ಕೊಲ್ಕತ್ತಾ: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ. ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ಮ್ಯಾಚ್ನಲ್ಲಿ ಕೊಹ್ಲಿ ಶತಕ ದಾಖಲಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 27 ಶತಕ ಬಾರಿಸಿರುವ ವಿರಾಟ್ ಕೊಹ್ಲಿ ರನ್ಗಳ ಸುರಿಮಳೆಯನ್ನು ಮುಂದುವರಿಸಿದ್ದಾರೆ. ಬಾಂಗ್ಲಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.
ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಉಬ್ಬುತ್ತಿದೆ ಭಾರತದ ಪಿಂಕ್ ಸ್ಕೋರ್
ಟೀಂ ಇಂಡಿಯಾ ಕ್ಯಾಪ್ಟನ್ ಆಗಿ ಕೊಹ್ಲಿಗೆ ಇದು 20ನೇ ಶತಕವಾಗಿದ್ದು, ಡೇ/ನೈಟ್ ಟೆಸ್ಟ್ನಲ್ಲಿ ಸೆಂಚುರಿ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ತನ್ನ ವೃತ್ತಿ ಜೀವನದ ಟೆಸ್ಟ್ನಲ್ಲಿ 27ನೇ ಶತಕವಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಇದು 70ನೇ ಶತಕವಾಗಿ ದಾಖಲಾಗಿದೆ.
https://twitter.com/BCCI_Tweet/status/1198166957473910784?s=20
Published On - 2:47 pm, Sat, 23 November 19