India vs England: 3ನೇ ಟೆಸ್ಟ್ ಪಂದ್ಯ ನಡೆಯುವ ಸ್ಥಳ, ವೀಕ್ಷಣೆ ಯಾವ ಚಾನೆಲ್ನಲ್ಲಿ, ಆಡಬಹುದಾದ ಆಟಗಾರರ ವಿವರ ಇಲ್ಲಿದೆ
india vs england: ಉಳಿದ ಎರಡು ಪಂದ್ಯಗಳನ್ನು ಅಹಮದಾಬಾದ್ನಲ್ಲಿಯೇ ಆಡಲಾಗುತ್ತದೆ. ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿರುವ ಮೊಟೆರಾ ಕ್ರೀಡಾಂಗಣವು ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಸಾಕ್ಷಿಯಾಗಲಿದೆ. ಅಲ್ಲದೆ ಮೂರನೇ ಟೆಸ್ಟ್ ಪಂದ್ಯವು ಹಗಲು-ರಾತ್ರಿ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ಪಿಂಕ್ ಬಾಲನ್ನು ಬಳಸಿ ಆಡಲಾಗುತ್ತದೆ.
ಅಹಮದಾಬಾದ್: ಬುಧವಾರ (ಫೆಬ್ರವರಿ 24) ಆರಂಭವಾಗಲಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಆತಿಥೇಯರು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿನ ಅದ್ಭುತ ಜಯವನ್ನು ಮುಂದುವರೆಸುವ ತವಕದಲ್ಲಿದ್ದಾರೆ. ಚೆನ್ನೈನಲ್ಲಿ ಆಡಿದ ಮೊದಲ ಎರಡು ಪಂದ್ಯಗಳ ನಂತರ, ಈಗ ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಗಮನ ಅಹಮದಾಬಾದ್ಗೆ ಶಿಫ್ಟ್ ಆಗಿದೆ.
ಇನ್ನ ಉಳಿದ ಎರಡು ಪಂದ್ಯಗಳನ್ನು ಅಹಮದಾಬಾದ್ನಲ್ಲಿಯೇ ಆಡಲಾಗುತ್ತದೆ. ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿರುವ ಮೊಟೆರಾ ಕ್ರೀಡಾಂಗಣವು ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಸಾಕ್ಷಿಯಾಗಲಿದೆ. ಅಲ್ಲದೆ ಮೂರನೇ ಟೆಸ್ಟ್ ಪಂದ್ಯವು ಹಗಲು-ರಾತ್ರಿ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ಪಿಂಕ್ ಬಾಲನ್ನು ಬಳಸಿ ಆಡಲಾಗುತ್ತದೆ.
ಪ್ರಸ್ತುತ, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆಲ್ಲುವುದರೊಂದಿಗೆ ಸರಣಿಯನ್ನು ಸಮಬಲಗೊಳಿಸಿವೆ. ಆರಂಭಿಕ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಭಾರತವನ್ನು 227 ರನ್‌ಗಳಿಂದ ಸೋಲಿಸಿತು. 2ನೇ ಪಂದ್ಯದಲ್ಲಿ 317 ರನ್‌ಗಳ ಭಾರಿ ಅಂತರದಿಂದ ಇಂಗ್ಲೆಂಡ್ ವಿರುದ್ಧ ಭಾರತ ಭರ್ಜರಿ ಜಯದೊಂದಿಗೆ ಅವಮಾನಕರ ನಷ್ಟಕ್ಕೆ ಪ್ರತೀಕಾರ ತೀರಿಸಿಕೊಂಡಿತು.
ಭಾರತ- ಇಂಗ್ಲೆಂಡ್ 3 ನೇ ಟೆಸ್ಟ್ ಪಂದ್ಯ ಯಾವಾಗ ಪ್ರಾರಂಭ? ಭಾರತ- ಇಂಗ್ಲೆಂಡ್ ನಡುವಿನ 3 ನೇ ಟೆಸ್ಟ್ ಪಂದ್ಯ ಬುಧವಾರ (ಫೆಬ್ರವರಿ 24) ಮಧ್ಯಾಹ್ನ 2: 30 ಕ್ಕೆ ಪ್ರಾರಂಭವಾಗಲಿದೆ.
3 ನೇ ಟೆಸ್ಟ್ ಪಂದ್ಯ ನಡೆಯುವ ಸ್ಥಳ ಭಾರತ- ಇಂಗ್ಲೆಂಡ್ ನಡುವಿನ 3 ನೇ ಟೆಸ್ಟ್ ಪಂದ್ಯ ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಯಾವ ಟಿವಿ ಚಾನೆಲ್‌ಗಳು ಪ್ರಸಾರ ಮಾಡುತ್ತವೆ? ಇಂಡಿಯಾ ವರ್ಸಸ್ ಇಂಗ್ಲೆಂಡ್ 3 ನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುವುದು.
3 ನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸುವುದು ಹೇಗೆ? ಡಿಸ್ನಿ + ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಅಭಿಮಾನಿಗಳು ವೀಕ್ಷಿಸಬಹುದು.
ಭಾರತದ ಆಡುವ ಇಲೆವೆನ್ ಹೀಗಿರಬಹುದು: ಶುಭ್ಮನ್ ಗಿಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ
ಇಂಗ್ಲೆಂಡ್‌ನ ಆಡುವ ಇಲೆವೆನ್ ಹೀಗಿರಬಹುದು: ಡೊಮಿನಿಕ್ ಸಿಬ್ಲಿ, ರೋರಿ ಬರ್ನ್ಸ್, ಜೋ ರೂಟ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್, ಆಲ್ಲಿ ಪೋಪ್, ಡೊಮ್ ಬೆಸ್, ಜ್ಯಾಕ್ ಲೀಚ್, ಜೋಫ್ರಾ ಆರ್ಚರ್, ಜೇಮ್ಸ್ ಆಂಡರ್ಸನ್
ಇದನ್ನೂ ಓದಿ:India vs England: 100ನೇ ಟೆಸ್ಟ್ ಆಡುವ ತವಕದಲ್ಲಿ ಇಶಾಂತ್ ಶರ್ಮಾ, ಕಪಿಲ್ ದೇವ್ ನಂತರ ಈ ಸಾಧನೆ ಮಾಡಿದ 2ನೇ ಆಟಗಾರ