ಇಂಗ್ಲೆಂಡ್ ವಿರುದ್ಧ ನಡೆಯುವ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿರುವ ಬಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಸೀಮಿತ ಒವರ್ಗಳ ಕ್ರಿಕೆಟ್ಗೆ ಟೀಮಿನಿಂದ ಹಿಂದೆ ಕೈ ಬಿಡಲಾಗಿದ್ದ ವಿಕೆಟ್ಕೀಪರ್/ಬ್ಯಾಟ್ಸ್ಮನ್ ರಿಷಭ್ ಪಂತ್ ಅವರನ್ನು ವಾಪಸ್ಸು ತಂದಿದೆ. ಹಾಗೆಯೇ, ಐಪಿಎಲ್ 2020 ಸೀಸನ್ನಲ್ಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಸೂರ್ಯಕುಮಾರ್ ಯಾದವ್, ಇಶಾನ್ ಕಿಷನ್ ಅವರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.
ಅದೇ ಸೀಸನ್ನಲ್ಲಿ ಕೆಲ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ಗಳನ್ನಾಡಿದ ಆಲ್-ರೌಂಡರ್ ರಾಹುಲ್ ತೆವಾಟಿಯಾ ಮತ್ತು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯವರನ್ನೂ ಟೀಮಿಗೆ ಆಯ್ಕೆ ಮಾಡಲಾಗಿದೆ. ವರುಣ್ ಆಸ್ಟ್ರೇಲಿಯಾ ಪ್ರವಾಸಕ್ಕೆ ಅಯ್ಕೆಯಾಗಿದ್ದರು ಎನ್ನುವುದನ್ನು ಇಲ್ಲಿ ನೆನಪಿಸಕೊಳ್ಳಬಹುದಾಗಿದೆ. ಆದರೆ ಭುಜದ ನೋವಿನ ಸಮಸ್ಯೆಯಿಂದಾಗಿ ಅವರು ಹಿಂದೆ ಸರಿಯಬೇಕಾಗಿತ್ತು.
ರಾಹುಲ್ ತೆವಾಟಿಯಾ
ವಿಕೆಟ್ಕೀಪರ್/ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಬಿಸಿಸಿಐ ಟಿ20ಐ ಕ್ರಿಕೆಟ್ ಸರಣಿಗೆ ಇಂದು ಪ್ರಕಟಿಸಿರುವ ತಂಡ ಕೆಳಗಿನಂತಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆ ಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, (ವಿಕೆಟ್ಕೀಪರ್) ಇಶಾನ್ ಕಿಷನ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್ ಸೈನಿ ಮತ್ತು ಶಾರ್ದುಲ್ ಠಾಕೂರ್.