AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಯುಜ್ವೇಂದ್ರ ಚಹಲ್ ಮೇಲೆ ಎಲ್ಲರ ಕಣ್ಣು: ಹೊಸ ದಾಖಲೆ ಬರೆಯುವತ್ತ ಟೀಮ್ ಇಂಡಿಯಾ ಸ್ಪಿನ್ನರ್

ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹೊಸ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಚಹಲ್ ಒಟ್ಟು 55 ಪಂದ್ಯಗಳನ್ನು ಆಡಿದ್ದು 94 ವಿಕೆಟ್ ಪಡೆದಿದ್ದಾರೆ.

IND vs SL: ಯುಜ್ವೇಂದ್ರ ಚಹಲ್ ಮೇಲೆ ಎಲ್ಲರ ಕಣ್ಣು: ಹೊಸ ದಾಖಲೆ ಬರೆಯುವತ್ತ ಟೀಮ್ ಇಂಡಿಯಾ ಸ್ಪಿನ್ನರ್
Yuzvendra Chahal
TV9 Web
| Updated By: Vinay Bhat|

Updated on: Jul 20, 2021 | 9:29 AM

Share

ಕೊಲಂಬೊದ ಪ್ರೆಮದಾಸ ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ಶ್ರೀಲಂಕಾ (India vs Sri lanka) ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ 7 ವಿಕೆಟ್​ಗಳ ಜಯ ಸಾಧಿಸಿ 1-0 ಮುನ್ನಡೆ ಸಾಧಿಸಿರುವ ಧವನ್ ನೇತೃತ್ವದ ಟೀಮ್ ಇಂಡಿಯಾಕ್ಕೆ (Team India) ಇನ್ನೊಂದು ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಲಂಕಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಉಳಿದಿರುವ ಎರಡೂ ಪಂದ್ಯ ಗೆಲ್ಲಬೇಕಾದ ಒತ್ತಡದಲ್ಲಿದೆ.

ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹೊಸ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಚಹಲ್ ಒಟ್ಟು 55 ಪಂದ್ಯಗಳನ್ನು ಆಡಿದ್ದು 94 ವಿಕೆಟ್ ಪಡೆದಿದ್ದಾರೆ. ಇಂದಿನ ಪಂದ್ಯದಲ್ಲಿ ಚಹಲ್ 6 ವಿಕೆಟ್ ಕಿತ್ತರೆ ಓಡಿಐನಲ್ಲಿ ಭಾರತ ಪರ ಅತಿ ವೇಗವಾಗಿ 100 ವಿಕೆಟ್ ಪಡೆದ ಸಾಧನೆ ಮಾಡಲಿದ್ದಾರೆ. ಈಗಾಗಲೇ ಈ ದಾಖಲೆ ಮೊಹಮ್ಮದ್ ಶಮಿ ಹೆಸರಲ್ಲಿದೆ.

ಚಹಲ್​ಗೆ ಎಲ್ಲಾದರು ಇಂದಿನ ಪಂದ್ಯದಲ್ಲಿ ಈ ಸಾಧನೆ ಮಾಡಲು ಸಾಧ್ಯವಾಗದೆ ಇದ್ದು ಮುಂದಿನ ಪಂದ್ಯದಲ್ಲಿ 100 ವಿಕೆಟ್​ ಪಡೆದರೆ ಜಸ್​ಪ್ರೀತ್ ಬುಮ್ರಾ ಜೊತೆ ಸ್ಥಾನ ಹಂಚಿಕೊಳ್ಳಲಿದ್ದಾರೆ. ಬುಮ್ರಾ 57ನೇ ಏಕದಿನ ಪಂದ್ಯದಲ್ಲಿ 100 ವಿಕೆಟ್ ಕಿತ್ತ ಸಾಧನೆ ಮಾಡಿದ್ದರು.

ಚಹಾಲ್ ಸೀಮಿತ ಓವರ್​​ನ ಕ್ರಿಕೆಟ್​ನಲ್ಲಿ ಒಟ್ಟು ಎರಡು ಬಾರಿ 6 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಚಹಾಲ್ ಅವರ ಅತ್ಯುತ್ತಮ ಪ್ರದರ್ಶನ 42 ರನ್​ಗೆ 6 ವಿಕೆಟ್ ಕಿತ್ತಿರುವುದು. ಟಿ-20 ಯಲ್ಲೂ ಚಹಾಲ್ 4 ಓವರ್ ಬೌಲಿಂಗ್ ಮಾಡಿ 6 ವಿಕೆಟ್ ಪಡೆದಿರುವುದು ವಿಶೇಷ.

ಇನ್ನೂ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಲಂಕಾ ವಿರುದ್ಧ 93 ಏಕದಿನ ಪಂದ್ಯ ಗೆದ್ದ ಸಾಧನೆ ಮಾಡಲಿದೆ. ಈ ಮೂಲಕ ಒಂದು ತಂಡದ ವಿರುದ್ಧ ಅತಿ ಹೆಚ್ಚು ಪಂದ್ಯವನ್ನು ಗೆದ್ದ ಟೀಮ್ ಭಾರತ ಆಗಲಿದ್ದು, ಇದು ವಿಶ್ವ ದಾಖಲೆಯಾಗಲಿದೆ. ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧವೂ ಭಾರತ 55 ಏಕದಿನ ಪಂದ್ಯ ಗೆದ್ದ ಸಾಧನೆ ಹೊಂದಿದೆ.

ಮೊದಲ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಗೆದ್ದು ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಇಂದಿನ ಪಂದ್ಯವನ್ನೂ ಜಯಿಸಿ ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ. ಇತ್ತ ಸಿಂಹಳೀಯರಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆದ್ದರೆ ಮಾತ್ರ ಸರಣಿ ಆಸೆ ಜೀವಂತವಾಗಿರಲಿದೆ. ಹೀಗಾಗಿ ಪ್ರೇಮದಾಸ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯವಾಗುವ ಎಲ್ಲಾ ಲಕ್ಷಣಗಳಿವೆ.

IND vs SL: ವಿಶ್ವ ದಾಖಲೆಯ ಹೊಸ್ತಿಲಲ್ಲಿ ಟೀಮ್ ಇಂಡಿಯಾ: ಇಂದಿನ ಪಂದ್ಯ ಗೆದ್ದರೆ ಏನಾಗಲಿದೆ ಗೊತ್ತೇ?

ಭಾರತ ಟಿ-20 ವಿಶ್ವಕಪ್​ ಗೆಲ್ಲಬೇಕಾದರೆ ಇಂಥಹ ಆಟಗಾರರು ತಂಡದಲ್ಲಿರಬೇಕು ಎಂದ ಹರ್ಭಜನ್

(Ind vs SL 2nd ODI Can Yuzvendra Chahal equal Mohammed Shamis huge India record)

ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು