ಚೆನ್ನೈ: ಇಂಡಿಯಾ – ಇಂಗ್ಲೆಂಡ್ ನಡುವಿನ ನಾಲ್ಕು ಟೆಸ್ಟ್ ಸರಣಿಯ ಮೊದಲ ಟೆಸ್ಟ್ನ ಮೊದಲ ದಿನದಾಟ ಮುಕ್ತಾಯವಾಗಿದ್ದು, ಇಂಗ್ಲೆಂಡ್ ತಂಡ 3 ವಿಕೆಟ್ ಕಳೆದುಕೊಂಡು 263 ರನ್ ಗಳಿಸಿದೆ. 128 ರನ್ ಗಳಿಸಿರುವ ನಾಯಕ ರೂಟ್ 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅಂತಿಮ ಸೆಷನ್ನ ಅಂತಿಮ ಓವರ್ನಲ್ಲಿ 87 ರನ್ ಗಳಿಸಿದ್ದ ಸಿಬ್ಲಿ ವಿಕೆಟ್ ಪಡೆಯುವಲ್ಲಿ ಬುಮ್ರಾ ಯಶಸ್ವಿಯಾದರು. ಟೀಂ ಇಂಡಿಯಾ ಪರ ಬುಮ್ರಾ ಎರಡು ವಿಕೆಟ್ ಪಡೆದು ಮಿಂಚಿದರೆ, ಅಶ್ವಿನ್ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
Published On - 5:00 pm, Fri, 5 February 21