IND vs BAN: ಒದ್ದೆ ಮೈದಾನ: ಮೂರನೇ ದಿನದಾಟದ ಆರಂಭ ವಿಳಂಬ
India vs Bangladesh, 2nd Test: ಕಾನ್ಪುರದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾಂಗ್ಲಾ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ್ ತಂಡವು ಮೊದಲ ದಿನದಾಟದದಲ್ಲಿ 107 ರನ್ ಕಲೆಹಾಕಿದೆ.
ಕಾನ್ಪುರದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಆರಂಭ ಕೂಡ ವಿಳಂಬವಾಗಲಿದೆ. ನಿನ್ನೆ ಸುರಿದ ಭಾರೀ ಮಳೆಯಿಂದ ಮೈದಾನವು ಒದ್ದೆಯಾಗಿದ್ದು, ಹೀಗಾಗಿ ಪಂದ್ಯದ ಆರಂಭ ಮತ್ತಷ್ಟು ತಡವಾಗಲಿದೆ. ಇದಕ್ಕೂ ಮುನ್ನ ಮೊದಲ ದಿನದಾಟ ಕೂಡ ಮಳೆಯ ಕಾರಣ ತಡವಾಗಿ ಶುರುವಾಗಿತ್ತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು 35 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಕಲೆಹಾಕಿತು. ಈ ವೇಳೆ ಕಾರ್ಮೋಡ ಆವರಿಸಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.
ಇನ್ನು 2ನೇ ದಿನದಾಟವು ಸಂಪೂರ್ಣವಾಗಿ ಮಳೆಗೆ ಅಹುತಿಯಾಗಿತ್ತು. ಇದೀಗ ಭಾನುವಾರ ನಡೆಯಬೇಕಿರುವ ಮೂರನೇ ದಿನದಾಟದ ಆರಂಭವು ವಿಳಂಬವಾಗಲಿದೆ. ಇದಾಗ್ಯೂ ಕಾನ್ಪುರದಲ್ಲಿ ಮಳೆಯ ಪ್ರಮಾಣ ಕುಂಠಿತಗೊಂಡಿದ್ದು, ಹೀಗಾಗಿ ಇಂದು ಮ್ಯಾಚ್ ನಡೆಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಅತ್ತ ಪಿಚ್ ತೇವಾಂಶದಿಂದ ಕೂಡಿರುವ ಕಾರಣ ಬೌಲರ್ಗಳಿಗೆ ಸಹಕಾರಿಯಾಗುವ ಸಾಧ್ಯತೆಯಿದೆ. ಅದರಲ್ಲೂ ವೇಗಿಗಳು ಈ ಪಂದ್ಯದಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ನಿರೀಕ್ಷಿಸುವಂತಿಲ್ಲ.
ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ
ಬಾಂಗ್ಲಾದೇಶ್ ಪ್ಲೇಯಿಂಗ್ 11: ಶಾದ್ಮಾನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.