IND vs ENG: ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಗಿಲ್​ಗೆ ಗಾಯ! ರಾಹುಲ್- ಮಾಯಾಂಕ್​ಗೆ ಅವಕಾಶ ಸಿಗುವ ಸಾಧ್ಯತೆ

IND vs ENG: ಗಿಲ್ ಅವರ ನಿರ್ಗಮನದಿಂದ ಇತರ ಇಬ್ಬರು ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಲಾಭ ಪಡೆಯಬಹುದು. ಈ ಇಬ್ಬರಲ್ಲಿ ಯಾರಾದರೂ ಒಬ್ಬರು ಅಂತಿಮ 11 ಆಟಗಾರರ ಪಟ್ಟಿ ಪ್ರವೇಶಿಸಬಹುದು.

IND vs ENG: ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಗಿಲ್​ಗೆ ಗಾಯ! ರಾಹುಲ್- ಮಾಯಾಂಕ್​ಗೆ ಅವಕಾಶ ಸಿಗುವ ಸಾಧ್ಯತೆ
ಶುಭ್​ಮನ್ ಗಿಲ್
Follow us
ಪೃಥ್ವಿಶಂಕರ
| Updated By: Skanda

Updated on: Jul 01, 2021 | 9:02 AM

ಟೀಂ ಇಂಡಿಯಾ ಪ್ರಸ್ತುತ ಇಂಗ್ಲೆಂಡ್‌ನಲ್ಲಿದೆ, ಅಲ್ಲಿ ಆಗಸ್ಟ್ 4 ರಿಂದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಬೇಕಾಗಿದೆ. ಆದರೆ ಈ ಮಹತ್ವದ ಸರಣಿಗೂ ಮೊದಲು ಭಾರತವು ದೊಡ್ಡ ಹಿನ್ನಡೆ ಎದುರಿಸುತ್ತಿದೆ. ಭಾರತದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಈ ಸರಣಿಯಿಂದ ಹೊರಬಿಳುವ ಆತಂಕ ಮನೆಮಾಡಿದೆ. ಗಿಲ್​ ಇಂಜುರಿಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಆಂತರಿಕ ಗಾಯವಾಗಿದ್ದು, ಇದರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ. ಗಿಲ್ ತಂಡದಿಂದ ಹೊರನಡೆದರೆ, ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಮುಖ್ಯ ತಂಡಕ್ಕೆ ಬರಲು ದಾರಿ ತೆರೆಯಬಹುದು. ಅವರು ತಂಡದೊಂದಿಗೆ ಇಂಗ್ಲೆಂಡ್‌ಗೆ ಸ್ಟ್ಯಾಂಡ್-ಬೈ ಆಗಿ ಹೋಗಿದ್ದಾರೆ.

ಗಿಲ್‌ಗೆ ಸಂಬಂಧಿಸಿದಂತೆ, ಅವರಿಗೆ ಯಾವ ರೀತಿಯ ಇಂಜುರಿಯಾಗಿದೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ ಎಂಬುದು ಸಹ ಸ್ಪಷ್ಟವಾಗಿಲ್ಲ. ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ಗಿಲ್ ಇಡೀ ಟೆಸ್ಟ್ ಪ್ರವಾಸದಿಂದ ಹೊರಗುಳಿಯುವ ಸಾಧ್ಯತೆಯಿದೆ. ಆದರೂ ಟೆಸ್ಟ್​ ಸರಣಿಗೆ ಇನ್ನೂ ಒಂದು ತಿಂಗಳು ಕಾಲಾವಕಾಶವಿದೆ. ಗಾಯವು ಗಂಭೀರವಾಗಿರದಿದ್ದರೆ ಗಿಲ್ ಚೇರಿಸಿಕೊಂಡು ಮತ್ತೆ ಅಖಾಡಕ್ಕಿಳಿಯುವ ಸಾಧ್ಯತೆಯಿದೆ.

ಸ್ನಾಯು ಸೆಳೆತಕ್ಕೊಳಗಾಗಿರುವ ಗಿಲ್ ಶುಭ್​ಮನ್ ಸ್ನಾಯು ಸೆಳೆತದ ಒತ್ತಡದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ, ಅದು ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಅವರಿಗೆ ಯಾವಾಗ ಈ ಗಾಯವಾಯಿತು ಎಂಬುದು ಸ್ಪಷ್ಟವಾಗಿಲ್ಲ. ಅವರು ಪ್ರಸ್ತುತ ಇಂಗ್ಲೆಂಡ್‌ನಲ್ಲಿ ಫೀಸಿಯೋ ಆದ ನಿತಿನ್ ಪಟೇಲ್, ಕಂಡೀಷನಿಂಗ್ ತರಬೇತುದಾರ ಸೋಹಮ್ ದೇಸಾಯಿ ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಐದು ಪಂದ್ಯಗಳ ಟೆಸ್ಟ್ ಸರಣಿಯಾಗಿದ್ದು, ಸೆಪ್ಟೆಂಬರ್​ವರೆಗೆ ನಡೆಯುತ್ತದೆ, ಸರಣಿಯ ಕೊನೆಯ ಟೆಸ್ಟ್​ಗೆ ಗಿಲ್ ಪುನರಾಗಮನ ಮಾಡುವ ಸಾಧ್ಯತೆಯಿದೆ.

ಮಾಯಾಂಕ್ ಅಗರ್ವಾಲ್, ಕೆ.ಎಲ್.ರಾಹುಲ್ಗೆ ಅವಕಾಶ ಗಿಲ್ ಅವರ ನಿರ್ಗಮನದಿಂದ ಇತರ ಇಬ್ಬರು ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಲಾಭ ಪಡೆಯಬಹುದು. ಈ ಇಬ್ಬರಲ್ಲಿ ಯಾರಾದರೂ ಒಬ್ಬರು ಅಂತಿಮ 11 ಆಟಗಾರರ ಪಟ್ಟಿ ಪ್ರವೇಶಿಸಬಹುದು ಮತ್ತು ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ತೆರೆಯಬಹುದು.

ಇದನ್ನೂ ಓದಿ: ಭಾರತೀಯ ಆಟಗಾರರು ಕ್ರಿಕೆಟ್​ನ ಶ್ರೇಷ್ಠ ರಾಯಭಾರಿಗಳು! ಟೀಂ ಇಂಡಿಯಾವನ್ನು ಶ್ಲಾಘಿಸಿದ ಕೇನ್ ವಿಲಿಯಮ್ಸನ್

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್