India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ತನ್ನೆಲ್ಲ ವಿಕೆಟ್​ ಕಳೆದುಕೊಂಡು ಮೊದಲ ಇನ್ನಿಂಗ್ಸ್‌ನಲ್ಲಿ 326 ರನ್ ಗಳಿಸಿದೆ. ಈ ಮೂಲಕ ಟೀಂ ಇಂಡಿಯಾ 131 ರನ್‌ಗಳ ಮುನ್ನಡೆ ಸಾಧಿಸಿದೆ.

India vs 2nd Test 3ನೇ ದಿನ: 131 ರನ್​ ಮುನ್ನಡೆ ಸಾಧಿಸಿದ ಭಾರತ, ಆಸಿಸ್​ಗೆ ಆರಂಭಿಕ ಆಘಾತ
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Dec 28, 2020 | 12:36 PM

ಮೆಲ್ಬೋರ್ನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಮೊದಲ ಇನ್ನಿಂಗ್ಸ್‌ನಲ್ಲಿ 326 ರನ್ ಗಳಿಸಿದೆ. ಈ ಮೂಲಕ ಟೀಂ ಇಂಡಿಯಾ 131 ರನ್‌ಗಳ ಮುನ್ನಡೆ ಸಾಧಿಸಿದೆ.

2ನೇ ದಿನಾದಟದಲ್ಲಿ 5 ವಿಕೆಟ್‌ಗಳನ್ನ ಕಳೆದುಕೊಂಡು ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 277 ರನ್‌ ಗಳಿಸಿತ್ತು. ನಾಯಕ ಅಜಿಂಕ್ಯ ರಹಾನೆ ಹಾಗೂ ರವೀಂದ್ರ ಜಡೇಜಾ ಅಜೇಯರಾಗಿ ಉಳಿದಿದ್ದರು. ಉತ್ತಮ ಸ್ಥಿತಿಯಲ್ಲಿ 3ನೇ ದಿನದಾಟವನ್ನ ಪ್ರಾರಂಭಿಸಿದ ಭಾರತ ಆರಂಭದಿಂದಲೂ ವಿಕೆಟ್​ ಕಳೆದುಕೊಳ್ಳಲು ಪ್ರಾರಂಭಿಸಿತು. 2ನೇ ದಿನದಾಟದಲ್ಲಿ 104 ರನ್​ ಗಳಿಸಿದ್ದ ರಹಾನೆ, 3ನೇ ದಿನದಾಟದಲ್ಲಿ 112 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಕೊನೆಗೊಳಿಸಿದರು.

ಜಡೇಜಾ ಅಮೋಘ ಅರ್ಧ ಶತಕ ನಾಯಕ ರಹಾನೆಗೆ ಉತ್ತಮ ಸಾಥ್​ ನೀಡಿದ ಜಡೇಜಾ ಅಮೋಘ ಅರ್ಧ ಶತಕ ಗಳಿಸಿ ವಿಕೆಟ್​ ಒಪ್ಪಿಸಿದರು. ಈ ಎರಡು ವಿಕೆಟ್‌ಗಳ ನಂತರ ಬಂದ ಕೆಳ ಕ್ರಮಾಂಕದ ಯಾವೊಬ್ಬ ಆಟಗಾರನು ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಪರಿಣಾಮವಾಗಿ ಭಾರತ 326 ರನ್​ ಗಳಿಸಿ ಆಲ್​ ಔಟ್​ ಆಯಿತು. ಈ ಮೂಲಕ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 131 ರನ್​ಗಳ ಮುನ್ನಡೆ ಸಾಧಿಸಿತು.

ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಆಸ್ಟ್ರೇಲಿಯಾಕ್ಕೆ ಆರಂಭಿಕ ಆಘಾತ ಎದುರಾಗಿದ್ದು, 4 ರನ್ ಗಳಿಸಿದ್ದ ಆಸಿಸ್​ ಆರಂಭಿಕ ಆಟಗಾರ ಜೋ ಬರ್ನ್ಸ್​ಗೆ ಉಮೇಶ್​ ಯಾದವ್​ ಪೆವಿಲಿಯನ್​ ದಾರಿ ತೋರಿಸಿದರು.

ಹಾಗೂ 28 ರನ್​ ಗಳಿಸಿದ್ದ ಮಾರ್ನಸ್ ಲ್ಯಾಬುಸ್ಚೆನ್‌ರ ವಿಕೆಟ್‌ ಪಡೆಯುವುದರ ಮೂಲಕ ರವಿಚಂದ್ರನ್​ ಅಶ್ವಿನ್​ ಟೀಂ ಇಂಡಿಯಾಗೆ 2ನೇ ಯಶಸ್ಸು ತಂದುಕೊಟ್ಟರು. ತಾಜಾ ವರದಿ ಪ್ರಕಾರ 2 ವಿಕೆಟ್​ ಕಳೆದುಕೊಂಡಿರುವ ಆಸಿಸ್​ ಪಡೆ 65 ರನ್​ ಗಳಿಸಿದೆ.

ICC ದಶಕದ ತಂಡ ಪ್ರಕಟ; ಕ್ರಿಕೆಟ್​ನ 3 ಆವೃತ್ತಿಯಲ್ಲೂ ಸ್ಥಾನ ಪಡೆದ ಕಿಂಗ್ ಕೊಹ್ಲಿ, ಭಾರತೀಯರದ್ದೇ ಸಿಂಹ ಪಾಲು..

Published On - 9:50 am, Mon, 28 December 20

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ