India vs England: ಎರಡನೇ ಟೆಸ್ಟ್ಗೆ ಆಟಗಾರರ ಪಟ್ಟಿ ರೆಡಿ.. ಗಾಯಗೊಂಡಿದ್ದ ಅಕ್ಸಾರ್ ಪಟೇಲ್ ತಂಡಕ್ಕೆ ವಾಪಸ್
India vs England: ಗಾಯದಿಂದಾಗಿ ಮೊದಲ ಟೆಸ್ಟ್ನಿಂದ ಹೊರಗುಳಿದಿದ್ದ ಅಕ್ಸಾರ್ ಪಟೇಲ್, ಗಾಯದಿಂದ ಚೇತರಿಸಿಕೊಂಡಿದ್ದು ಎಡಗೈ ಸ್ಪಿನ್ನರ್ ನದೀಮ್ ಬದಲು ತಂಡದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಗಳಿವೆ. ಹಾಗೆಯೇ ಕಳೆದ ಪಂದ್ಯದಲ್ಲಿ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳನ್ನು ಸರಿಪಡಿಸಿಕೊಂಡು ಕೊಹ್ಲಿ ನಾಯಕತ್ವದ ತಂಡ, ಇಂಗ್ಲೆಂಡ್ ಎದುರು ಸೆಣೆಸಾಡಲಿದೆ.
ಚೆನ್ನೈ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ತಮಿಳುನಾಡಿನ ಚೆಪಾಕ್ ಮೈದಾನದಲ್ಲಿ ಫೆಬ್ರವರಿ 13ರಿಂದ ಆರಂಭವಾಗಲಿದೆ. ಹೀಗಾಗಿ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ಗೆ ಎರಡು ತಂಡಗಳು ತಮ್ಮ ತಂಡದ ಸದಸ್ಯರ ಪಟ್ಟಿಯನ್ನು ಬಿಡುಗಡೆಗೊಳಿಸಿವೆ. ಈಗಾಗಲೇ ಮುಗಿದಿರುವ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ದ ಹೀನಾಯವಾಗಿ ಸೋಲನುಭವಿಸಿದೆ. ಹೀಗಾಗಿ 2ನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ. ಗಾಯದಿಂದಾಗಿ ಮೊದಲ ಟೆಸ್ಟ್ನಿಂದ ಹೊರಗುಳಿದಿದ್ದ ಅಕ್ಸಾರ್ ಪಟೇಲ್, ಗಾಯದಿಂದ ಚೇತರಿಸಿಕೊಂಡಿದ್ದು ಎಡಗೈ ಸ್ಪಿನ್ನರ್ ನದೀಮ್ ಬದಲು ತಂಡದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಗಳಿವೆ. ಹಾಗೆಯೇ ಕಳೆದ ಪಂದ್ಯದಲ್ಲಿ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳನ್ನು ಸರಿಪಡಿಸಿಕೊಂಡು ಕೊಹ್ಲಿ ನಾಯಕತ್ವದ ತಂಡ, ಇಂಗ್ಲೆಂಡ್ ಎದುರು ಸೆಣೆಸಾಡಲಿದೆ.
ಎರಡನೇ ಟೆಸ್ಟ್ಗೆ ಟೀಂ ಇಂಡಿಯಾದ ಸದಸ್ಯರ ಪಟ್ಟಿ.. ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಆಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮಹಮದ್ ಸಿರಾಜ್, ಶಾರ್ದುಲ್ ಠಾಕೂರ್.
ಎರಡನೇ ಟೆಸ್ಟ್ಗೆ ಇಂಗ್ಲೆಂಡ್ ತಂಡದ ಸದಸ್ಯರ ಪಟ್ಟಿ.. ಜೋ ರೂಟ್ (ನಾಯಕ), ಮೊಯೀನ್ ಅಲಿ, ಡೊಮ್ ಬೆಸ್, ಸ್ಟುವರ್ಟ್ ಬ್ರಾಡ್, ರೋರಿ ಬರ್ನ್ಸ್, ಜೋಸ್ ಬಟ್ಲರ್, ಜಾಕ್ ಕ್ರಾಲೆ, ಬೆನ್ ಫೋಕ್ಸ್, ಡಾನ್ ಲಾರೆನ್ಸ್, ಜ್ಯಾಕ್ ಲೀಚ್, ಬೆನ್ ಸ್ಟೋಕ್ಸ್, ಆಲಿ ಸ್ಟೋನ್, ಡೊಮ್ ಸಿಬ್ಲಿ, ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್, ಜೇಮ್ಸ್ ಆಂಡರ್ಸನ್.
Published On - 5:24 pm, Fri, 12 February 21