AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020, 1st T20: ಮೊದಲ ಟಿ-20 ಪಂದ್ಯದಲ್ಲಿ ಭಾರತಕ್ಕೆ 11 ರನ್​ಗಳ ಗೆಲುವು!

ಭಾರತ ಮತ್ತು ಆಸ್ಟ್ರೇಲಿಯ ಇಂದಿನಿಂದ ಮೂರು-ಪಂದ್ಯಗಳ ಟಿ20ಐ ಸರಣಿಯಲ್ಲಿ ಸೆಣಿಸಲಿವೆ. ಈ ಆವೃತ್ತಿಯಲ್ಲಿ ಉತ್ತಮ ದಾಖಲೆ ಹೊಂದಿರುವ ಟೀಮ್ ಇಂಡಿಯ ಕೊನೆಯ ಒಂದು ದಿನದ ಪಂದ್ಯದಲ್ಲಿ ಸಾಧಿಸಿದ ಗೆಲುವಿನಿಂದಾಗಿ ಹೆಚ್ಚಿನ ಆತ್ಮವಿಶ್ವಾಸದೊಂದಿಗೆ ಮೈದಾನಕ್ಕಿಳಿಯಲಿದೆ

India vs Australia 2020, 1st T20: ಮೊದಲ ಟಿ-20 ಪಂದ್ಯದಲ್ಲಿ ಭಾರತಕ್ಕೆ 11 ರನ್​ಗಳ ಗೆಲುವು!
ಮೊದಲ ಟಿ20 ಪಂದ್ಯದ ಗೆಲುವಿನ ಖುಷಿಯಲ್ಲಿ ಭಾರತ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Dec 06, 2020 | 1:09 PM

Share

ಒಂದು ದಿನದ ಅಂತರರಾಷ್ಟ್ರೀಯ ಪಂದ್ಯಗಳನ್ನು 1-2 ಅಂತರದಿಂದ ಸೋತ ಭಾರತ ಟಿ20ಐ ಕ್ರಿಕೆಟ್​ ಪಂದ್ಯಗಳ ಸರಣಿಯಲ್ಲಿ ಶುಭಾರಂಭ ಮಾಡಿದೆ. ಕ್ಯಾನ್​ಬೆರಾದ ಮನೌಕ ಓವಲ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪ್ರವಾಸಿಗರು ಅತಿಥೇಯರನ್ನು 11 ರನ್ ಗಳಿಂದ ಸೋಲಿಸಿದರು.

ಗೆಲ್ಲಲು 163 ರನ್ ಗಳಿಸಬೇಕಿದ್ದ ಆಸ್ಟ್ರೇಲಿಯ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 150 ರನ್ ಮಾತ್ರ ಸ್ಕೋರ್ ಮಾಡಿತು. ಭಾರತದ ಪರ ರವೀಂದ್ರ ಜಡೇಜಾ ಅವರ ಸ್ಥಾನದಲ್ಲಿ ಕನ್ಕಶನ್ ಸಬ್​ಸ್ಟಿಟ್ಯೂಟ್ ಆಗಿ ಆಡಲು ಬಂದ ಯುಜ್ವೇಂದ್ರ ಚಹಲ್ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದರು. ತಮ್ಮ 4 ಓವರ್​ಗಳಲ್ಲಿ ಅವರು ಕೇವಲ 25 ರನ್ ನೀಡಿ 3 ಪ್ರಮುಖ ವಿಕೆಟ್ ಪಡೆದರು. ಅವರಷ್ಟೇ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಮತ್ತು ಇದೇ ಮೊದಲ ಬಾರಿಗೆ ಟಿ20ಐ ಕ್ರಿಕೆಟ್​ನಲ್ಲಿ ಭಾರತವನ್ನು ಪ್ರತಿನಿಧಿಸಿದ ಟಿ ನಟರಾಜನ್ 30 ರನ್ ನೀಡಿ 3 ವಿಕೆಟ್ ಪಡೆದರು.

ಇದಕ್ಕೆ ಮೊದಲು ಟಾಸ್  ಸೋತು ಮೊದಲು ಬ್ಯಾಟ್ ಮಾಡುವ ಆಮಂತ್ರಣ ಪಡೆದ ಭಾರತ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 161 ರನ್ ಮೊತ್ತ ಪೇರಿಸಿತು.

ಭಾರತದ ಪರ ಆರಂಭ ಆಟಗಾರ ಕೆ ಎಲ್ ರಾಹುಲ್ ಆಕರ್ಷಕ 51 ರನ್ (5×4 1×6) ಬಾರಿಸಿದರು. ತಂಡದ ಸ್ಕೋರ್ 160 ದಾಟುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ರವೀಂದ್ರ ಜಡೇಜಾ ಮತ್ತೊಮ್ಮೆ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಕೇವಲ 23 ಎಸೆತಗಳಲ್ಲಿ ಅಜೇಯ 44  ರನ್ (5×4 1×6) ಬಾರಿಸಿದರು.

ನಾಯಕ ವಿರಾಟ್ ಕೊಹ್ಲಿ ಕೇವಲ 9 ರನ್ ಗಳಿಸಿದರೆ, ಓಪನರ್ ಶಿಖರ್ ಧವನ್ 1 ರನ್ ಗಳಿಸಿ ಔಟಾದರು. ಸಂಜು ಸ್ಯಾಮ್ಸನ್ 23 ರನ್ ಬಾರಿಸಿದರು.

ಆಸ್ಟ್ರೇಲಿಯ ಪರ 4 ಓವರ್​ಗಳಲ್ಲಿ ಕೇವಲ 22 ರನ್ ನೀಡಿ 3 ವಿಕೆಟ್ ಪಡೆದ ಮೊಸೆಸ್ ಹೆನ್ರಿಕೆ ಅತ್ಯಂತ ಯಶಸ್ವೀ ಬೌಲರ್ ಎನಿಸಿದರು.

Published On - 5:33 pm, Fri, 4 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ