India Squad: ಶ್ರೀಲಂಕಾ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ತಂಡದಿಂದ ಸ್ಟಾರ್​ ಆಟಗಾರರು ಔಟ್

India Squad: ಜನವರಿ 3 ರಿಂದ ಭಾರತ-ಶ್ರೀಲಂಕಾ (India vs Sri Lanka) ನಡುವಣ ಸರಣಿ ಶುರುವಾಗಲಿದ್ದು, ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ.

India Squad: ಶ್ರೀಲಂಕಾ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ತಂಡದಿಂದ ಸ್ಟಾರ್​ ಆಟಗಾರರು ಔಟ್
Team India
Edited By:

Updated on: Dec 27, 2022 | 11:58 PM

India Squad For Sri Lanka Series: ಜನವರಿ 3 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ಟಿ20 ಸರಣಿಗೆ ರೋಹಿತ್ ಶರ್ಮಾ (Rohit Sharma) ಅಲಭ್ಯರಾಗಿದ್ದು, ಹೀಗಾಗಿ ಹಾರ್ದಿಕ್ ಪಾಂಡ್ಯ (Hardik Pandya) ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಚುಟುಕು ಕ್ರಿಕೆಟ್​ನಿಂದ ವಿರಾಟ್ ಕೊಹ್ಲಿ (Virat Kohli) ವಿಶ್ರಾಂತಿ ಪಡೆದಿದ್ದು, ಹೀಗಾಗಿ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ. ಹಾಗೆಯೇ ಕೆಎಲ್ ರಾಹುಲ್ (KL Rahul) ಅವರನ್ನು ತಂಡದಿಂದ ಕೈಬಿಡಲಾಗಿದೆ. ಇದಾಗ್ಯೂ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಎರಡೂ ತಂಡದಿಂದ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಹೊರಬಿದ್ದಿದ್ದಾರೆ. ಹಾಗೆಯೇ ಟಿ20 ತಂಡದಲ್ಲಿ ಯುವ ವೇಗಿ ಶಿವಂ ಮಾವಿ ಹಾಗೂ ಮುಖೇಶ್ ಕುಮಾರ್ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ಏಕದಿನ ಹಾಗೂ ಟಿ20 ತಂಡಕ್ಕೆ ವಾಷಿಂಗ್ಟನ್ ಸುಂದರ್ ಕಂಬ್ಯಾಕ್ ಮಾಡಿದ್ದಾರೆ.

ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

ಇದನ್ನೂ ಓದಿ
IPL 2023: 2 ದೇಶಗಳಿಂದ ಐಪಿಎಲ್​ಗೆ ಆಯ್ಕೆಯಾದ ಏಕೈಕ ಕ್ರಿಕೆಟಿಗ
IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…
IPL 2023: ಐಪಿಎಲ್​ಗೆ ನಮೀಬಿಯಾ, ಐರ್ಲೆಂಡ್, ಜಿಂಬಾಬ್ವೆ ಆಟಗಾರರು ಎಂಟ್ರಿ
IPL 2023 RCB Team: RCB ಹೊಸ ತಂಡ ಹೀಗಿದೆ

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

 

ಭಾರತ-ಶ್ರೀಲಂಕಾ ಸರಣಿಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ:

ಟಿ20 ಸರಣಿ ವೇಳಾಪಟ್ಟಿ:-

  • ಜನವರಿ 3: ಮೊದಲ ಟಿ20 ಪಂದ್ಯ (ಸ್ಥಳ-ವಾಂಖೆಡೆ ಸ್ಟೇಡಿಯಂ)
  • ಜನವರಿ 5: ಎರಡನೇ ಟಿ20 ಪಂದ್ಯ (ಸ್ಥಳ- ಪುಣೆ ಕ್ರಿಕೆಟ್ ಸ್ಟೇಡಿಯಂ)
  • ಜನವರಿ 7: ಮೂರನೇ ಟಿ20 ಪಂದ್ಯ (ಸ್ಥಳ- ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂ- ರಾಜ್​ಕೋಟ್)

ಇದನ್ನೂ ಓದಿ: IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…

ಏಕದಿನ ಸರಣಿ ವೇಳಾಪಟ್ಟಿ:-

  • ಜನವರಿ 10: ಮೊದಲ ಏಕದಿನ ಪಂದ್ಯ (ಸ್ಥಳ- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗೌಹಾಟಿ)
  • ಜನವರಿ 12: ಎರಡನೇ ಏಕದಿನ ಪಂದ್ಯ (ಸ್ಥಳ- ಈಡನ್ ಗಾರ್ಡನ್ಸ್, ಕೋಲ್ಕತ್ತಾ)
  • ಜನವರಿ 15: ಮೂರನೇ ಏಕದಿನ ಪಂದ್ಯ (ಗ್ರೀನ್‌ಫೀಲ್ಡ್ ಸ್ಟೇಡಿಯಂ, ತಿರುವನಂತಪುರಂ)

 

 

Published On - 10:29 pm, Tue, 27 December 22

Follow Us