Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ರೋಚಕ ಹಣಾಹಣಿಯಲ್ಲಿ ಸರಣಿ ಗೆದ್ದ ಕೊಹ್ಲಿ ಪಡೆ, ಇಂಗ್ಲೆಂಡ್​ಗೆ ವೀರೋಚಿತ ಸೋಲು

India vs England: 83 ಬಾಲ್ನಲ್ಲಿ 9 ಬೌಂಡರಿ 3 ಸಿಕ್ಸರ್ ಸಿಡಿಸಿದ ಕರ್ರನ್ ಅಜೇಯ 95 ರನ್ಗಳಿಸಿ, ಇಂಗ್ಲೆಂಡ್ ಪಾಳಯದಲ್ಲಿ ಗೆಲುವು ನಮ್ಮದೇ ಅನ್ನೋ ಮಂದಹಾಸ ಮೂಡಿಸಿದ್ದ.

India vs England: ರೋಚಕ ಹಣಾಹಣಿಯಲ್ಲಿ ಸರಣಿ ಗೆದ್ದ ಕೊಹ್ಲಿ ಪಡೆ, ಇಂಗ್ಲೆಂಡ್​ಗೆ ವೀರೋಚಿತ ಸೋಲು
ಸರಣಿ ಗೆದ್ದ ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Mar 29, 2021 | 10:34 AM

ಪುಣೆ: ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವಿನ ಕೇಕೆ ಹಾಕಿ, ಏಕದಿನ ಸರಣಿಯನ್ನ ಗೆದ್ದು ಬೀಗಿದೆ. ಪುಣೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ, 7 ರನ್ಗಳ ರಣ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಏಕದಿನ ಸರಣಿಯನ್ನ 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ.

329 ರನ್ಗಳಿಗೆ ಆಲೌಟ್.. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾಕ್ಕೆ ಶಿಖರ್ ಧವನ್ 67 ರನ್, ರಿಷಬ್ ಪಂತ್ 78 ರನ್ ಮತ್ತು ಹಾರ್ದಿಕ್ ಪಾಂಡ್ಯಾ 64 ರನ್ಗಳ ಕಾಣಿಕೆ ನೀಡಿದ್ರು. ಇದರೊಂದಿಗೆ ಟೀಮ್ ಇಂಡಿಯಾ 48.2 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 329 ರನ್ಗಳಿಗೆ ಆಲೌಟ್ ಆಯ್ತು.

ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದೇ ಸ್ಯಾಮ್ ಕರ್ರನ್ ಟೀಮ್ ಇಂಡಿಯಾ ನೀಡಿದ 330 ರನ್ಗಳ ಟಾರ್ಗೆಟ್ ಬೆನ್ನತ್ತಿದ ಇಂಗ್ಲೆಂಡ್ ಸೋಲಿನ ಹಾದಿಯತ್ತಲೇ ಹೆಜ್ಜೆಯಿಟ್ಟಿತು. ಬೃಹತ್​ ಮೊತ್ತವನ್ನು ಬೆನ್ನತ್ತಿದ ಇಂಗ್ಲೆಂಡ್​ ಆರಂಭದಲ್ಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಆದರೆ ಡೇವಿಡ್​ ಮಲನ್ ಹಾಗೂ ಲಿವಿಂಗ್​​ಸ್ಟನ್​ ತಂಡಕ್ಕೆ ಅಗತ್ಯವಾದ ಜೊತೆಯಾಟ ಆಡಿದರು. ಮಲನ್ ಅರ್ಧ ಶತಕ ಸಿಡಿಸಿ ಮಿಂಚಿದರೆ, ಸಾಥ್ ನೀಡುತ್ತಿದ್ದ ಲಿವಿಂಗ್​ಸ್ಟನ್ 36 ರನ್​ಗೆ ತಮ್ಮ ವಿಕೆಟ್ ಒಪ್ಪಿಸಿದರು. ಮಲನ್​ ಕೂಡ ಅರ್ಧ ಶತಕ ಗಳಿಸಿದ ಬೆನ್ನಲ್ಲೇ ಔಟಾದರು. ಸೋಲಿನಂಚಿಗೆ ಹೋಗಿದ್ದ ಇಂಗ್ಲೆಂಡ್ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದೇ ಆಲ್ರೌಂಡರ್ ಸ್ಯಾಮ್ ಕರ್ರನ್. ಕೊಹ್ಲಿ ಬೌಲರ್ಗಳ ಮೇಲೆ ಸವಾರಿ ಮಾಡಿದ ಸ್ಯಾಮ್ ಕರ್ರನ್, ಟೀಮ್ ಇಂಡಿಯಾ ಪಾಳಯದಲ್ಲಿ ನಡುಕ ಹುಟ್ಟಿಸಿದ.

83 ಬಾಲ್ನಲ್ಲಿ 9 ಬೌಂಡರಿ 3 ಸಿಕ್ಸರ್ ಸಿಡಿಸಿದ ಕರ್ರನ್ ಅಜೇಯ 95 ರನ್ಗಳಿಸಿ, ಇಂಗ್ಲೆಂಡ್ ಪಾಳಯದಲ್ಲಿ ಗೆಲುವು ನಮ್ಮದೇ ಅನ್ನೋ ಮಂದಹಾಸ ಮೂಡಿಸಿದ್ದ. ಇನ್ನೇನು ಕರ್ರನ್ ಇಂಗ್ಲೆಂಡ್ಗೆ ಗೆಲುವು ತಂದುಕೊಡ್ತಾರೆ ಅನ್ನೋದು ಎಲ್ಲರ ಲೆಕ್ಕಾಚಾರವಾಗಿತ್ತು. ಆದ್ರೆ ಕೊನೆ ಓವರ್ನಲ್ಲಿ ಟಿ ನಟರಾಜನ್, ಕರ್ರನ್ ಆರ್ಭಟಕ್ಕೆ ಬ್ರೇಕ್ ಹಾಕಿದ್ರು.

322 ರನ್ಗಳಿಸಲಷ್ಟೇ ಶಕ್ತವಾಯ್ತು ಅಂತಿಮವಾಗಿ ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 322 ರನ್ಗಳಿಸಲಷ್ಟೇ ಶಕ್ತವಾಯ್ತು. ಟೀಮ್ ಇಂಡಿಯಾ ಪರ ಶಾರ್ದೂಲ್ ಠಾಕೂರ್ 4 ವಿಕೆಟ್ ಪಡೆದು ಮಿಂಚಿದ್ರೆ, ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದ್ರು. 7 ರನ್ಗಳ ರೋಚಕ ಗೆಲುವು ದಾಖಲಿಸಿದ ಕೊಹ್ಲಿ ಪಡೆ, ಪ್ರವಾಸಿ ಇಂಗ್ಲೆಂಡ್ ತಂಡವನ್ನ 3 ಫಾರ್ಮೆಟ್ನಲ್ಲೂ ಮಣಿಸಿದ ಸಾಧನೆ ಮಾಡಿದೆ.

ಇದನ್ನೂ ಓದಿ:IND vs ENG, 3rd ODI, Highlights: ಸ್ಯಾಮ್ ಕರನ್ ಏಕಾಂಗಿ ಹೋರಾಟ ವ್ಯರ್ಥ, ಅಂತಿಮ ಓವರ್​ನಲ್ಲಿ ಗೆದ್ದು ಬೀಗಿದ ಭಾರತ

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ