India vs England: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ.. ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ!

India ODI Squad: ತಂಡದಲ್ಲಿ ಪ್ರಸಿದ್ಧ್​ ಕೃಷ್ಣರ ಆಯ್ಕೆಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರ ಆಯ್ಕೆ ಆಶ್ಚರ್ಯಕಾರಿಯಾಗಿದೆ. ಕೊಹ್ಲಿ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದಾರೆ.

India vs England: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ.. ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ!
ಪ್ರಸಿದ್ಧ್ ಕೃಷ್ಣ
Follow us
ಪೃಥ್ವಿಶಂಕರ
| Updated By: Digi Tech Desk

Updated on:Mar 19, 2021 | 1:30 PM

ಇಂಗ್ಲೆಂಡ್ ವಿರುದ್ಧದ 3 ಏಕದಿನ ಸರಣಿಗೆ ಬಿಸಿಸಿಐ, ಟೀಮ್ ಇಂಡಿಯಾವನ್ನು ಘೋಷಿಸಿದೆ. ಕ್ರುನಾಲ್ ಪಾಂಡ್ಯ ಏಕದಿನ ತಂಡಕ್ಕೆ ಮರಳಿದ್ದಾರೆ. ಅದೇ ಸಮಯದಲ್ಲಿ ಪ್ರಸಿದ್ಧ ಕೃಷ್ಣ ಅವರಿಗೆ ಬೌಲಿಂಗ್ ವಿಭಾಗದಲ್ಲಿ ಅವಕಾಶ ಸಿಕ್ಕಿದೆ. ತಂಡದಲ್ಲಿ ಪ್ರಸಿದ್ಧ್​ ಕೃಷ್ಣರ ಆಯ್ಕೆಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರ ಆಯ್ಕೆ ಆಶ್ಚರ್ಯಕಾರಿಯಾಗಿದೆ. ಕೊಹ್ಲಿ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದಾರೆ. ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಮೊದಲು ರೋಹಿತ್ ಶರ್ಮಾ ಅವರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುತ್ತಾರೆ ಎಂಬ ವರದಿಗಳೂ ಬಂದವು. ಆದರೆ, ಉಪನಾಯಕನಾಗಿ ಹಿಟ್ಮ್ಯಾನ್ ಏಕದಿನ ತಂಡದ ಭಾಗವಾಗಿದ್ದಾರೆ.

ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಪುಣೆಯಲ್ಲಿ ನಡೆಯಲಿದೆ. ಮೊದಲ ಪಂದ್ಯ ಮಾರ್ಚ್ 23 ರಂದು ನಡೆಯಲಿದ್ದು, ಎರಡನೇ ಪಂದ್ಯ 26 ರಂದು ಮತ್ತು ಮೂರನೇ ಏಕದಿನ ಪಂದ್ಯ ಮಾರ್ಚ್ 28 ರಂದು ನಡೆಯಲಿದೆ. ಇದಕ್ಕೂ ಮುನ್ನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು 3-1ರಿಂದ ಸೋಲಿಸಿತು. ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಚೆನ್ನೈನಲ್ಲಿ ಆಡಲಾಯಿತು. ಇದರಲ್ಲಿ ಮೊದಲ ಪಂದ್ಯವನ್ನು ಇಂಗ್ಲೆಂಡ್ ಮತ್ತು ಎರಡನೇ ಪಂದ್ಯವನ್ನು ಟೀಂ ಇಂಡಿಯಾ ಗೆದ್ದು ಬೀಗಿತು. ಇದರ ನಂತರ, ಅಹಮದಾಬಾದ್‌ನಲ್ಲಿ ನಡೆದ ಎರಡೂ ಟೆಸ್ಟ್​ಗಳಲ್ಲಿ ಟೀಮ್ ಇಂಡಿಯಾ ಜಯ ಗಳಿಸಿತು. ಪ್ರಸ್ತುತ, ಉಭಯ ತಂಡಗಳ ನಡುವಿನ ಟಿ 20 ಸರಣಿಯು ಅಂತಿಮ ಹಂತದಲ್ಲಿದೆ.

ಟಿ 20 ನಂತರ ಏಕದಿನ ತಂಡದಲ್ಲಿ ಮಿಂಚಲಿದ್ದಾರೆ ಸೂರ್ಯಕುಮಾರ್ ಟಿ 20 ಯಲ್ಲಿ ಉತ್ತಮ ಪ್ರದರ್ಶನ ನೀಡಿದಕ್ಕಾಗಿ ಸೂರ್ಯಕುಮಾರ್ ಯಾದವ್ ಬಹುಮಾನ ಪಡೆದಿದ್ದಾರೆ. ಟಿ 20 ನಂತರ ಏಕದಿನ ತಂಡಕ್ಕೆ ಸೂರ್ಯಕುಮಾರ್ ಯಾದವ್ ಟಿಕೆಟ್​ ಪಡೆದುಕೊಂಡಿದ್ದಾರೆ. ಇದಲ್ಲದೆ, ಬೌಲಿಂಗ್ ವಿಭಾಗದಲ್ಲಿ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದ ಪ್ರಸಿದ್ಧ ಕೃಷ್ಣ, ದೇಶೀಯ ಕ್ರಿಕೆಟ್‌ನಲ್ಲಿ ಅವರ ಕಠಿಣ ಪರಿಶ್ರಮದ ಫಲವನ್ನು ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಬದಲಿಗೆ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಬುಮ್ರಾ ಪ್ರಸ್ತುತ ವೈಯಕ್ತಿಕ ಕಾರಣಗಳಿಗಾಗಿ ರಜೆಯಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಬೌಲಿಂಗ್ ವಿಭಾಗದಲ್ಲಿ ಕೆಲವು ಪ್ರಮುಖ ಬದಲಾವಣೆಗಳು ಕಂಡುಬಂದಿವೆ. ವೇಗದ ಬೌಲರ್ ನವದೀಪ್ ಸೈನಿ ಅವರನ್ನು ಕೈಬಿಡಲಾಗಿದೆ. ಅದೇ ಸಮಯದಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಟೀಂ ಇಂಡಿಯಾದ ಕ್ಯಾಂಪ್‌ಗೆ ಸೇರಿದ ಟಿ.ನಟರಾಜನ್ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ಸಿಕ್ಕಿದೆ. ನವದೀಪ್ ಸೈನಿ ಬದಲಿಗೆ ಕ್ರುನಾಲ್ ಪಾಂಡ್ಯ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಇದಲ್ಲದೆ ಗಾಯದಿಂದ ಮರಳಿದ ಭುವನೇಶ್ವರ್ ಟಿ 20 ನಂತರ ಏಕದಿನ ತಂಡದಲ್ಲಿ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಪ್ರಸಿದ್ಧ್ ಕೃಷ್ಣ, ಮತ್ತು ಶಾರ್ದುಲ್ ಠಾಕೂರ್

Published On - 12:05 pm, Fri, 19 March 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್