AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಶ್ರೀಲಂಕಾ ಸರಣಿಯ ನೂತನ ವೇಳಾಪಟ್ಟಿ ಪ್ರಕಟ; ಪಂದ್ಯ ಆರಂಭವಾಗುವ ಸಮಯವೂ ಬದಲಾಗಿದೆ

IND vs SL: ದ್ವಿಪಕ್ಷೀಯ ಸರಣಿಯ ಏಕದಿನ ಪಂದ್ಯಗಳು ಮಧ್ಯಾಹ್ನ 2: 30 ಕ್ಕೆ ಬದಲಾಗಿ ಮಧ್ಯಾಹ್ನ 3:00 ಗಂಟೆಗೆ ಪ್ರಾರಂಭವಾಗುತ್ತವೆ. ಟಿ 20 ಐ ಪಂದ್ಯಗಳು ರಾತ್ರಿ 8:00 ಗಂಟೆಗೆ ಆರಂಭವಾಗಲಿವೆ.

IND vs SL: ಭಾರತ- ಶ್ರೀಲಂಕಾ ಸರಣಿಯ ನೂತನ ವೇಳಾಪಟ್ಟಿ ಪ್ರಕಟ; ಪಂದ್ಯ ಆರಂಭವಾಗುವ ಸಮಯವೂ ಬದಲಾಗಿದೆ
ಭಾರತ-ಶ್ರೀಲಂಕಾ
TV9 Web
| Edited By: |

Updated on:Jul 12, 2021 | 6:48 PM

Share

ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿಪಕ್ಷೀಯ ಸರಣಿಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ, ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಉಭಯ ತಂಡಗಳ ನಡುವೆ ನಡೆಯಲಿರುವ ಟಿ 20 ಅಂತರರಾಷ್ಟ್ರೀಯ ಮತ್ತು ಏಕದಿನ ಪಂದ್ಯಗಳು (ಒಡಿಐ) ನಡೆಯುವ ಬದಲಿ ಸಮಯವನ್ನು ಹಂಚಿಕೊಂಡಿದೆ. ಶ್ರೀಲಂಕಾ ಕ್ರಿಕೆಟ್ ತಂಡದ ಶಿಬಿರದಲ್ಲಿ ಕೋವಿಡ್-19 ಸೋಂಕು ಏಕಾಏಕಿ ಕಂಡುಬಂದ ನಂತರ ಭಾರತ ಮತ್ತು ಆತಿಥೇಯ ಶ್ರೀಲಂಕಾ ನಡುವಿನ ಏಕದಿನ ಸರಣಿಯನ್ನು ಮುಂದೂಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇತ್ತೀಚೆಗೆ ದೃಢಪಡಿಸಿತ್ತು.

ಸೋಮವಾರ, ಶ್ರೀಲಂಕಾ ಕ್ರಿಕೆಟ್‌ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್​ನಲ್ಲಿ, ಶಿಖರ್ ಧವನ್ ನೇತೃತ್ವದ ಟೀಮ್ ಇಂಡಿಯಾ ಮತ್ತು ಆತಿಥೇಯ ಶ್ರೀಲಂಕಾ ನಡುವೆ ನಡೆಯಲಿರುವ ಪಂದ್ಯಗಳ ಸಮಯದ ಬದಲಾವಣೆಯನ್ನು ಬಹಿರಂಗಪಡಿಸಿದೆ. ಪೋಸ್ಟ್ ಪ್ರಕಾರ, ದ್ವಿಪಕ್ಷೀಯ ಸರಣಿಯ ಏಕದಿನ ಪಂದ್ಯಗಳು ಮಧ್ಯಾಹ್ನ 2: 30 ಕ್ಕೆ ಬದಲಾಗಿ ಮಧ್ಯಾಹ್ನ 3:00 ಗಂಟೆಗೆ ಪ್ರಾರಂಭವಾಗುತ್ತವೆ. ಟಿ 20 ಐ ಪಂದ್ಯಗಳು ರಾತ್ರಿ 8:00 ಗಂಟೆಗೆ ಆರಂಭವಾಗಲಿವೆ.

ಟಿ 20 ಪಂದ್ಯಗಳು ಸಂಜೆ 7:00 ಗಂಟೆಗೆ ನಡೆಯಬೇಕಿತ್ತು ಈ ಮೊದಲು ಉಭಯ ರಾಷ್ಟ್ರಗಳ ನಡುವಿನ ಟಿ 20 ಪಂದ್ಯಗಳು ಸಂಜೆ 7:00 ಗಂಟೆಗೆ ನಡೆಯಬೇಕಿತ್ತು. ಆದರೆ ಕೊರೊನಾ ಸೋಂಕು ಪತ್ತೆಯಾದ ನಂತರ ಉಭಯ ತಂಡಗಳ ನಡುವಿನ ದ್ವಿಪಕ್ಷೀಯ ಸರಣಿಯನ್ನು ಮುಂದೂಡಿದ ನಂತರ ಏಕದಿನ ಮತ್ತು ಟಿ 20 ಐ ಸರಣಿಯ ಬಗ್ಗೆ ಇತ್ತೀಚಿನ ಬೆಳವಣಿಗೆಗಳು ಈಗ ಹೊರ ಬಂದಿವೆ. ರಾಹುಲ್ ದ್ರಾವಿಡ್ ತರಬೇತುದಾರರಾಗಿ, ಧವನ್ ನೇತೃತ್ವದ ಎರಡನೇ ದರ್ಜೆ ತಂಡವು ಜುಲೈ 18 ರಿಂದ ಮೂರು ಟಿ 20 ಐ ಮತ್ತು ಆತಿಥೇಯ ಶ್ರೀಲಂಕಾದೊಂದಿಗೆ ಏಕದಿನ ಪಂದ್ಯಗಳನ್ನು ಆಡಲಿದೆ.

ನಮ್ಮ ವೈದ್ಯಕೀಯ ತಂಡವು ಎಸ್‌ಎಲ್‌ಸಿಯ ವೈದ್ಯರ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಸರಣಿಯು ನಡೆಯಲು ಸಹಾಯ ಮಾಡುವ ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದೆ. ಮುಂದಿನ ದಿನಗಳಲ್ಲಿ ಉಭಯ ರಾಷ್ಟ್ರಗಳು ಉತ್ಸಾಹಭರಿತ ಪ್ರದರ್ಶನವನ್ನು ನೀಡುತ್ತವೆ ಎಂದು ಬಿಸಿಸಿಐ ಕಾರ್ಯದರ್ಶಿ ಜೇ ಷಾ ಹೇಳಿದ್ದಾರೆ.

ಧವನ್ ನೇತೃತ್ವದ ಟೀಮ್ ಇಂಡಿಯಾ ಜುಲೈ 18 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ತಮ್ಮ ಶ್ರೀಲಂಕಾ ಪ್ರವಾಸವನ್ನು ಕಿಕ್‌ಸ್ಟಾರ್ಟ್ ಮಾಡಲಿದೆ. ನಂತರ ಜುಲೈ 25 ರಿಂದ ಜುಲೈ 29 ರವರೆಗೆ ಟಿ 20 ಐ ಸರಣಿಯನ್ನು ಆಡಲಿದೆ. ಏಕದಿನ ಮತ್ತು ಟಿ 20 ಐ ಸರಣಿಯ ಎಲ್ಲಾ ಪಂದ್ಯಗಳು ಪ್ರಸಿದ್ಧ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನೂ ಓದಿ:IND vs SL: ಭಾರತ- ಶ್ರೀಲಂಕಾ ಸರಣಿಗೂ ಮುನ್ನ ಲಂಕಾ ಕ್ರಿಕೆಟಿಗರಿಗೆ ಕೋವಿಡ್ ಟೆಸ್ಟ್; ಫಲಿತಾಂಶ ಹೀಗಿದೆ

Published On - 6:46 pm, Mon, 12 July 21

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ