ಡೇ/ನೈಟ್ ಟೆಸ್ಟ್​ನಲ್ಲಿ ಸೆಂಚುರಿ ಸಿಡಿಸಿದ ಮೊದಲ ಭಾರತೀಯ!

ಕೊಲ್ಕತ್ತಾ: ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ. ಈಡನ್​ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ಮ್ಯಾಚ್​ನಲ್ಲಿ ಕೊಹ್ಲಿ ಶತಕ ದಾಖಲಿಸಿದ್ದಾರೆ. ಟೆಸ್ಟ್​ ಕ್ರಿಕೆಟ್​ನಲ್ಲಿ ಒಟ್ಟು 27 ಶತಕ ಬಾರಿಸಿರುವ ವಿರಾಟ್ ಕೊಹ್ಲಿ ರನ್​ಗಳ ಸುರಿಮಳೆಯನ್ನು ಮುಂದುವರಿಸಿದ್ದಾರೆ. ಬಾಂಗ್ಲಾ ವಿರುದ್ಧದ 2ನೇ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಉಬ್ಬುತ್ತಿದೆ ಭಾರತದ ಪಿಂಕ್ ಸ್ಕೋರ್ ಟೀಂ ಇಂಡಿಯಾ ಕ್ಯಾಪ್ಟನ್​ […]

ಡೇ/ನೈಟ್ ಟೆಸ್ಟ್​ನಲ್ಲಿ ಸೆಂಚುರಿ ಸಿಡಿಸಿದ ಮೊದಲ ಭಾರತೀಯ!
sadhu srinath

|

Nov 23, 2019 | 3:21 PM

ಕೊಲ್ಕತ್ತಾ: ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ. ಈಡನ್​ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ಮ್ಯಾಚ್​ನಲ್ಲಿ ಕೊಹ್ಲಿ ಶತಕ ದಾಖಲಿಸಿದ್ದಾರೆ.

ಟೆಸ್ಟ್​ ಕ್ರಿಕೆಟ್​ನಲ್ಲಿ ಒಟ್ಟು 27 ಶತಕ ಬಾರಿಸಿರುವ ವಿರಾಟ್ ಕೊಹ್ಲಿ ರನ್​ಗಳ ಸುರಿಮಳೆಯನ್ನು ಮುಂದುವರಿಸಿದ್ದಾರೆ. ಬಾಂಗ್ಲಾ ವಿರುದ್ಧದ 2ನೇ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಉಬ್ಬುತ್ತಿದೆ ಭಾರತದ ಪಿಂಕ್ ಸ್ಕೋರ್ ಟೀಂ ಇಂಡಿಯಾ ಕ್ಯಾಪ್ಟನ್​ ಆಗಿ ಕೊಹ್ಲಿಗೆ ಇದು 20ನೇ ಶತಕವಾಗಿದ್ದು, ಡೇ/ನೈಟ್ ಟೆಸ್ಟ್​ನಲ್ಲಿ ಸೆಂಚುರಿ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ತನ್ನ ವೃತ್ತಿ ಜೀವನದ ಟೆಸ್ಟ್​ನಲ್ಲಿ 27ನೇ ಶತಕವಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಇದು 70ನೇ ಶತಕವಾಗಿ ದಾಖಲಾಗಿದೆ.

https://twitter.com/BCCI_Tweet/status/1198166957473910784?s=20

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada