Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: 2ನೇ ಏಕದಿನ ಪಂದ್ಯ ಆರಂಭವಾಗುವ ಸಮಯ, ದಿನಾಂಕ, ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ಮಾಹಿತಿ

India vs England: ಮೊದಲ ಏಕದಿನ ಪಂದ್ಯದ ವೇಳೆ ತಂಡದ ಉಪನಾಯಕ ರೋಹಿತ್ ಶರ್ಮಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದು, ಈ ಪೈಕಿ ಶ್ರೇಯಸ್ ಅವರ ಗಾಯವು ಹೆಚ್ಚು ಗಂಭೀರವಾಗಿದೆ

India vs England: 2ನೇ ಏಕದಿನ ಪಂದ್ಯ ಆರಂಭವಾಗುವ ಸಮಯ, ದಿನಾಂಕ, ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ಮಾಹಿತಿ
ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
|

Updated on: Mar 25, 2021 | 5:58 PM

ಪುಣೆ: ಶುಕ್ರವಾರ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಲು ಭಾರತ 66 ರನ್‌ಗಳಿಂದ ಮೊದಲ ಏಕದಿನ ಪಂದ್ಯವನ್ನು ಗೆದ್ದುಕೊಂಡಿತು. ಆತಿಥೇಯರು ಸರಣಿಯನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಮೊದಲ ಪಂದ್ಯದ ಸೋಲಿನ ನಂತರ ಇಂಗ್ಲೆಂಡ್ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಪುಣೆಯಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯ ಭಾರತಕ್ಕೆ ಉತ್ತಮ ಫಲಿತಾಂಶ ತಂದುಕೊಟ್ಟಿತು. ವಿಶ್ವದ ನಂಬರ್ ಒನ್ ತಂಡದ ವಿರುದ್ಧ, ಆರಂಭಿಕ ಒತ್ತಡದ ನಂತರ ವಿರಾಟ್ ಕೊಹ್ಲಿ ಅವರ ತಂಡವು ಉತ್ತಮ ಪುನರಾಗಮನ ಮಾಡಿ ಪಂದ್ಯವನ್ನು ಗೆದ್ದು ಮೂರು ಪಂದ್ಯಗಳ ಸರಣಿಯನ್ನು ಚೆನ್ನಾಗಿ ಪ್ರಾರಂಭಿಸಿತು.

ಇಬ್ಬರು ಪ್ರಮುಖ ಆಟಗಾರರು ಗಾಯಗೊಂಡಿದ್ದಾರೆ ಇದರ ಹೊರತಾಗಿಯೂ, ತಂಡದಲ್ಲಿ ಆತಂಕ ಕೂಡ ಹೆಚ್ಚಾಗಿದೆ. ಏಕೆಂದರೆ ಈ ಸಮಯದಲ್ಲಿ ಇಬ್ಬರು ಪ್ರಮುಖ ಆಟಗಾರರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರು ಈಗ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವುದರ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. ಮೊದಲ ಏಕದಿನ ಪಂದ್ಯದ ವೇಳೆ ತಂಡದ ಉಪನಾಯಕ ರೋಹಿತ್ ಶರ್ಮಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದು, ಈ ಪೈಕಿ ಶ್ರೇಯಸ್ ಅವರ ಗಾಯವು ಹೆಚ್ಚು ಗಂಭೀರವಾಗಿದೆ ಮತ್ತು ಅವರು ಸುಮಾರು 2 ತಿಂಗಳು ಮೈದಾನದಿಂದ ದೂರವಾಗಲಿದ್ದಾರೆ ಎಂಬ ಆತಂಕವಿದೆ. ಈ ಕಾರಣದಿಂದಾಗಿ, ದೆಹಲಿ ಕ್ಯಾಪಿಟಲ್ಸ್‌ನ ಕ್ಯಾಪ್ಟನ್ ಕೂಡ ಐಪಿಎಲ್ 2021 ರಲ್ಲಿ ಆಡಲು ಕಷ್ಟಪಡುತ್ತಿದ್ದಾರೆ.

ಮೋರ್ಗಾನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್​ಗೂ ಗಾಯ ಜೊತೆಗೆ ಇಂಗ್ಲೆಂಡ್ ನಾಯಕ ಇಯೊನ್ ಮೋರ್ಗಾನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಸಹ ಗಾಯದಿಂದ ನರಳುತ್ತಿದ್ದು ಅವರ ಗಾಯವು ತುಂಬಾ ಗಂಭೀರವಾಗಿದೆ. ಫೀಲ್ಡಿಂಗ್ ಸಮಯದಲ್ಲಿ ಚೆಂಡನ್ನು ಫೀಲ್ಡಿಂಗ್ ಮಾಡುವಾಗ ಇಂಗ್ಲೆಂಡ್​ನ ಸ್ಯಾಮ್ ಬಿಲ್ಲಿಂಗ್ಸ್ ಭುಜದ ಗಾಯಕ್ಕೆ ಒಳಗಾದರು. ಅದೇ ಸಮಯದಲ್ಲಿ, ಇಯಾನ್ ಮೋರ್ಗಾನ್ ಚೆಂಡನ್ನು ನಿಲ್ಲಿಸುವ ಯತ್ನದಲ್ಲಿ ಗಾಯಗೊಂಡರು. ಇಂತಹ ಪರಿಸ್ಥಿತಿಯಲ್ಲಿ, ಈ ಇಬ್ಬರು ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಡುವ ಸಾಧ್ಯತೆ ಕಡಿಮೆ.

ಎರಡನೇ ಏಕದಿನ ಪಂದ್ಯದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ:

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ? ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಾರ್ಚ್ 26, ಶುಕ್ರವಾರ.

ಎರಡನೇ ಏಕದಿನ ಪಂದ್ಯ ನಡೆಯುವ ಸ್ಥಳ ಯಾವುದು? ಎರಡನೇ ಏಕದಿನ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಎರಡನೇ ಏಕದಿನ ಪಂದ್ಯ ಯಾವ ಸಮಯದಲ್ಲಿ ಪ್ರಾರಂಭವಾಗುತ್ತದೆ? ಭಾರತೀಯ ಕಾಲಮಾನ ಮಧ್ಯಾಹ್ನ 1.30 ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಎರಡನೇ ಏಕದಿನ ಪಂದ್ಯವನ್ನು ಯಾವ ಟಿವಿ ಚಾನೆಲ್‌ಗಳು ಪ್ರಸಾರ ಮಾಡುತ್ತವೆ? ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುವುದು. ಪಂದ್ಯವನ್ನು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿಯೂ ನೇರ ಪ್ರಸಾರ ಮಾಡಲಾಗುತ್ತದೆ.

ಭಾರತದ ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ಕುಲದೀಪ್ ಯಾದವ್, ಕ್ರುನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ, ಶಾರ್ದುಲ್ ಠಾಕೂರ್.

ಇಂಗ್ಲೆಂಡ್‌ನ ಏಕದಿನ ತಂಡ: ಇಯೊನ್ ಮೋರ್ಗಾನ್ (ನಾಯಕ), ಮೊಯೀನ್ ಅಲಿ, ಜೊನಾಥನ್ ಬೈರ್‌ಸ್ಟೋವ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಟಾಮ್ ಕುರ್ರನ್, ಲಿಯಾಮ್ ಲಿವಿಂಗ್‌ಸ್ಟೋನ್, ಮ್ಯಾಟ್ ಪಾರ್ಕಿನ್ಸನ್, ಆದಿಲ್ ರಶೀದ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟಾಪ್ಲೆ, ಮಾರ್ಕ್ ವುಡ್.

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ