರೀಸ್‌ನಲ್ಲಿ ಉಳಿಯಲೇ ಬೇಕಾದ ಜವಾಬ್ದಾರಿಯನ್ನು ಹೊಂದಿದ್ದರು. ದುರದೃಷ್ಟವಶಾತ್, ಅವರು ಎರಡನೇ ಇನ್ನಿಂಗ್ಸ್ನಲ್ಲೂ ಫೇಲ್ ಆದರು. ಟೀಮ್ ಇಂಡಿಯಾದ ದೋಣಿಯನ್ನು ಸಮುದ್ರದ ಮಧ್ಯದಲ್ಲಿ ಬಿಟ್ಟು ಪೆವಿಲಿಯನ್‌ಗೆ ಮರಳಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಗಳಿಸಿದ್ದು ಕೇವಲ 14 ರನ್.
ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ, ಕರುಣ್ ನಾಯರ್ ಭಾರತೀಯ ಟೆಸ್ಟ್ ತಂಡಕ್ಕೆ ಮರಳಿದರು. ಹೀಗಾಗಿ ಅವರು ಇಂಗ್ಲೆಂಡ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಭಾವಿಸಲಾಗಿತ್ತು, ಆದರೆ ಅದು ಆಗಲಿಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿ ಅವರು 6 ಇನ್ನಿಂಗ್ಸ್‌ಗಳಲ್ಲಿ ಒಟ್ಟು 117 ರನ್ ಗಳಿಸಿದ್ದಾರೆ, ಇದರಲ್ಲಿ ಅವರು ಒಮ್ಮೆ ಶೂನ್ಯಕ್ಕೆ ಔಟಾಗಿದ್ದಾರೆ.
IND vs ENG: ಜಡೇಜಾ ಏಕಾಂಗಿ ಹೋರಾಟ ವ್ಯರ್ಥ; ಲಾರ್ಡ್ಸ್ ಟೆಸ್ಟ್ ಸೋತ ಟೀಂ ಇಂಡಿಯಾ
ಯಶಸ್ವಿ ಜೈಸ್ವಾಲ್
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ವೈಫಲ್ಯ ಕಂಡರು ಮತ್ತು ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ, ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುತ್ತಿದ್ದಾಗ, ಅವರು 8 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ, ಜೋಫ್ರಾ ಆರ್ಚರ್ ಅವರ ಬೌನ್ಸ್ ಬಾಲ್ಗೆ ಕೆಟ್ಟ ಹೊಡೆತ ಹೊಡೆದು 7 ಎಸೆತಗಳಲ್ಲಿ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದರು.
ಶುಭ್ಮನ್ ಗಿಲ್
ಶುಭ್ಮನ್ ಗಿಲ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು ಮತ್ತು ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಸಾಕಷ್ಟು ರನ್ ಗಳಿಸಿದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ, ಅವರು ತಮ್ಮ ಲಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಹೀನಾಯವಾಗಿ ಔಟಾದರು. ಮೂರನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅವರು 16 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಒಂದು ರನ್ ಗಳಿಸಲು ಸಾಧ್ಯವಾಯಿತು. ಪ್ರಮುಖವಾದ ಎರಡನೇ ಇನ್ನಿಂಗ್ಸ್‌ನಲ್ಲಿ ಗಿಲ್ ಆಡಲೇ ಬೇಕಿತ್ತು. ಆದರೆ ಬ್ರೈಡನ್ ಕಾರ್ಸೆ ಅವರ ಚೆಂಡನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಎಲ್ಬಿಡಬ್ಲ್ಯೂ ಆಗಿ ಪೆವಿಲಿಯನ್‌ಗೆ ಮರಳಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:08 pm, Mon, 14 July 25