AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 4th T20I: ಭಾರತಕ್ಕೆ ರೋಚಕ 8 ರನ್ ಗೆಲುವು!

ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಶಾರ್ದುಲ್ ಠಾಕೂರ್ 3 ವಿಕೆಟ್​ ಪಡೆದರೆ ಇಂದು ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಇಂದು ಪದಾರ್ಪಣೆ ಮಾಡಿದ ರಾಹುಲ್ ಚಹರ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್​ ಪಡೆದರು.

India vs England 4th T20I: ಭಾರತಕ್ಕೆ ರೋಚಕ 8 ರನ್ ಗೆಲುವು!
ಹಾರ್ದಿಕ್ ಪಾಂಡ್ಯ
ಅರುಣ್​ ಕುಮಾರ್​ ಬೆಳ್ಳಿ
|

Updated on:Mar 18, 2021 | 11:40 PM

Share

India vs England 4th T20I Live Score: ಭಾರತ ಮತ್ತು ಇಂಗ್ಲೆಂಡ್ ನಡುವೆ 5-ಟಿ20 ಪಂದ್ಯಗಳ ಸರಣಿಯ 4ನೇ ಮ್ಯಾಚ್​ನಲ್ಲಿ ಭಾರರ 8 ರನ್ ಗಳ ರೋಚಕ ಜಯ ಸಾಧಿಸಿ ಸರಣಿಯನ್ನು ಸಮ ಮಾಡಿಕೊಂಡಿದೆ. ಗೆಲ್ಲಲು 186 ರನ್ ಗಳಿಸಬೇಕಿದ್ದ ಇಂಗ್ಲೆಂಡ್​ಗೆ ಅಂತಿಮವಾಗಿ 177/8 ಗಳಿಸಲು ಮಾತ್ರ ಸಾಧ್ಯವಾಯಿತು. ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಶಾರ್ದುಲ್ ಠಾಕೂರ್ 3 ವಿಕೆಟ್​ ಪಡೆದರೆ ಇಂದು ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಇಂದು ಪದಾರ್ಪಣೆ ಮಾಡಿದ ರಾಹುಲ್ ಚಹರ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್​ ಪಡೆದರು.ಇಂಗ್ಲೆಂಡ್​ ಪರ ಬೆನ್ ಸ್ಟೋಕ್ಸ್ 46 ರನ್ ಗಳಿಸದರೆ, ಆರಂಭ ಆಟಗಾರ ಜೇಸನ್ ರಾಯದ 40 ರನ್​ ಬಾರಿಸಿದರು.

ಇದಕ್ಕೆ ಮೊದಲು ಟಾಸ್ ಸೋತು ಮೊದಲ ಬ್ಯಾಟ್​ ಮಾಡಿದ ಭಾರತ ನಿಗದಿತ 20 ಓವರ್​ಗಳಲ್ಲಿ 0 ವಿಕೆಟ್​ಗೆ 185 ರನ್ ಗಳಿಸಿತು. ಟೀಮ್  ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಈ ಪಂದ್ಯದಲ್ಲಿ ಫೇಲಾದರು. ಕೇವಲ 1 ರನ್ ಗಳಿಸಿ ಆದಿಲ್ ರಶೀದ್​ಗೆ  ಅವರು ವಿಕೆಟ್ ಒಪ್ಪಿಸಿದರು. ಆದರೆ, ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಪಂದ್ಯದಲ್ಲಿ ಬ್ಯಾಟ್​ ಮಾಡಿದ ಸೂರ್ಯಕುಮಾರ್ ಯಾದವ್ ತಾವೆದುರಿಸಿ ಮೊದಲ ಎಸೆತವನ್ನೇ ಸಿಕ್ಸರ್​ಗೆ ಬಾರಿಸಿ ತಮ್ಮ ಆಗಮನವನ್ನು ಘೋಷಿಸಿದರು. ಅನಂತರ ಮೈ ಚಳಿ ಬಿಟ್ಟವರಂತೆ ಆಡಿದ ಸೂರ್ಯ, ಆಂಗ್ಲ ಬೌಲರ್​ಗಳನ್ನು ಮನಂದಂತೆ ದಂಡಿಸಿ  31 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಚಚ್ಚಿ 57 ರನ್ ಬಾರಿಸಿದರು.

ಕೆ ಎಲ್ ರಾಹುಲ್ ಅವರ ಫಾರ್ಮ್ ಕಳವಳ ಹುಟ್ಟಿಸಿದೆಯಾದರೂ ನಾಯಕನಿಗೆ ಅವರ ಮೇಲೆ ವಿಶ್ವಾಸವಿದ್ದುದ್ದರಿಂದ  ಮತ್ತೊಂದು ಅವಕಾಶ ಪಡೆದು ಕೇವಲ 14 ರನ್ ಗಳಿಸಿ ಔಟಾದರು. ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ 23 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 30 ರನ್ ಬಾರಿಸಿದರು

ಆದರೆ ಮಧ್ಯೆದ ಓವರ್​ಗಳಲ್ಲಿ ಶ್ರೇಯಸ್ ಅಯ್ಯರ್ ಭರ್ಜರಿ ಹೊಡೆತಗಳ ಆಟವಾಡಿ ಕೇವಲ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸ್ ಬಾರಿಸಿ 37 ರನ್ ಗಳಿಸಿದರು. ಪ್ರವಾಸಿ ತಂಡದ ಪರ ವೇಗದ ಬೌಲರ್ ಜೊಫ್ರಾ ಆರ್ಚರ್ 33 ರನ್ ನೀಡಿ 4 ವಿಕೆಟ್ ಪಡೆದರು

ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿತ್ತು. ತೊಡೆಸಂದಿ ನೋವಿನಿಂದ ಬಳಲುತ್ತಿರುವ ಇಶಾನ್ ಕಿಷನ್ ಜಾಗದಲ್ಲಿ ಸೂರ್ಯಕುಮಾರ್ ಯಾದವ್ ಆಡಿದರು,  ಹಾಗೆಯೇ ಯುಜ್ವೇಂದ್ರ ಚಹಲ್ ಅವರನ್ನು ಡ್ರಾಪ್ ಮಾಡಿ ಅವರ ಸ್ಥಾನದಲ್ಲಿ ರಾಹುಲ್ ಚಹರ್ ಆಡಿಸಲಾಯಿತು.

ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯ ಶನಿವಾರದಂದು ಇದೇ ಮೈದಾನದಲ್ಲಿ ನಡೆಯಲಿದೆ.

Published On - 11:16 pm, Thu, 18 March 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ