Kho Kho World Cup 2025: ಸೆಮಿಫೈನಲ್‌ಗೇರಿದ ಭಾರತದ ಪುರುಷ- ಮಹಿಳಾ ತಂಡಗಳು

Kho Kho World Cup 2025: ದೆಹಲಿಯಲ್ಲಿ ನಡೆಯುತ್ತಿರುವ ಖೋ ಖೋ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಮತ್ತು ಪುರುಷರ ತಂಡಗಳು ಅದ್ಭುತ ಪ್ರದರ್ಶನ ನೀಡಿ ಸೆಮಿಫೈನಲ್‌ಗೆ ಪ್ರವೇಶಿಸಿವೆ. ಕ್ವಾರ್ಟರ್​ ಫೈನಲ್​ನಲ್ಲಿ ಮಹಿಳಾ ತಂಡವು ಬಾಂಗ್ಲಾದೇಶವನ್ನು 93 ಅಂಕಗಳಿಂದ ಸೋಲಿಸಿದರೆ, ಪುರುಷರ ತಂಡವು ಶ್ರೀಲಂಕಾವನ್ನು 60 ಅಂಕಗಳಿಂದ ಸೋಲಿಸಿದೆ.

Kho Kho World Cup 2025: ಸೆಮಿಫೈನಲ್‌ಗೇರಿದ ಭಾರತದ ಪುರುಷ- ಮಹಿಳಾ ತಂಡಗಳು
ಖೋ- ಖೋ ವಿಶ್ವಕಪ್ 2025
Follow us
ಪೃಥ್ವಿಶಂಕರ
|

Updated on:Jan 17, 2025 | 10:41 PM

ದೆಹಲಿಯಲ್ಲಿ ನಡೆಯುತ್ತಿರುವ ಚೊಚ್ಚಲ ಆವೃತ್ತಿಯ ಖೋ ಖೋ ವಿಶ್ವಕಪ್‌ನಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನ ಮುಂದುವರೆದಿದೆ. ಎರಡೂ ವಿಭಾಗಗಳಲ್ಲಿ (ಮಹಿಳೆಯರು ಮತ್ತು ಪುರುಷರು), ಭಾರತೀಯ ತಂಡಗಳು ಅದ್ಭುತ ಜಯವನ್ನು ದಾಖಲಿಸಿ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿವೆ. ಜನವರಿ 17 ರಂದು ನಡೆದ ವಿಶ್ವಕಪ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಮಹಿಳಾ ತಂಡವು ಬಾಂಗ್ಲಾದೇಶವನ್ನು ಏಕಪಕ್ಷೀಯ ರೀತಿಯಲ್ಲಿ 93 ಅಂಕಗಳ ಬೃಹತ್ ಅಂತರದಿಂದ ಸೋಲಿಸಿ ಸೆಮಿಫೈನಲ್​ಗೆ ಲಗ್ಗೆ ಇಟ್ಟರೆ, ಇತ್ತ ಪುರುಷರ ತಂಡ ಕೂಡ ಅಷ್ಟೇ ಉತ್ತಮ ಪ್ರದರ್ಶನ ನೀಡಿ ನೆರೆಯ ಶ್ರೀಲಂಕಾ ತಂಡವನ್ನು 60 ಅಂಕಗಳ ಅಂತರದಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತು. ಟೂರ್ನಿಯ ಎರಡೂ ಸೆಮಿಫೈನಲ್ ಪಂದ್ಯಗಳು ಜನವರಿ 18 ಮತ್ತು ಫೈನಲ್ ಜನವರಿ 19 ರಂದು ನಡೆಯಲಿದೆ.

ಹೊಸದಿಲ್ಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೋ ಖೋ ವಿಶ್ವಕಪ್‌ನ ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ಭಾರತ ತಂಡಗಳ ಪ್ರದರ್ಶನ ನಿರೀಕ್ಷೆಯಂತೆ ಅತ್ಯುತ್ತಮವಾಗಿತ್ತು. ಜನವರಿ 16 ಗುರುವಾರದಂದು ಎರಡೂ ತಂಡಗಳು ತಮ್ಮ ತಮ್ಮ ಪಂದ್ಯಗಳನ್ನು ಗೆದ್ದು ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದವು. ಮಲೇಷ್ಯಾವನ್ನು 80 ಅಂಕಗಳ ಬೃಹತ್ ಅಂತರದಿಂದ ಸೋಲಿಸಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದ ಮಹಿಳಾ ತಂಡ ಬಾಂಗ್ಲಾದೇಶ ತಂಡವನ್ನು ಸುಲಭವಾಗಿ ಮಣಿಸಿತು.

ಟೀಂ ಇಂಡಿಯಾದ್ದೇ ಪ್ರಾಬಲ್ಯ

ಪಂದ್ಯಾವಳಿಯ ಆರಂಭದಿಂದಲೂ ಪಾರಪತ್ಯ ಮೆರೆದಿರುವ ಭಾರತ ಮಹಿಳಾ ತಂಡದ ವಿರುದ್ಧ ಬಾಂಗ್ಲಾದೇಶದ ಆಟ ನಡೆಯಲಿಲ್ಲ. ನಾಲ್ಕೂ ಟರ್ನ್​ಗಳಲ್ಲೂ ಟೀಂ ಇಂಡಿಯಾ ದಿಟ್ಟ ಪ್ರದರ್ಶನ ನೀಡಿತು. ಟರ್ನ್-1ರಲ್ಲಿ ದಾಳಿ ಆರಂಭಿಸಿದ ಭಾರತ ತಂಡ ಇಲ್ಲಿ ಬಾಂಗ್ಲಾದೇಶವನ್ನು ಸಂಪೂರ್ಣವಾಗಿ ಸೋಲಿಸಿ ಪೂರ್ಣ 50 ಅಂಕ ಗಳಿಸಿ ಬಾಂಗ್ಲಾದೇಶಕ್ಕೆ ಖಾತೆ ತೆರೆಯಲು ಅವಕಾಶ ನೀಡಲಿಲ್ಲ. ಎರಡನೇ ಸರದಿಯಲ್ಲಿ ಭಾರತ ತಂಡ 6 ಅಂಕ ಗಳಿಸಿದರೆ, ದಾಳಿಗಿಳಿದ ಬಾಂಗ್ಲಾದೇಶ ತಂಡ 8 ಅಂಕ ಗಳಿಸಲಷ್ಟೇ ಶಕ್ತವಾಯಿತು. ಮೂರನೇ ಟರ್ನ್​ನಲ್ಲಿ ಮತ್ತೊಮ್ಮೆ ದಾಳಿ ನಡೆಸಿದ ಭಾರತ ಮತ್ತೊಮ್ಮೆ 50 ಅಂಕ ಕಲೆಹಾಕಿತು. ಆ ನಂತರದ 4 ಟರ್ನ್​ಗಳಲ್ಲೂ ಏಕಪಕ್ಷೀಯ ಪ್ರದರ್ಶನ ನೀಡಿದ ಭಾರತ 109-16 ಅಂಕಗಳ ಅಂತರದಲ್ಲಿ ಪಂದ್ಯವನ್ನು ಗೆದ್ದುಕೊಂಡಿತು.

ಪುರುಷರ ತಂಡಕ್ಕೂ ಜಯ

ಮಹಿಳಾ ತಂಡದ ಅದ್ಭುತ ಪ್ರದರ್ಶನದ ನಂತರ ಪುರುಷರ ತಂಡವೂ ಅಭಿಮಾನಿಗಳನ್ನು ನಿರಾಸೆಗೊಳಿಸಲಿಲ್ಲ. ಭೂತಾನ್ ತಂಡವನ್ನು ಸೋಲಿಸಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತ ತಂಡ ಅದೇ ರೀತಿ ಶ್ರೀಲಂಕಾವನ್ನು ಸೋಲಿಸಿತು. ಆರಂಭದಿಂದ ಕೊನೆಯವರೆಗೂ ತನ್ನ ಸಾಮರ್ಥ್ಯ ತೋರಿದ ಟೀಂ ಇಂಡಿಯಾ ಶ್ರೀಲಂಕಾವನ್ನು 100-40 ಅಂತರದಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಸೆಮಿಫೈನಲ್‌ನಲ್ಲಿ, ಟೀಂ ಇಂಡಿಯಾ ತನ್ನ ಕ್ವಾರ್ಟರ್ ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ್ದ ನೇಪಾಳ ತಂಡವನ್ನು ಎದುರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Fri, 17 January 25

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ