AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಸಿಕ್ಸ್, 8 ಬೌಂಡರಿ ..ಪವರ್​ಪ್ಲೇನಲ್ಲಿ ದಾಖಲೆಯ ರನ್ ಕಲೆಹಾಕಿದ ಟೀಂ ಇಂಡಿಯಾ..!

ದೆಹಲಿಯಲ್ಲಿ ಭಾರತ-ಅಫ್ಘಾನಿಸ್ತಾನ T20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಶತಕ ಹಾಗೂ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 100 ರನ್‌ ಸೇರಿಸಿ, ಕೇವಲ 6 ಓವರ್‌ಗಳಲ್ಲಿ ಟೀಂ ಇಂಡಿಯಾವನ್ನು 100 ರನ್ ಗಡಿ ದಾಟಿಸಿತು. ಅಂತರರಾಷ್ಟ್ರೀಯ T20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಇದು ಹೊಸ ದಾಖಲೆಯಾಗಿದೆ, ಇವರಿಬ್ಬರ ಆಕ್ರಮಣಕಾರಿ ಆಟ ಭಾರತಕ್ಕೆ ಭರ್ಜರಿ ಆರಂಭ ನೀಡಿತು.

ಪೃಥ್ವಿಶಂಕರ
|

Updated on:Sep 17, 2026 | 8:21 PM

Share
ದೆಹಲಿಯ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬೌಲಿಂಗ್‌ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾಕ್ಕೆ ಸ್ಫೋಟಕ ಆರಂಭ ಸಿಕ್ಕಿದೆ. ಆರಂಭಿಕರಿಬ್ಬರು ಒಟ್ಟಾಗಿ ಮೊದಲ ವಿಕೆಟ್​ಗೆ ದಾಖಲೆಯ 100 ರನ್ ಕಲೆಹಾಕಿದ್ದಾರೆ(PC-BCCI).

1 / 5
ಎಂದಿನಂತೆ ಇನ್ನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಮೊದಲ ಓವರ್​ನಿಂದಲೇ ಬೌಂಡರಿಗಳ ಮಳೆಗರೆಯಲು ಶುರು ಮಾಡಿದರು. ಇದರ ಪರಿಣಾಮವಾಗಿ ಟೀಂ ಇಂಡಿಯಾ ಕೇವಲ 4 ಓವರ್​ಗಳಲ್ಲಿ 50 ರನ್​ಗಳ ಗಡಿ ದಾಟಿತು. ಅಲ್ಲದೆ ಈ ಜೋಡಿ ಕೇವಲ 21 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟವನ್ನು ಪೂರ್ಣಗೊಳಿಸಿತು(PC-BCCI).

2 / 5
ಇತ್ತ ಸಂಜು ಸ್ಯಾಮ್ಸನ್​ಗಿಂತಲೂ ಹೆಚ್ಚು ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಕೇವಲ 16 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅವರ ಅರ್ಧಶತಕದ ಹಾದಿಯಲ್ಲಿ ಐದು ಸಿಕ್ಸರ್‌ಗಳು ಮತ್ತು ಐದು ಬೌಂಡರಿಗಳು ಸೇರಿದ್ದವು. ಅರ್ಧಶತಕದ ಬಳಿಕ ಮತ್ತಷ್ಟು ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ ಅಭಿಷೇಕ್ ತಮ್ಮ ಶತಕವನ್ನು ಪೂರೈಸಿದರು(PC-BCCI).

3 / 5
ಇವರಿಬ್ಬರ ಹೊಡಿಬಡಿ ಆಟದಿಂದಾಗಿ ಟೀಂ ಇಂಡಿಯಾ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ ಪ್ಲೇನಲ್ಲಿ 100 ರನ್​ಗಳ ಗಡಿ ದಾಟಿತು. ಇದರಲ್ಲಿ ಉಭಯ ಆಟಗಾರರಿಂದ 10 ಭರ್ಜರಿ ಸಿಕ್ಸರ್ ಹಾಗೂ 8 ಬೌಂಡರಿಗಳು ಸೇರಿದ್ದವು. ಅಂದರೆ ಇವರಿಬ್ಬರು ಕೇವಲ ಬೌಂಡರಿಗಳಿಂದಲೇ 92 ರನ್ ಕಲೆಹಾಕಿದರು(PC-BCCI).

4 / 5
ಇದರೊಂದಿಗೆ ಈ ಜೋಡಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ ದಾಖಲೆಯನ್ನು ಬರೆಯಿತು. ಇದಕ್ಕೂ ಮೊದಲು ಟೀಂ ಇಂಡಿಯಾ 2025 ರಲ್ಲಿ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 1 ವಿಕೆಟ್ ನಷ್ಟಕ್ಕೆ 95 ರನ್ ಕಲೆಹಾಕಿತ್ತು. ಅದು ಈವರೆಗಿನ ದಾಖಲೆಯಾಗಿತ್ತು(PC-BCCI).

5 / 5

Published On - 8:20 pm, Thu, 17 September 26

Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​

ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು

ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ

‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು

ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ

ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್

2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ

ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ