AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಪ್ರಸಿದ್ಧ್​ ಕೃಷ್ಣ.. ದೇಶಿ ಕ್ರಿಕೆಟ್​ನಲ್ಲಿ ಕನ್ನಡಿಗನ ಸಾಧನೆ ಹೀಗಿದೆ!

India vs England: ಇತ್ತೀಚಿನ ವಿಜಯ್ ಹಜಾರೆ ಟ್ರೋಫಿಯಲ್ಲಿ ಪ್ರಸಿದ್ಧ್ ಕೃಷ್ಣ ಉತ್ತಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದಾರೆ. 48 ಲಿಸ್ಟ್ ಎ ಪಂದ್ಯಗಳನ್ನು ಆಡಿರುವ ಪ್ರಸಿದ್ಧ್ ಇದರಲ್ಲಿ 5.17 ರ ಸರಾಸರಿಯಲ್ಲಿ 81 ವಿಕೆಟ್ ಪಡೆದಿದ್ದಾರೆ.

India vs England: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಪ್ರಸಿದ್ಧ್​ ಕೃಷ್ಣ.. ದೇಶಿ ಕ್ರಿಕೆಟ್​ನಲ್ಲಿ ಕನ್ನಡಿಗನ ಸಾಧನೆ ಹೀಗಿದೆ!
ಪ್ರಸಿದ್ಧ್​ ಕೃಷ್ಣ
ಪೃಥ್ವಿಶಂಕರ
|

Updated on: Mar 19, 2021 | 1:25 PM

Share

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಘೋಷಿಸಲಾಗಿದೆ. ಈ ಬಾರಿ ಎರಡು ಹೊಸ ಮುಖಗಳು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿವೆ. ಈ ಇಬ್ಬರಲ್ಲಿ ಸೂರ್ಯಕುಮಾರ್ ಯಾದವ್ ಆಯ್ಕೆ ಬಹುತೇಕ ಖಚಿತವಾಗಿದ್ದರೂ, ಭಾರತದ ಎಲ್ಲ ಕ್ರಿಕೆಟ್ ಅಭಿಮಾನಿಗಳನ್ನು ಬೆಚ್ಚಿಬೀಳಿಸಿದ ಒಂದು ಹೆಸರು ಪ್ರಸಿದ್ಧ್ ಕೃಷ್ಣ. ಕರ್ನಾಟಕ ವೇಗದ ಬೌಲರ್‌ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಲಾಗಿದೆ.

ಇತ್ತೀಚಿನ ವಿಜಯ್ ಹಜಾರೆ ಟ್ರೋಫಿಯಲ್ಲಿ ಪ್ರಸಿದ್ಧ್ ಕೃಷ್ಣ ಉತ್ತಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದಾರೆ. 48 ಲಿಸ್ಟ್ ಎ ಪಂದ್ಯಗಳನ್ನು ಆಡಿರುವ ಪ್ರಸಿದ್ಧ್ ಇದರಲ್ಲಿ 5.17 ರ ಸರಾಸರಿಯಲ್ಲಿ 81 ವಿಕೆಟ್ ಪಡೆದಿದ್ದಾರೆ. ಇದಲ್ಲದೆ 9 ಪ್ರಥಮ ದರ್ಜೆ ಪಂದ್ಯಗಳಲ್ಲಿ 34 ಮತ್ತು 40 ಟಿ 20 ಪಂದ್ಯಗಳಲ್ಲಿ 33 ವಿಕೆಟ್‌ಗಳನ್ನು ಪಡೆದಿದ್ದಾರೆ. ಪ್ರಸಿದ್ಧ್ ಕೃಷ್ಣ ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ 14 ವಿಕೆಟ್ ಪಡೆದರು.

ದೇಶಿ ಪಂದ್ಯಾವಳಿಯಲ್ಲಿ ಮಿಂಚಿಂಗ್ 2015 ರಲ್ಲಿ ಬಾಂಗ್ಲಾದೇಶ ಎ ತಂಡದ ಭಾರತ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿದಾಗ 25 ವರ್ಷದ ಬೌಲರ್ ಹೆಸರು ಮೊದಲು ಬೆಳಕಿಗೆ ಬಂದಿತು. ನಂತರ ಕರ್ನಾಟಕದ ವಿರುದ್ಧ ಪ್ರಥಮ ದರ್ಜೆ ಪಂದ್ಯದಲ್ಲಿ ಬಾಂಗ್ಲಾದೇಶ ಎ ವಿರುದ್ಧ 49 ರನ್ ನೀಡಿ ಐದು ವಿಕೆಟ್ ಪಡೆದರು. ಅವರು ತಮ್ಮ ಮೊದಲ ಎಸೆತದಲ್ಲಿ ರೋನಿ ತಾಲೂಕ್ದಾರ್ ಅವರನ್ನು ಔಟ್ ಮಾಡಿದರು. ಈ ಪಂದ್ಯವನ್ನು ಕರ್ನಾಟಕ ನಾಲ್ಕು ವಿಕೆಟ್‌ಗಳಿಂದ ಜಯಗಳಿಸಿತು. ಪ್ರಸಿದ್ಧ್, 25 ಫೆಬ್ರವರಿ 2017 ರಂದು 2016-17ನೇ ಸಾಲಿನ ವಿಜಯ್ ಹಜಾರೆ ಟ್ರೋಫಿಯಲ್ಲಿ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ಇದರ ನಂತರ, 21 ಜನವರಿ 2018 ರಂದು 2017-18ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಟಿ20 ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. 2018-19ರ ವಿಜಯ್ ಹಜಾರೆ ಟ್ರೋಫಿಯಲ್ಲಿ, ಅವರು ಕರ್ನಾಟಕ ಪರ 13 ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡರು ಅದೂ 7 ಪಂದ್ಯಗಳಲ್ಲಿ.

ಐಪಿಎಲ್‌ನಲ್ಲಿನ ಸಾಧನೆ ಬಲಗೈ ವೇಗದ ಬೌಲರ್ ಪ್ರಸಿದ್ಧ ಕೃಷ್ಣ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಒಂದು ಭಾಗವಾಗಿದ್ದಾರೆ. ಈ ಲೀಗ್‌ನಲ್ಲಿ ಅವರು ಈವರೆಗೆ 24 ಪಂದ್ಯಗಳನ್ನು ಆಡಿದ್ದು, 18 ವಿಕೆಟ್‌ಗಳನ್ನು ಪಡೆದಿದ್ದಾರೆ. ಇವುಗಳಲ್ಲಿ 2018 ರ ಐಪಿಎಲ್​ನ 7 ಪಂದ್ಯಗಳಲ್ಲಿ 10 ವಿಕೆಟ್‌ಗಳು ಮತ್ತು 2019 ರ ಐಪಿಎಲ್​ನ 11 ಪಂದ್ಯಗಳಲ್ಲಿ 4 ವಿಕೆಟ್‌ಗಳು ಸೇರಿವೆ. 2020 ರ ಐಪಿಎಲ್‌ನ 13 ನೇ ಆವೃತ್ತಿಯಲ್ಲಿ 6 ಪಂದ್ಯಗಳನ್ನು ಆಡಿದ್ದು, 4 ವಿಕೆಟ್‌ಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ: India vs England: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ.. ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ!

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ