ರೂಪಾಂತರ ಕೊರೊನಾದ ಕರಾಳಛಾಯೆ; ಇಂಡೋ-ಆಸಿಸ್​ 2ನೇ ಟೆಸ್ಟ್​​ನಿಂದ ವಾರ್ನರ್​, ಅಬಾಟ್ ಔಟ್

ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸಮರ್ಥನೆ ನೀಡಿದೆ.

ರೂಪಾಂತರ ಕೊರೊನಾದ ಕರಾಳಛಾಯೆ; ಇಂಡೋ-ಆಸಿಸ್​ 2ನೇ ಟೆಸ್ಟ್​​ನಿಂದ ವಾರ್ನರ್​, ಅಬಾಟ್ ಔಟ್
ವೇಗದ ಬೌಲರ್ ಸೀನ್ ಅಬಾಟ್ ಮತ್ತು ಡೇವಿಡ್ ವಾರ್ನರ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Dec 23, 2020 | 1:36 PM

ಮೆಲ್ಬೋರ್ನ್: ಭಾರತ (ಆಸ್ಟ್ರೇಲಿಯಾ) ವಿರುದ್ಧದ ಮೆಲ್ಬೋರ್ನ್ ಟೆಸ್ಟ್ ಪಂದ್ಯಕ್ಕೂ ಮೊದಲು ಆಸ್ಟ್ರೇಲಿಯಾ ತಂಡ ದೊಡ್ಡ ಹಿನ್ನಡೆ ಅನುಭವಿಸಿದ್ದು, ತಂಡದ ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.

ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಾಯದಿಂದಾಗಿ ಇಬ್ಬರೂ ಆಟಗಾರರು ಪಂದ್ಯದಿಂದ ಹೊರಗುಳಿದಿದ್ದರು. ಚಿಕಿತ್ಸೆಯ ನಂತರ ಗುಣಮುಖರಾಗಿದ್ದ ಇಬ್ಬರು ಆಟಗಾರರು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯುವ ಭರವಸೆ ಮೂಡಿಸಿದ್ದರು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಡಿಸೆಂಬರ್ 23 ಬುಧವಾರದಂದು ಈ ಎರಡೂ ಆಟಗಾರರು ಮೆಲ್ಬೋರ್ನ್ ಟೆಸ್ಟ್ನಿಂದ ಹೊರಗುಳಿದಿದ್ದಾರೆ ಎಂದು ಮಾಹಿತಿ ನೀಡಿದೆ.

ಕ್ರಿಕೆಟ್ ಆಸ್ಟ್ರೇಲಿಯಾದ ಈ ನಿಲುವಿಗೆ ಪ್ರಮುಖ ಕಾರಣವೆಂದರೆ ಈ ಇಬ್ಬರೂ ಆಟಗಾರರು ಕೆಲವು ದಿನಗಳ ಹಿಂದೆ ಸಿಡ್ನಿಯಲ್ಲಿದ್ದರು. ಹಾಗಾಗಿ ಸಿಡ್ನಿಯಲ್ಲಿ ಈಗಾಗಲೇ ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಬಳಿಕ ಭೀತಿ ಉಂಟಾಗಿದೆ. ಈ ಕಾರಣದಿಂದಾಗಿ ಡೇವಿಡ್ ವಾರ್ನರ್ ಮತ್ತು ವೇಗದ ಬೌಲರ್ ಸೀನ್ ಅಬಾಟ್ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸಮರ್ಥನೆ ನೀಡಿದೆ.

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಕೊನೆಯ ಏಕದಿನ ಪಂದ್ಯ ಹಾಗೂ ಟಿ 20 ಸರಣಿ ಮತ್ತು ಮೊದಲ ಟೆಸ್ಟ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗಲಿಲ್ಲ. ಅದೇ ಸಮಯದಲ್ಲಿ ಭಾರತ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ವೇಗದ ಬೌಲರ್ ಶಾನ್ ಅಬಾಟ್ ಗಾಯಗೊಂಡಿದ್ದರು.

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು