AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hockey Asia Cup 2025: ದಕ್ಷಿಣ ಕೊರಿಯಾವನ್ನು ಮಣಿಸಿ ಏಷ್ಯಾಕಪ್ ಗೆದ್ದ ಭಾರತ ಹಾಕಿ ತಂಡ

India Wins Hockey Asia Cup 2025: ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025ರ ಹಾಕಿ ಏಷ್ಯಾ ಕಪ್ ಫೈನಲ್‌ನಲ್ಲಿ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ತಂಡವು ದಕ್ಷಿಣ ಕೊರಿಯಾವನ್ನು 4-1 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದಿದೆ. ನಾಲ್ಕನೇ ಬಾರಿಗೆ ಏಷ್ಯಾ ಕಪ್ ಗೆದ್ದ ಭಾರತ, 2026ರ FIH ಪುರುಷರ ವಿಶ್ವಕಪ್‌ಗೆ ಅರ್ಹತೆ ಗಳಿಸಿದೆ.

Hockey Asia Cup 2025: ದಕ್ಷಿಣ ಕೊರಿಯಾವನ್ನು ಮಣಿಸಿ ಏಷ್ಯಾಕಪ್ ಗೆದ್ದ ಭಾರತ ಹಾಕಿ ತಂಡ
Hockey India
ಪೃಥ್ವಿಶಂಕರ
|

Updated on:Sep 07, 2025 | 9:42 PM

Share

ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ (Hockey Asia Cup 2025) ಫೈನಲ್​ನಲ್ಲಿ ಹರ್ಮನ್​​ಪ್ರೀತ್ ಸಿಂಗ್ (Harmanpreet Singh) ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ. ವಾಸ್ತವವಾಗಿ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾಕ್ಕೆ ಯಾವುದೇ ಅವಕಾಶ ನೀಡದೆ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ, ಟೀಂ ಇಂಡಿಯಾ ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ 2026 FIH ಪುರುಷರ ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

ಆರಂಭದಲ್ಲೇ ಮೇಲುಗೈ

ಪಂದ್ಯದ ಆರಂಭದಿಂದಲೇ ಭಾರತ ತಂಡ ಮೇಲುಗೈ ಸಾಧಿಸಿತು. ಪಂದ್ಯ ಆರಂಭವಾದ 30ನೇ ಸೆಕೆಂಡ್​ನಲ್ಲಿ ಸುಖ್ಜಿತ್ ಸಿಂಗ್ ಮೊದಲ ಗೋಲು ಗಳಿಸಿದರು. ಅಂತಿಮವಾಗಿ ಮೊದಲ ಕ್ವಾರ್ಟರ್ 1-0 ಅಂತರದಿಂದ ಮುಕ್ತಾಯವಾಯಿತು. ಎರಡನೇ ಕ್ವಾರ್ಟರ್​ನಲ್ಲಿ ಭಾರತ ಮತ್ತೊಂದು ಗೋಲು ದಾಖಲಿಸಿತು. ತಂಡದ ಪರ ದಿಲ್ಪ್ರೀತ್ ಸಿಂಗ್ 27ನೇ ನಿಮಿಷದಲ್ಲಿ ಈ ಗೋಲು ಬಾರಿಸಿದರು. ಇದರೊಂದಿಗೆ, ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿತು.

3-1 ಅಂತರದ ಗೆಲುವು ಸಾಧಿಸಿದ ಭಾರತ

ಪಂದ್ಯದಲ್ಲಿ ಭಾರತ ತಂಡ ಪ್ರಾಬಲ್ಯ ಮೆರೆಯುತ್ತಲೇ ಇತ್ತು ಆದರೆ ಕೊರಿಯಾದ ರಕ್ಷಣಾ ಪಡೆಗಳನ್ನು ಭೇದಿಸುವುದು ಅಷ್ಟು ಸುಲಭವಾಗಿರಲಿಲ್ಲ. ಈ ಕಾರಣದಿಂದಾಗಿ ಮೂರನೇ ಗೋಲು ಬರಲು ಸಾಕಷ್ಟು ಸಮಯ ಹಿಡಿಯಿತು. ಆದರೆ 45 ನೇ ನಿಮಿಷದಲ್ಲಿ ದಿಲ್‌ಪ್ರೀತ್ ಸಿಂಗ್ ವೈಯಕ್ತಿಕವಾಗಿ ಎರಡನೇ ಗೋಲು ಬಾರಿಸಿ ಅಂತರವನ್ನು 3-0 ಗೇರಿಸಿದರು. ಆದರೆ ದಕ್ಷಿಣ ಕೊರಿಯಾ ಪಂದ್ಯದ 57 ನೇ ನಿಮಿಷದಲ್ಲಿ ಗೋಲು ಗಳಿಸಿ ಅಂತರವನ್ನು ಕೊಂಚ ತಗ್ಗಿಸುವ ಕೆಲಸ ಮಾಡಿತು.

ನಾಲ್ಕನೇ ಬಾರಿಗೆ ಚಾಂಪಿಯನ್

9ನೇ ಫೈನಲ್ ಆಡುವ ಮೂಲಕ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಟೀಂ ಇಂಡಿಯಾ ಕೊನೆಯ ಬಾರಿಗೆ 8 ವರ್ಷಗಳ ಹಿಂದೆ ಅಂದರೆ 2017 ರಲ್ಲಿ ಪ್ರಶಸ್ತಿ ಗೆದ್ದಿತ್ತು. ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ದಕ್ಷಿಣ ಕೊರಿಯಾ 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಇದಕ್ಕೂ ಮೊದಲು, ಉಭಯ ದೇಶಗಳ ನಡುವೆ 3 ಫೈನಲ್‌ಗಳು ನಡೆದಿದ್ದು, ಅದರಲ್ಲಿ 2 ರಲ್ಲಿ ದಕ್ಷಿಣ ಕೊರಿಯಾ ಮತ್ತು ಒಂದು ಪಂದ್ಯದಲ್ಲಿ ಭಾರತ ಜಯಗಳಿಸಿದೆ. ಅಷ್ಟೇ ಅಲ್ಲ, ಈ ಪ್ರಶಸ್ತಿ ಗೆಲುವಿನೊಂದಿಗೆ, ಟೀಂ ಇಂಡಿಯಾ ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿರುವ 2026 ರ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Sun, 7 September 25

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್