AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ನೆಲದಲ್ಲಿ ಅಭ್ಯಾಸ ಆರಂಭಿಸಿದ ಭಾರತದ ಯುವ ಪಡೆ; ಗುರು ದ್ರಾವಿಡ್, ನಾಯಕ ಧವನ್ ಸಾಥ್

IND vs SL: ಭಾರತ ಮತ್ತು ಶ್ರೀಲಂಕಾ ನಡುವೆ ಮೊದಲ ಏಕದಿನ ಪಂದ್ಯ ಜುಲೈ 13 ರಿಂದ ನಡೆಯಲಿದೆ. ಇದಕ್ಕೂ ಮೊದಲು ಭಾರತ ತಂಡವು ಮೈದಾನದಲ್ಲಿ ತರಬೇತಿಯಲ್ಲಿ ನಿರತವಾಗಿದೆ.

IND vs SL: ಲಂಕಾ ನೆಲದಲ್ಲಿ ಅಭ್ಯಾಸ ಆರಂಭಿಸಿದ ಭಾರತದ ಯುವ ಪಡೆ; ಗುರು ದ್ರಾವಿಡ್, ನಾಯಕ ಧವನ್ ಸಾಥ್
ಗುರು ದ್ರಾವಿಡ್, ನಾಯಕ ಧವನ್
ಪೃಥ್ವಿಶಂಕರ
| Updated By: Skanda|

Updated on: Jul 03, 2021 | 9:27 AM

Share

ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಮತ್ತು ನಾಯಕ ವಿರಾಟ್ ಕೊಹ್ಲಿ ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ. ಏತನ್ಮಧ್ಯೆ, ಭಾರತದ ಮತ್ತೊಂದು ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸದಲ್ಲಿದೆ. ಶ್ರೀಲಂಕಾ ಪ್ರವಾಸದ ವೇಳೆ ರಾಹುಲ್ ದ್ರಾವಿಡ್ ಕೋಚ್ ಮತ್ತು ಶಿಖರ್ ಧವನ್ ನಾಯಕನ ಜವಬ್ದಾರಿ ನಿರ್ವಹಿಸುತ್ತಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಮೈದಾನದಲ್ಲಿ ಆಟಗಾರರ ತರಬೇತಿ ಆರಂಭಿಸಿದ್ದಾರೆ. ಯುವ ಪಡೆ ತರಬೇತಿ ನಡೆಸುತ್ತಿರುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ. ಮುಂದಿನ ಆಗಸ್ಟ್‌ನಿಂದ ಭಾರತ ತಂಡವು ಇಂಗ್ಲೆಂಡ್‌ನಲ್ಲಿ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಇದರೊಂದಿಗೆ ಭಾರತೀಯ ಕ್ರಿಕೆಟ್‌ನ ಹಿರಿಯ ಆಟಗಾರರು ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ. ಶ್ರೀಲಂಕಾ ಪ್ರಸ್ತುತ ಅನುಭವಿ ಆಟಗಾರರು ಮತ್ತು ಯುವ ಮುಖಗಳನ್ನು ಹೊಂದಿರುವ ತಂಡವಾಗಿದೆ. ಅಲ್ಲಿ ಶ್ರೀಲಂಕಾ ವಿರುದ್ಧ 3 ಏಕದಿನ ಮತ್ತು 3 ಟಿ 20 ಪಂದ್ಯಗಳ ಸರಣಿಯನ್ನು ಉಭಯ ದೇಶಗಳ ನಡುವೆ ಆಡಲಾಗುವುದು.

ಭಾರತ ಮತ್ತು ಶ್ರೀಲಂಕಾ ನಡುವೆ ಮೊದಲ ಏಕದಿನ ಪಂದ್ಯ ಜುಲೈ 13 ರಿಂದ ನಡೆಯಲಿದೆ. ಇದಕ್ಕೂ ಮೊದಲು ಭಾರತ ತಂಡವು ಮೈದಾನದಲ್ಲಿ ತರಬೇತಿಯಲ್ಲಿ ನಿರತವಾಗಿದೆ. ರಾಹುಲ್ ದ್ರಾವಿಡ್ ಅವರು ಕೋಚ್ ಹುದ್ದೆಯಲ್ಲಿ ನಿಜವಾದ ಕೆಲಸವನ್ನು ಆರಂಭ ಮಾಡಿದ್ದಾರೆ. ಓಟದಿಂದ ಹಿಡಿದು ಎಲ್ಲಾ ವ್ಯಾಯಮವನ್ನು ಆಟಗಾರರು ಮೈದಾನದಲ್ಲಿ ಮಾಡುತ್ತಿರುವುದು ಫೋಟೋಗಳಲ್ಲಿ ಕಂಡುಬರುತ್ತಿದೆ. ಸರಣಿಯ ಮೊದಲು ಆಟಗಾರರನ್ನು ತಯಾರಿಸಲು ದ್ರಾವಿಡ್ ಸತತ ಪ್ರಯತ್ನ ಮಾಡುತ್ತಿದ್ದಾರೆ.

ಟಿ 20 ವಿಶ್ವಕಪ್‌ಗೆ ಮೊದಲು ಪ್ರಮುಖ ಸರಣಿ ಟಿ 20 ವಿಶ್ವಕಪ್‌ಗೆ ಮುನ್ನ ಭಾರತ ತಂಡಕ್ಕೆ ಇದು ಕೊನೆಯ ಟಿ 20 ಸರಣಿಯಾಗಲಿದೆ. ನಂತರ ಭಾರತ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ನೇರವಾಗಿ ವಿಶ್ವಕಪ್‌ಗೆ ಹೋಗುತ್ತದೆ. ಇದಕ್ಕೂ ಮುನ್ನ ಪೃಥ್ವಿ ಶಾ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ ಶ್ರೀಲಂಕಾ ವಿರುದ್ಧದ ಎರಡೂ ಸರಣಿಗಳು ಮುಖ್ಯವಾಗಿವೆ. ವಿಶ್ವಕಪ್‌ಗೆ ಸ್ಥಾನ ಪಡೆಯಲು ಅವರಿಗೆ ಈ ಸರಣಿ ಮುಖ್ಯವಾಗಿದೆ. ಆದರೆ, ಇದಕ್ಕೂ ಮುನ್ನ ಭಾರತೀಯ ಆಟಗಾರ ಐಪಿಎಲ್‌ನ ಮುಂದಿನ ಪಂದ್ಯಗಳಲ್ಲಿ ಆಡಲಿದ್ದಾರೆ. ಐಪಿಎಲ್ ಮತ್ತು ಟಿ 20 ವಿಶ್ವಕಪ್‌ನಲ್ಲಿ ಭಾಗವಹಿಸಲು ಕ್ರಿಕೆಟಿಗರು ಯುಎಇಗೆ ಆಗಮಿಸಲಿದ್ದಾರೆ.

ಟೀಮ್ ಇಂಡಿಯಾದಲ್ಲಿ ಆರು ಆಟಗಾರರು ಆಯ್ಕೆಯಾಗಿಲ್ಲ. ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿನ ಪರಾಕ್ರಮದಿಂದಾಗಿ ಶ್ರೀಲಂಕಾ ವಿರುದ್ಧದ ಸರಣಿಗೆ ಇವರು ಆಯ್ಕೆಯಾಗಿದ್ದಾರೆ. ಇವರುಗಳಲ್ಲಿ ಚೇತನ್ ಸಕಾರಿಯಾ, ರಿತುರಾಜ್ ಗೈಕ್ವಾಡ್, ಕೃಷ್ಣಪ್ಪ ಗೌತಮ್, ದೇವದತ್ ಪಡಿಕ್ಕಲ್, ವರುಣ್ ಚಕ್ರವರ್ತಿ ಮತ್ತು ನಿತೀಶ್ ರಾಣಾ ಸೇರಿದ್ದಾರೆ.

ಇದನ್ನೂ ಓದಿ: ODI Records: ಏಕದಿನ ಕ್ರಿಕೆಟ್​ನಲ್ಲಿ ವಿಶಿಷ್ಟ ದಾಖಲೆ ಹೊಂದಿರುವ 3 ತಂಡಗಳಿವು! ಇದರಲ್ಲಿ ಭಾರತವೂ ಸೇರಿದೆ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ