AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ

ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ಪ್ರಮುಖ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ
ಕೋಚ್​ ರವಿಶಾಸ್ತ್ರಿಯೊಂದಿಗೆ ನಾಯಕ ಅಜಿಂಕ್ಯಾ ರಹಾನೆ
ಪೃಥ್ವಿಶಂಕರ
|

Updated on:Dec 25, 2020 | 12:33 PM

Share

ಮೆಲ್ಬೋರ್ನ್‌: ಅಡಿಲೇಡ್‌ನ ಹೀನಾಯ ಸೋಲಿನ ನಂತರ ರಹಾನೆ ನೇತೃತ್ವದ ಭಾರತೀಯ ತಂಡ ಮೆಲ್ಬೋರ್ನ್‌ನಲ್ಲಿ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಬಾಕ್ಸಿಂಗ್ ಡೇ ಟೆಸ್ಟ್‌ನತ್ತ ಗಮನ ಹರಿಸುತ್ತಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ನಾಲ್ಕು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ.

ಈಗಾಗಲೇ ಪಿತೃತ್ವದ ರಜೆ ತೆಗೆದುಕೊಂಡಿರುವ ನಾಯಕ ಕೊಹ್ಲಿ ಸರಣಿಯಿಂದ ಹೊರಗುಳಿದಿದ್ದು, ಕೊಹ್ಲಿ ಸ್ಥಾನಕ್ಕೆ ಆಲ್​ರೌಂಡರ್​ ಜಡೇಜಾ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗದ ಬೌಲರ್​ ಶಮಿ ಸ್ಥಾನಕ್ಕೆ ಮಹಮದ್ ಸಿರಾಜ್​ ಆಯ್ಕೆಯಾಗಿದ್ದಾರೆ. ಇನ್ನೂ ಕಳಪೆ ಫಾರ್ಮ್​ನಲ್ಲಿರುವ ಓಪನರ್​ ಪೃಥ್ವಿ ಶಾ ಸ್ಥಾನದಲ್ಲಿ ಗಿಲ್​ ಕಾಣಿಸಿಕೊಳ್ಳಲಿದ್ದು, ಇದು ಗಿಲ್ ಅವರ ಮೊದಲ ಅಂತರರಾಷ್ಟೀಯ ಟೆಸ್ಟ್​ ಪಂದ್ಯವಾಗಿದೆ. ವಿಕೆಟ್​ ಕೀಪರ್ ವೃದ್ಧಿಮಾನ್​ ಸಹಾ ಬದಲಿಗೆ ರಿಶಭ್​ ಪಂತ್​ ಮೈದಾನಕ್ಕಿಳಿಯಲ್ಲಿದ್ದಾರೆ.

ಈ ಕಾರಣದಿಂದಾಗಿ ರಾಹುಲ್‌ಗೆ ಅವಕಾಶ ಸಿಗಲಿಲ್ಲ ಈ ಎಲ್ಲದರ ಮಧ್ಯೆ ವಿರಾಟ್ ಕೊಹ್ಲಿ ಬದಲಿಗೆ ಕೆ.ಎಲ್. ರಾಹುಲ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಆ ಭರವಸೆ ಹುಸಿಯಾಗಿದೆ. ಇದಕ್ಕೆ ಕಾರಣವೆಂದರೆ ಆಡಳಿತ ಮಂಡಳಿ ಹನುಮಾ ವಿಹಾರಿಯನ್ನು 2ನೇ ಟೆಸ್ಟ್​ನಲ್ಲಿ ಆಡಿಸಲು ತೀರ್ಮಾನಿಸಿದ್ದು, ಮೆಲ್ಬೋರ್ನ್ ಟೆಸ್ಟ್ನಲ್ಲಿ ಹನುಮಾ ವಿಹಾರಿ 4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ವರದಿಯಾಗಿದೆ.

Published On - 12:11 pm, Fri, 25 December 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ