India vs England: ನಿರ್ಣಾಯಕ ಟೆಸ್ಟ್​ ಯಾವ ಚಾನೆಲ್​ನಲ್ಲಿ ಪ್ರಸಾರ, ಟೆಸ್ಟ್​ ಆರಂಭದ ಸಮಯ, ಸ್ಥಳ, ತಂಡಗಳ ಮಾಹಿತಿ ಇಲ್ಲಿದೆ

India vs England: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್‌ನಲ್ಲಿ ಸ್ಥಾನ ಪಡೆಯುವ ಸಲುವಾಗಿ ಭಾರತದ ತಂಡವು ಇಂಗ್ಲೆಂಡ್ ತಂಡವನ್ನು 3-1 ಅಂತರದಿಂದ ಸೋಲಿಸುವ ಆತ್ಮವಿಶ್ವಾಸದಿಂದ ಬೀಗುತ್ತಿದೆ.

India vs England: ನಿರ್ಣಾಯಕ ಟೆಸ್ಟ್​ ಯಾವ ಚಾನೆಲ್​ನಲ್ಲಿ ಪ್ರಸಾರ, ಟೆಸ್ಟ್​ ಆರಂಭದ ಸಮಯ, ಸ್ಥಳ, ತಂಡಗಳ ಮಾಹಿತಿ ಇಲ್ಲಿದೆ
ವಿರಾಟ್​ ಕೊಹ್ಲಿ, ಜೋ ರೂಟ್​
Follow us
ಪೃಥ್ವಿಶಂಕರ
| Updated By: ಆಯೇಷಾ ಬಾನು

Updated on: Mar 03, 2021 | 1:40 PM

ಅಹಮದಾಬಾದ್: ನರೇಂದ್ರ ಮೋದಿ ಕ್ರಿಕೆಟ್​ ಕ್ರೀಡಾಂಗಣದಲ್ಲಿ ಗುರುವಾರ (ಮಾರ್ಚ್ 4) ಆರಂಭವಾಗಲಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಟೀಂ ಇಂಡಿಯಾ- ಇಂಗ್ಲೆಂಡ್‌ನೊಂದಿಗೆ ಸೆಣಸಾಡಲಿದೆ. ಅದೇ ಸ್ಥಳದಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ 10 ವಿಕೆಟ್‌ಗಳ ಗೆಲುವಿನೊಂದಿಗೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ ವಿರಾಟ್ ಕೊಹ್ಲಿ ಮತ್ತು ಅವರ ತಂಡವು ಸರಣಿಯನ್ನು 3-1 ರಿಂದ ಗೆದ್ದುಕೊಳ್ಳುವ ಉತ್ಸಾಹದಲ್ಲಿದೆ. ಮತ್ತೊಂದೆಡೆ, ಜೋ ರೂಟ್ ನೇತೃತ್ವದ ಇಂಗ್ಲೆಂಡ್ ತಂಡವು ಸರಣಿಗೆ ವಾಪಾಸಾಗಿ, ಆತಿಥೇಯರಿಗೆ ಕಠಿಣ ಸವಾಲನ್ನು ನೀಡಲು ಮತ್ತು ಸರಣಿಯನ್ನು ಸಮಗೊಳಿಸುವ ತವಕದಲ್ಲಿದ್ದಾರೆ.

ಪಂದ್ಯ ಆರಂಭವಾಗುವ ಸಮಯ.. 4ನೇ ಹಾಗೂ ಅಂತಿಮ ಪಂದ್ಯ ಮಾರ್ಚ್​ 4 ರಿಂದ ಭಾರತೀಯ ಕಾಲಮಾನ ಬೆಳಿಗ್ಗೆ 09:30 ಕ್ಕೆ ಆರಂಭವಾಗಲಿದೆ. ಆದರೆ ಮೊದಲನೇ ದಿನ ಟಾಸ್​ ಪ್ರಕ್ರಿಯೆ ಇರುವುದರಿಂದ ಬೆಳಿಗ್ಗೆ 9 ಗಂಟೆಗೆ ಟಾಸ್​ ಪ್ರಕ್ರಿಯೆ ನೆಡೆಯಲಿದೆ.

3 ನೇ ಟೆಸ್ಟ್ ಪಂದ್ಯ ನಡೆಯುವ ಸ್ಥಳ.. ಭಾರತ- ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಕ್ರೀಡಾಂಗಣದಲ್ಲಿ ನಡೆಯಲಿದೆ.

ಯಾವ ಟಿವಿ ಚಾನೆಲ್‌ಗಳು ಪ್ರಸಾರ ಮಾಡುತ್ತವೆ? ಇಂಡಿಯಾ ವರ್ಸಸ್ ಇಂಗ್ಲೆಂಡ್ 4 ನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುವುದು.

4 ನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸುವುದು ಹೇಗೆ? ಡಿಸ್ನಿ + ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಅಭಿಮಾನಿಗಳು ವೀಕ್ಷಿಸಬಹುದು.

ಟೀಂ ಇಂಡಿಯಾದ ಆಡುವ 11ರ ಬಳಗ ಹೀಗಿರಬಹುದು.. ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್​ ಕೀಪರ್​), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ / ಉಮೇಶ್ ಯಾದವ್, ಮತ್ತು ಇಶಾಂತ್ ಶರ್ಮಾ.

ಇಂಗ್ಲೆಂಡ್ ತಂಡದ ಆಡುವ 11ರ ಬಳಗ ಹೀಗಿರಬಹುದು ಡೊಮಿನಿಕ್ ಸಿಬ್ಲಿ, ಜಾಕ್ ಕ್ರಾಲೆ, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಿಕೆಟ್​ ಕೀಪರ್​), ಆಲ್ಲಿ ಪೋಪ್ / ಡೇನಿಯಲ್ ಲಾರೆನ್ಸ್, ಡೊಮ್ ಬೆಸ್, ಜ್ಯಾಕ್ ಲೀಚ್, ಜೋಫ್ರಾ ಆರ್ಚರ್ ಮತ್ತು ಜೇಮ್ಸ್ ಆಂಡರ್ಸನ್.

ಪಂದ್ಯದ ಭವಿಷ್ಯ.. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್‌ನಲ್ಲಿ ಸ್ಥಾನ ಪಡೆಯುವ ಸಲುವಾಗಿ ಭಾರತದ ತಂಡವು ಇಂಗ್ಲೆಂಡ್ ತಂಡವನ್ನು 3-1 ಅಂತರದಿಂದ ಸೋಲಿಸುವ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಅಲ್ಲದೆ ಕಳೆದ ಪಂದ್ಯದ ಸೋಲಿನ ಆಘಾತದಲ್ಲಿರುವ ಇಂಗ್ಲೆಂಡ್ ತಂಡಕ್ಕೆ ಸ್ವಲ್ಪ ಹಿನ್ನಡೆಯಾಗಬಹುದು.

ಇದನ್ನೂ ಓದಿ:India vs England: ಅಂತಿಮ ಟೆಸ್ಟ್​ ಗೆದ್ದು ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​​ ಪ್ರವೇಶಿಸುವ ತವಕದಲ್ಲಿ ಟೀಂ ಇಂಡಿಯಾ.. ಆಡುವ 11ರ ಬಳಗ ಹೀಗಿದೆ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ